ಬೆಂಗಳೂರು,ಫೆ.16-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಸರ್ಕಾರಿ ನೌಕರರಿಗೆ ಮತ್ತೊಮ್ಮೆ ಮಧ್ಯಂತರ ಪರಿಹಾರದೊಂದಿಗೆ ವೇತನ ಪರಿಷ್ಕರಣೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರು 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.
ಆಡಳಿತ ಸುಧಾರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಆಡಳಿತ ಸುಧಾರಣಾ ಆಯೋಗ 2ರಡಿ ಸ್ವೀಕರಿಸಲಾದ ಶಿಫಾರಸ್ಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿ 7,214 ಸಂಸ್ಥೆಗಳ ಶಾಸನಬದ್ಧ ಸಂಸ್ಥೆಗಳ ಶಾಸನಬದ್ಧ ಲೆಕ್ಕ ಪರಿಶೋಧಕರಾಗಿರುತ್ತಾರೆ. ಇವುಗಳಲ್ಲಿ ಏಕರೂಪತೆ ತರಲು ಅಗತ್ಯ ತಿದ್ದುಪಡಿ ತರಲಾಗುವುದು ಎಂದಿದ್ದಾರೆ.
ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ
2 ಜನಸ್ಪಂದನ ಕಾರ್ಯಕ್ರಮದಿಂದ 18 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಕಾಲಮಿತಿಯಲ್ಲಿ ಅವುಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.