ಬಜೆಟ್ ಹೈಲೈಟ್ಸ್ : ಪತ್ರಿಕೋದ್ಯಮ ಉತ್ತೇಜನಕ್ಕೆ ಹೊಸ ಯೋಜನೆ

Social Share

ಬೆಂಗಳೂರು, ಮಾ.4- ಪತ್ರಿಕೋದ್ಯಮವನ್ನು ಉತ್ತೇಜಿಸಲು ಮತ್ತು ಪ್ರಾದೇಶಿಕ ಪತ್ರಿಕೆಗಳನ್ನು ಸದೃಢಗೊಳಿಸಲು ಹೊಸ ಯೋಜನೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಣಕಾಸು ಸಚಿವರಾದ ಮುಖ್ಯಮಂತ್ರಿಗಳು 2022-23ನೆ ಸಾಲಿನ ಆಯವ್ಯಯ ಮಂಡಿಸಿ, ಪತ್ರಿಕೋದ್ಯಮವನ್ನು ಉತ್ತೇಜಿಸಲು ನಿಯಮಿತವಾಗಿ 8 ಪುಟಗಳಲ್ಲಿ ಪ್ರಕಟಗೊಳ್ಳುವ ಪ್ರಾದೇಶಿಕ ಪತ್ರಿಕೆಗಳಿಗೆ ಪ್ರೋತ್ಸಾಹ ನೀಡಲಾಗುವುದು.
20 ಸಾವಿರಕ್ಕೂ ಹೆಚ್ಚು ಪ್ರಸಾರ ಹೊಂದಿದ ವರ್ಣ ಪುಟಗಳಲ್ಲಿ ಪ್ರಕಟಗೊಳ್ಳುವ ಪ್ರಾದೇಶಿಕ ಪತ್ರಿಕೆಗಳನ್ನು ಸದೃಢಗೊಳಿಸಲು ಹೊಸ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

Articles You Might Like

Share This Article