Karnataka Budget Highlights :
➤ 4 ಲಕ್ಷ ಕೋಟಿಗೂ ಅಧಿಕ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು 4 ಲಕ್ಷ ಕೋಟಿಗೂ ಅಧಿಕ ಗಾತ್ರದ 2025-26ನೇ ಸಾಲಿನ ಬಜೆಟ್ ಅನ್ನು ಮಂಡಿಸಿದರು. 16ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಮಾಡಿರುವ ಸಿದ್ದರಾಮಯ್ಯ ಯಾವುದೇ ಜನಪ್ರಿಯ ಹೊಸ ಕಾರ್ಯಕ್ರಮಗಳ ಬೆನ್ನು ಬೀಳದೆ ಅಭಿವೃದ್ಧಿ ಕೇಂದ್ರಿತ ಆಯವ್ಯಯ ಮಂಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. Read Full
➤ ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ಮೀಸಲು
ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಕಳೆದ ಎರಡು ಆಯವ್ಯಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದರ ಜೊತೆಗೆ ವಿತ್ತೀಯ ಕೊರತೆಯನ್ನು ಜಿಎಸ್‌ಡಿಪಿಯ ಶೇ.3ರ ಮಿತಿಯೊಳಗೆ ಮತ್ತು ಒಟ್ಟು ಹೊಣೆಗಾರಿಕೆಯನ್ನು ಜಿ.ಎಸ್.ಡಿ.ಪಿಯ ಶೇ.25ರ ಮಿತಿಯೊಳಗೆ ನಿಯಂತ್ರಿಸುವ ಮೂಲಕ ವಿತ್ತೀಯ ಶಿಸ್ತನ್ನು ಪಾಲಿಸಲಾಗಿದೆ ಎಂದು ತಿಳಿಸಿದರು. Read Full
➤ 3 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ
ಮೈಸೂರು ನಗರ ವ್ಯಾಪ್ತಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡವನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. Read Full
➤ ಹಂತಹಂತವಾಗಿ ಸಾರಿಗೆ ಇಲಾಖೆಯ ಎಲ್ಲಾ ದಾಖಲೆಗಳ ಡಿಜಿಟಲೀಕರಣ
ಸಾರಿಗೆ ಇಲಾಖೆಯ ಅಧೀನ ಕಚೇರಿಗಳಲ್ಲಿರುವ ಎಲ್ಲಾ ದಾಖಲೆಗಳನ್ನು ಹಂತಹಂತವಾಗಿ ಡಿಜಿಟಲೀಕರಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ 5 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿನ ದಾಖಲೆಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸುವುದಾಗಿ ತಿಳಿಸಿದ್ದಾರೆ. Read Full
➤ ಕೆಐಎಡಿಬಿ ಭೂಮಿ ಹಂಚಿಕೆಯಲ್ಲೂ ಮುಸ್ಲಿಂರಿಗೆ ಶೇ.20 ರಷ್ಟು ಮೀಸಲಾತಿ
ಅಲ್ಪಸಂಖ್ಯಾತ ಮತ್ತು ಹಿಂದುಳಿದವರ ಓಲೈಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯೂ ಮನಸು ಮಾಡಿದ್ದಾರೆ. ಗುತ್ತಿಗೆ ಕಾಮಗಾರಿ ನೀಡಿಕೆಯಲ್ಲಿನ ಮೀಸಲಾತಿ ಜೋತೆಗೆ ಕೈಗಾರಿಕಾ ಪ್ರದೇಶ ಭೂಮಿ ಹಂಚಿಕೆಯಲ್ಲೂ ಮುಸ್ಲಿಂರಿಗೆ ಶೇ.20 ರಷ್ಟು ಮೀಸಲಾತಿ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. Read Full
➤ ಅನುಗ್ರಹ ಯೋಜನೆ ಮೊತ್ತ ಹೆಚ್ಚಳ
ಜಾನುವಾರುಗಳ ಆಕಸ್ಮಿಕ ಸಾವಿನಿಂದ ರೈತರು ಅನುಭವಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿಗೆ ತರಲಾಗಿದ್ದು, ಇದರಡಿ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read Full
➤ ಕಲಾವಿದರ ಮಾಸಾಶನ 2000 ರೂ.ಗಳಿಂದ 2500 ರೂ.ಗೆ ಹೆಚ್ಚಳ
ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2000 ರೂ.ಗಳಿಂದ 2500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. Read Full
➤ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರವನ್ನು ಬಲಪಡಿಸುವ ಹೊಸ ಐಟಿ ನೀತಿ ಜಾರಿ
ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಹೊಸ ಐಟಿ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read Full
ಅಬಕಾರಿ ಇಲಾಖೆಗೆ 40000 ಕೋಟಿ ರಾಜಸ್ವ ಸಂಗ್ರಹ ಗುರಿ
ಪ್ರಸಕ್ತ 2025-26ನೇ ಸಾಲಿನಲ್ಲಿ 40,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವನಿರೀಕ್ಷಿಸಲಾಗಿದೆ. ಅದರಂತೆ 2025-26ನೇ ಸಾಲಿಗೆ 40,000 ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ ಎಂದು ಹೇಳಿದರು.Read Full
➤ ಮೈಸೂರಿನಲ್ಲಿ ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ
ರೇಷ್ಮೆ ಬೆಳೆಗಾರರ ಉತ್ತೇಜನಕ್ಕಾಗಿ ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ನಬಾರ್ಡ್ ಸಹಯೋಗದಲ್ಲಿ ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read Full
➤ ಹಿಂದುಳಿದ ವರ್ಗಗಳಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ
ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಎನ್ನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುದಿನಗಳ ಬೇಡಿಕೆಯಂತೆ ಓಬಿಸಿ ವರ್ಗಕ್ಕೂ ಗುತ್ತಿಗೆಯಲ್ಲಿ ಮೀಸಲಾತಿಯನ್ನು ಘೋಷಿಸಿದ್ದಾರೆ. ಈವರೆಗೂ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೀಮಿತವಾಗಿದ್ದ ಗುತ್ತಿಗೆ ಮೀಸಲಾತಿಯನ್ನು ಹಿಂದುಳಿದ ವರ್ಗಗಳಲ್ಲಿರುವ ಪ್ರವರ್ಗ -1, 2 ಎ ಮತ್ತು 2 ಬಿ ಸಮುದಾಯಗಳಿಗೂ ವಿಸ್ತರಿಸಲಾಗಿದೆ. Read Full
➤ ಬಾಂಬ್ ಪತ್ತೆ – ನಿಷ್ಕ್ರಿಯ ದಳ ಸ್ಥಾಪನೆ
ರಾಜ್ಯದಲ್ಲಿ ಪ್ರಸ್ತುತ ಐದು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. Read Full
➤ ‘ಬ್ರಾಂಡ್’ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸಾವಿರಾರು ಕೋಟಿ ಮೀಸಲು
ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿಯನ್ನು ಬ್ರಾಂಡ್ ಬೆಂಗಳೂರನ್ನಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ನಗರದ ವಾಹನ ದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ 40 ಸಾವಿರ ಕೋಟಿ ರೂ. ವೆಚ್ಚದಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಸುರಂಗ ಮಾರ್ಗ ಕಾರಿಡಾರ್ ಯೋಜನೆ ಕೈಗೆತ್ತಿಕೊಳ್ಳಲು 19 ಸಾವಿರ ಕೋಟಿ ರೂ.ಗಳ ಗ್ಯಾರಂಟಿಯನ್ನು ಸರ್ಕಾರದಿಂದ ಒದಗಿಸಲಾಗಿದೆ ಎಂದು ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. Read Full
➤ ಗ್ಯಾರಂಟಿಗಳು ಆರ್ಥಿಕ-ಸಾಮಾಜಿಕ ಹೂಡಿಕೆಗಳೆಂದು ಸಿಎಂ ಬಣ್ಣನೆ
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳನ್ನು ತಮ್ಮ ಬಜೆಟ್‌ನಲ್ಲಿ ಪ್ರಬಲವಾಗಿ ಸಮರ್ಥನೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇವುಗಳು ಆರ್ಥಿಕ ಮತ್ತು ಸಾಮಾಜಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು ಹೇಳಿದ್ದಾರೆ. Read Full
➤ ರಾಜಧಾನಿಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ
ರಾಜಧಾನಿ ಬೆಂಗಳೂರಿನ ಆಕರ್ಷಣೀಯ ಕೇಂದ್ರಬಿಂದುವಾದ ನಾಡಪ್ರಭು ಕೆಂಪೇಗೌಡ(ಮೆಜೆಸ್ಟಿಕ್) ಬಸ್ ನಿಲ್ದಾಣ ಇನ್ನು ಮುಂದೆ ಹೈಟೆಕ್ ಸ್ಪರ್ಶ ಪಡೆಯಲಿದೆ. Read Full
➤ಮೈಸೂರಿನಲ್ಲಿ ಹೈಟೆಕ್ ಮತ್ತ್ವ ದರ್ಶಿನಿ ಆರಂಭ
ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಠಿಕ ಮೀನಿನ ಖಾದ್ಯ ಒದಗಿಸಲು ಮೈಸೂರಿನಲ್ಲಿ ಅತ್ಯಾಧುನಿಕ ಮತ್ರ್ಯ ದರ್ಶಿನಿಯನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read Full
➤ ಬಜೆಟ್ ನಲ್ಲಿ ವಲಯವಾರು ಅನುದಾನ ವಿವರ
ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಈ ಬಾರಿ ಶಿಕ್ಷಣ ಇಲಾಖೆ, ಇಂಧನ, ನೀರಾವರಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ. ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡಿಸಲಾಗಿದೆ. Read Full
➤ 4 ಲಕ್ಷ ಕೋಟಿ ದಾಟಿದ ಸಿದ್ದರಾಮಯ್ಯ ಬಜೆಟ್ ಗಾತ್ರ
ದಾಖಲೆಯ 16ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2025-26ನೇ ಸಾಲಿನಲ್ಲಿ ಬಜೆಟ್ ಗಾತ್ರದ ಮೊತ್ತವನ್ನು 4 ಲಕ್ಷ ಕೋಟಿ 9,549.24 ರೂ.ಗೆ ಹೆಚ್ಚಿಸಿದ್ದಾರೆ. ಕಳೆದ ಬಾರಿ ಅಂದರೆ 2024-25ನೇ ಸಾಲಿನಲ್ಲಿ 3.17,383 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದರು. ಈ ಬಾರಿ ದಾಖಲೆಯ ಅಂದರೆ 4 ಲಕ್ಷ ಕೋಟಿ 9,549.24 ಮೊತ್ತದ ಬಜೆಟ್ ಮಂಡಿಸಿದ್ದಾರೆ. ಪ್ರತಿಬಾರಿಯೂ ಬಜೆಟ್ ಗಾತ್ರದ ಮೊತ್ತ ಹೆಚ್ಚುತ್ತಿರುವುದು ವಿಶೇಷವಾಗಿದೆ. Red Full
➤10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ
ರಾಜ್ಯದ ಆಯ್ದ 10 ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು 2025-26ನೇ ಸಾಲಿನಲ್ಲಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳವಾದ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್ ಎಸ್ಟೇಟ್ ಅನ್ನು ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು. Read Full
➤ ದೇಸಿ ತಳಿಗಳನ್ನು ಉಳಿಸಲು ಬಿತ್ತನೆ ಬೀಜ ಬ್ಯಾಂಕ್ ಸ್ಥಾಪನೆ
ರಾಜ್ಯದ 20 ಜಿಐ ಟ್ಯಾಗ್ ಹೊಂದಿರುವ ಬೆಳೆಗಳು ಹಾಗೂ ಇತರ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿಹೋಗುವುದನ್ನು ತಪ್ಪಿಸಲು ದೇಸಿ ತಳಿಗಳ ಬೀಜ ಬ್ಯಾಂಕ್ ಸ್ಟಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Red Full
➤ ಜವಳಿ ಹಾಗೂ ಸಿದ್ದ ಉಡುಪು ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸಲು ನೂತನ ಜವಳಿ ನೀತಿ
ರಾಜ್ಯದಲ್ಲಿ ಜವಳಿ ಹಾಗೂ ಸಿದ್ದ ಉಡುಪು ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸಲು ನೂತನ ಜವಳಿ ನೀತಿಯನ್ನು ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. Read Full
➤ ಎಸ್‌ಸಿ-ಎಸ್‌ಟಿ ಅಭಿವೃದ್ಧಿಗೆ 42 ಸಾವಿರ ಕೋಟಿ ಅನುದಾನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌ಸಿಪಿ/ಟಿಎಸ್‌ಪಿ ಅಡಿ ಒದಗಿಸಲಾಗಿದೆ. Read Full
➤ 4.4 ಬಿಲಿಯನ್ ಡಾಲರ್ ವಿದೇಶಿ ಹೂಡಿಕೆ ಆಕರ್ಷಿಸಿ ದೇಶದಲ್ಲೇ 3ನೇ ಸ್ಥಾನಕ್ಕೇರುವ ಗುರಿ
ಬೆಂಗಳೂರು, ಮಾ.7 – ಪ್ರಸಕ್ತ ಸಾಲಿನ ಅಂತ್ಯದ ವೇಳೆಗೆ ರಾಜ್ಯದಲ್ಲಿ 4.4 ಬಿಲಿಯನ್ ಡಾಲರ್ ವಿದೇಶಿ ಹೂಡಿಕೆ ಆಕರ್ಷಿಸುವುದರೊಂದಿಗೆ ದೇಶದಲ್ಲೇ ಮೂರನೇ ಸ್ಥಾನಕ್ಕೆ ಬರುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read Full
➤ ಕೃಷಿ ಕ್ಷೇತ್ರಕ್ಕೆ ಹೈಟೆಕ್ ಟಚ್, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ
ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ದಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರಗಳಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read Full
➤ ಮೈಸೂರಿನಲ್ಲಿ ಅಂದಾಜು 500 ಕೋಟಿ ವೆಚ್ಚದಲ್ಲಿ ಚಿತ್ರನಗರಿ ನಿರ್ಮಾಣ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಂದಾಜು 500 ಕೋಟಿ ವೆಚ್ಚದಲ್ಲಿ ಮುಂದಿನ ವರ್ಷ 150 ಎಕರೆ ಜಮೀನಿನಲ್ಲಿ ಚಿತ್ರನಗರಿಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. Read Full
➤ಆರೋಗ್ಯ ಇಲಾಖೆಗೆ 17,473 ಕೋಟಿ ಮೀಸಲು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರೋಗ್ಯ ವಲಯಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ 17,473 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.ಆರೋಗ್ಯವಂತ ಜನರಿಂದ ಮಾತ್ರ ಸಮತೋಲಿತ ಸಮಾಜ ನಿರ್ಮಾಣ ಸಾಧ್ಯ. ಎಲ್ಲಾ ವಯೋಮಾನದವರಿಗೂ ವರ್ಗಬೇಧವಿಲ್ಲದೇ, ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸಲು ನಾವು ಬದ್ಧರಾಗಿದ್ದೇವೆ. ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕಿಳಿಸುವುದು ನಮ ಸಂಕಲ್ಪವಾಗಿದೆ ಎಂದರು. Read More
➤1.16 ಲಕ್ಷ ಕೋಟಿ ಸಾಲ
ಬೆಂಗಳೂರು,ಮಾ.7- ವಿಧಾನಸಭೆಯ ಲ್ಲಿಂದು 4.09 ಲಕ್ಷ ಕೋಟಿ ರೂ.ಗಳ ಗಾತ್ರದ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 1.16 ಲಕ್ಷ ಕೋಟಿ ಸಾಲ ಮಾಡುವುದಾಗಿ ತಿಳಿಸಿದ್ದಾರೆ.
ಬಜೆಟ್‌ನಲ್ಲಿನ ಅಂಶವೆಂದರೆ, ಈ ಬಾರಿ ಬಂಡವಾಳ ವೆಚ್ಚವನ್ನು 71,336 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. 26,474 ಕೋಟಿಗಳನ್ನು ಸಾಲ ಮರುಪಾವತಿಗಾಗಿ ನಿಗದಿ ಮಾಡಲಾಗಿದೆ.
➤ಕಾಲ ಮಿತಿಯಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಭರವಸೆ ನೀಡಿದರು. Read Full
➤ಅಲ್ಪ ಸಂಖ್ಯಾತರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ತಮ 16ನೇ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದು, ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡುವುದಾಗಿ ತಿಳಿಸಿದ್ದಾರೆ. Read Full
➤ಆಸ್ತಿಗಳ ನಿಖರ ಮೌಲ್ಯಮಾಪನಕ್ಕೆ ಇ-ಖಾತಾ ವ್ಯವಸ್ಥೆ
ನೋಂದಣಿಯ ವೇಳೆ ಆಸ್ತಿಗಳ ಮೌಲ್ಯ ಕಡಿಮೆ ಮಾಡು ವುದನ್ನು ನಿಯಂತ್ರಿಸಲು ಇ ಖಾತಾ ವ್ಯವಸ್ಥೆಯನ್ನು ಪರಿಚಯಿ ಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಹಣಕಾಸು ಇಲಾಖೆಯನ್ನು ಹೊಂದಿರುವ ಅವರು, ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಇ ಖಾತಾ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ಆಸ್ತಿ ವಂಚನೆ ಮತ್ತು ತೆರಿಗೆ ತಪ್ಪಿಸಲು ಮೌಲ್ಯ ಕಡಿಮೆ ಮಾಡುವುದು ನಿಯಂತ್ರಣವಾಗಲಿದೆ. ಮೌಲ್ಯಮಾಪನ ಮಾಡುವ ಆಸ್ತಿಗಳನ್ನು ಮೌಲ್ಯಮಾಪನ ಜಾಲಕ್ಕೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ದಾಖಲೆಗಳನ್ನು ನೋಂದಾಯಿಸುವಾಗ ವಂಚನೆ ಮತ್ತು ದುರುಪಯೋಗವನ್ನು ತಡೆಗಟ್ಟಲು ಪ್ರಸಕ್ತ ವರ್ಷದಿಂದ ನೋಂದಾಯಿಸಲಾಗದ ದಾಖಲೆಗಳಿಗೆ ಡಿಜಿಟಲ್ ಇ ಸ್ಟ್ಯಾಂಪಿಂಗ್ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ.
ಅನೇಕ ಸ್ಥಳಗಳಲ್ಲಿ ಒಂದು ಆಸ್ತಿಯಿಂದ ಇನ್ನೊಂದು ಆಸ್ತಿಯ ಮಾರ್ಗಸೂಚಿ ಮೌಲ್ಯದಲ್ಲಿನ ವ್ಯತ್ಯಾಸಗಳನ್ನು ಸರಿಪಡಿಸಲು ಜಿಐಎಸ್ ತಂತ್ರಜ್ಞಾನ ಬಳಸಿಕೊಂಡು ಮಾರ್ಗಸೂಚಿ ಮೌಲ್ಯವನ್ನು ವೈಜ್ಞಾನಿಕವಾಗಿ ನಿರ್ಧರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಮುದ್ರಾಂಕ ಇಲಾಖೆಯಿಂದ ಕಳೆದ ವರ್ಷ 24 ಸಾವಿರ ಕೋಟಿ ಆದಾಯ ಸಂಗ್ರಹಿಸಿದ್ದು, ಮುಂದಿನ ವರ್ಷ 28 ಸಾವಿರ ಕೋಟಿ ರೂ.ಗಳ ಗುರಿ ನಿಗದಿಪಡಿಸಿದ್ದಾರೆ.ಅದೇ ರೀತಿ ಮೋಟಾರು ವಾಹನ ತೆರಿಗೆಯಿಂದ 12,500 ಕೋಟಿ ರೂ.ಗಳನ್ನು ಚಾಲ್ತಿ ಆರ್ಥಿಕ ವರ್ಷದಲ್ಲಿ ನಿರೀಕ್ಷಿಸಲಾಗಿದ್ದು, ಮುಂದಿನ ಅವಧಿಗೆ 15 ಸಾವಿರ ಕೋಟಿ ರೂ. ಗಳ ಗುರಿ ನಿಗದಿಯಾಗಿದೆ.
➤ಮನಮೋಹನ್‌ಸಿಂಗ್ ವಿವಿಯಾಗಲಿದೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯ
ಬೆಂಗಳೂರು ನಗರ ವಿಶ್ವವಿದ್ಯಾನಿಲಯವನ್ನು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. Read Full
ಬಜೆಟ್‌ನ ಒಟ್ಟು ಗಾತ್ರ 4,09,549 ಕೋಟಿ ರೂ.ಗಳಾಗಿದ್ದು, ಇದರಲ್ಲಿ 3,11,739 ಕೋಟಿ ರೂ.ಗಳು ಸಂಬಳ ಹಾಗೂ ಇತರೆ ಖರ್ಚುಗಳ ರಾಜಸ್ವ ವೆಚ್ಚಕ್ಕೆ ಬಳಕೆಯಾಗುತ್ತಿದೆ. ಬಂಡವಾಳ ವೆಚ್ಚ ಹಾಗೂ ಸಾಲ ಮರುಪಾವತಿಗೆ 97,810 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ.2,92,477 ಕೋಟಿ ರಾಜಸ್ವ ಸಂಗ್ರಹ ಅಂದಾಜಿಸಲಾಗಿದ್ದು, ಇದರಲ್ಲಿ 2,08,100 ಕೋಟಿ ರೂ.ಗಳ ಸ್ವಂತ ತೆರಿಗೆ ರಾಜಸ್ವ 15,500 ಕೋಟಿ ತೆರಿಗೆಯೇತರ ರಾಜಸ್ವ ಮತ್ತು ಕೇಂದ್ರ ಸರ್ಕಾರದ ಸ್ವೀಕೃತಿಯಿಂದ 67,877 ಕೋಟಿ ಸಂಪನೂಲ ಬರುವ ನಿರೀಕ್ಷೆ ಇದೆ.
1.16 ಲಕ್ಷ ಕೋಟಿ ಸಾಲ, 170 ಕೋಟಿ ಋಣೇತರ ಬಂಡವಾಳ ಸ್ವೀಕೃತಿ ಜೊತೆಗೆ ಒಟ್ಟು 4,08,647 ಕೊಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿದೆ.ಮುಂದಿನ ಆರ್ಥಿಕ ವರ್ಷದಲ್ಲಿ 19,262 ಕೋಟಿ ರೂ.ಗಳ ರಾಜಸ್ವ ಕೊರತೆಯನ್ನು ಅಂದಾಜಿಸಲಾಗಿದ್ದು, ಇದು ಜಿಎಸ್‌ಡಿಪಿಯ ಶೇ.0.63 ರ ಅಂದಾಜಿನ ಒಳಗಿದೆ ಎಂದು ತಿಳಿಸಿದ್ದಾರೆ.
ವಿತ್ತೀಯ ಕೊರತೆಯನ್ನು 90,428 ಕೋಟಿ ರೂ.ಗಳೆಂದು ಲೆಕ್ಕ ಹಾಕಿರುವ ಸಿದ್ದರಾಮಯ್ಯನವರು ಶೇ.2.95 ರೊಳಗೆ ವಿತ್ತೀಯ ಕೊರತೆಯನ್ನು ನಿಯಂತ್ರಿಸಿರುವುದಾಗಿ ಹೇಳಿಕೊಂಡಿದ್ದಾರೆ.1.16 ಲಕ್ಷ ಕೋಟಿ ಪ್ರಸಕ್ತ ಸಾಲಿನ ಸಾಲವನ್ನೂ ಒಳಗೊಂಡಂತೆ 2026 ರ ಮಾರ್ಚ್‌ಗೆ ರಾಜ್ಯದ ಒಟ್ಟು ಹೊಣೆಗಾರಿಕೆಯ ಗಾತ್ರ 7,64,665 ಕೋಟಿ ರೂ.ಗಳಾಗಬಹುದು ಎಂದು ಅಂದಾಜಿಸಿದ್ದಾರೆ.
ನಿಯಮದ ಪ್ರಕಾರ, ಒಟ್ಟು ಜಿಎಸ್‌ಡಿಪಿಯ ಶೇ.25 ರೊಳಗೆ ಸಾಲದ ಮಿತಿ ಇರಬೇಕಿದೆ. ಒಟ್ಟು ಹೊಣೆಗಾರಿಕೆ ಶೇ.24.91 ರಷ್ಟಿದ್ದು, ಕರ್ನಾಟಕ ವಿತ್ತೀಯ ಕೊರತೆ ಮತ್ತು ಆರ್ಥಿಕ ಹೊಣೆಗಾರಿಕೆಯನ್ನು ಅಧಿನಿಯಮದ ಮಾನದಂಡದನುಸಾರ ಆರ್ಥಿಕ ಶಿಸ್ತನ್ನು ಕಾಯ್ದುಕೊಂಡಿದೆ ಎಂದು ತಿಳಿಸಿದ್ದಾರೆ.ಬಜೆಟ್ ಮಂಡನೆಯಲ್ಲಿ ಲೇಖಾನುದಾನದ ಬದಲಿಗೆ ಪೂರ್ಣ ಬಜೆಟ್‌ಗೆ ಅಂಗೀಕಾರ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
ಕಳೆದ ವರ್ಷ 3.71 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಷ್ಕೃತ ಅಂದಾಜಿನಲ್ಲಿ 3,65,865 ಕೋಟಿ ರೂ.ಗಳ ವೆಚ್ಚವನ್ನು ಅಂದಾಜಿಸಿದ್ದಾರೆ. ಇದರಲ್ಲಿ 2,83,928 ಕೋಟಿ ರೂ. ರಾಜಸ್ವ ವೆಚ್ಚವಾಗಿದ್ದರೆ 81,937 ಕೋಟಿ ರೂ. ಬಂಡವಾಳ ವೆಚ್ಚವನ್ನು ನಿರೀಕ್ಷಿಸಿದ್ದಾರೆ. ಹಿಂದಿನ ಸಾಲಿಗೆ ಹೋಲಿಸಿದರೆ ಈ ವರ್ಷ 10 ಸಾವಿರ ಕೋಟಿ ಬಂಡವಾಳ ವೆಚ್ಚ ತಗ್ಗಿರುವುದು ಆತಂಕ ಮೂಡಿಸಿದೆ.

➤ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಘೋಷಣೆ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. Read full
➤ಆಸ್ತಿಗಳ ನಿಖರ ಮೌಲ್ಯಮಾಪನಕ್ಕೆ ಇ-ಖಾತಾ ವ್ಯವಸ್ಥೆ
ಬೆಂಗಳೂರು,ಮಾ.7- ನೋಂದಣಿಯ ವೇಳೆ ಆಸ್ತಿಗಳ ಮೌಲ್ಯ ಕಡಿಮೆ ಮಾಡು ವುದನ್ನು ನಿಯಂತ್ರಿಸಲು ಇ ಖಾತಾ ವ್ಯವಸ್ಥೆಯನ್ನು ಪರಿಚಯಿ ಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಹಣಕಾಸು ಇಲಾಖೆಯನ್ನು ಹೊಂದಿರುವ ಅವರು, ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಇ ಖಾತಾ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ಆಸ್ತಿ ವಂಚನೆ ಮತ್ತು ತೆರಿಗೆ ತಪ್ಪಿಸಲು ಮೌಲ್ಯ ಕಡಿಮೆ ಮಾಡುವುದು ನಿಯಂತ್ರಣವಾಗಲಿದೆ.
ಮೌಲ್ಯಮಾಪನ ಮಾಡುವ ಆಸ್ತಿಗಳನ್ನು ಮೌಲ್ಯಮಾಪನ ಜಾಲಕ್ಕೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ದಾಖಲೆಗಳನ್ನು ನೋಂದಾಯಿಸುವಾಗ ವಂಚನೆ ಮತ್ತು ದುರುಪಯೋಗವನ್ನು ತಡೆಗಟ್ಟಲು ಪ್ರಸಕ್ತ ವರ್ಷದಿಂದ ನೋಂದಾಯಿಸಲಾಗದ ದಾಖಲೆಗಳಿಗೆ ಡಿಜಿಟಲ್ ಇ ಸ್ಟ್ಯಾಂಪಿಂಗ್ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ.ಅನೇಕ ಸ್ಥಳಗಳಲ್ಲಿ ಒಂದು ಆಸ್ತಿಯಿಂದ ಇನ್ನೊಂದು ಆಸ್ತಿಯ ಮಾರ್ಗಸೂಚಿ ಮೌಲ್ಯದಲ್ಲಿನ ವ್ಯತ್ಯಾಸಗಳನ್ನು ಸರಿಪಡಿಸಲು ಜಿಐಎಸ್ ತಂತ್ರಜ್ಞಾನ ಬಳಸಿಕೊಂಡು ಮಾರ್ಗಸೂಚಿ ಮೌಲ್ಯವನ್ನು ವೈಜ್ಞಾನಿಕವಾಗಿ ನಿರ್ಧರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮುದ್ರಾಂಕ ಇಲಾಖೆಯಿಂದ ಕಳೆದ ವರ್ಷ 24 ಸಾವಿರ ಕೋಟಿ ಆದಾಯ ಸಂಗ್ರಹಿಸಿದ್ದು, ಮುಂದಿನ ವರ್ಷ 28 ಸಾವಿರ ಕೋಟಿ ರೂ.ಗಳ ಗುರಿ ನಿಗದಿಪಡಿಸಿದ್ದಾರೆ. ಅದೇ ರೀತಿ ಮೋಟಾರು ವಾಹನ ತೆರಿಗೆಯಿಂದ 12,500 ಕೋಟಿ ರೂ.ಗಳನ್ನು ಚಾಲ್ತಿ ಆರ್ಥಿಕ ವರ್ಷದಲ್ಲಿ ನಿರೀಕ್ಷಿಸಲಾಗಿದ್ದು, ಮುಂದಿನ ಅವಧಿಗೆ 15 ಸಾವಿರ ಕೋಟಿ ರೂ. ಗಳ ಗುರಿ ನಿಗದಿಯಾಗಿದೆ.
➤ಬೆಂಗಳೂರು ನಗರದಲ್ಲಿ ಇನ್ನೂ 3 ನೂತನ ಪೊಲೀಸ್ ವಿಭಾಗ ಸ್ಥಾಪನೆ
ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ ಬೆಂಗಳೂರು ನಗರದಲ್ಲಿ ಈಗಿರುವ 8 ಪೊಲೀಸ್ ವಿಭಾಗಗಳನ್ನು 11 ವಿಭಾಗಗಳಾಗಿ ಹೆಚ್ಚಿಸಲಾಗುವುದೆಂದು ಸಿಎಂ ಸಿದ್ದರಾಮಯ್ಯ ತಮ ಬಜೆಟ್ ಭಾಷಣದಲ್ಲಿ ತಿಳಿಸಿದರು.ಬೆಂಗಳೂರು ಸೇಫ್ ಸಿಟಿ ಯೋಜನೆಯನ್ನು 667ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನ ಗೊಳಿಸಲಾಗಿದ್ದು, ಯೋಜನೆಯ ಭಾಗವಾಗಿ ನಗರದಾದ್ಯಂತ
ಒಟ್ಟು 7500 ಕ್ಯಾಮರಾಗಳನ್ನು ಅಳವಡಿಸಿದ್ದು, 10 ಡ್ರೋನ್‌ಗಳನ್ನು ಮತ್ತು 560 ಬಾಡಿ ವೋರ್ನ್ ಕ್ಯಾಮರಾಗಳನ್ನು ಒದಗಿಸಲಾಗಿರುತ್ತದೆ ಎಂದರು.
ಸಾರ್ವಜನಿಕವಾಗಿ ಮಹಿಳೆಯರಿಗೆ ಭದ್ರತೆಯ ವಿಶ್ವಾಸವನ್ನು ಮೂಡಿಸುವ ಜೊತೆಗೆ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಕೂಡಲೇ ಪೊಲೀಸ್ ನೆರವನ್ನು ಒದಗಿಸುವ ಉದ್ದೇಶದಿಂದ ನಗರದಾದ್ಯಂತ ಒಟ್ಟು 60 ಮಹಿಳಾ ಔಟ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿರುತ್ತದೆ ಎಂದು ಅವರು ಹೇಳಿದರು. ಏಳು ಪೊಲೀಸ್ ಠಾಣೆ ಮತ್ತು ಕಚೇರಿ ಕಟ್ಟಡಗಳನ್ನು ಪೂರ್ಣಗೊಳಿಸಿ ಲೋಕಾ ರ್ಪಣೆಗೊಳಿಸಲಾಗುವುದು, ಅಲ್ಲದೇ 12 ಪೊಲೀಸ್ ಠಾಣೆ, ಒಂದು ಉಪವಿಭಾಗ ಕಚೇರಿ, ಎರಡು ವೃತ್ತ ಕಚೇರಿ ಮತ್ತು ಒಂದು ಹೊರ ಠಾಣೆ ಕಟ್ಟಡಗಳ ನಿರ್ಮಾಣವನ್ನು 30 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಅವುಗಳನ್ನು ಶ್ರೀಘ್ರವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದರು.
➤ ಸಣ್ಣ ನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿ
ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಾದ ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್, ಕಿಂಡಿ ಅಣೆಕಟ್ಟು, ಏತ ನೀರಾವರಿ, ನಿಷ್ಕ್ರಿಯ ಯೋಜನೆಗಳ ಪುನರುಜ್ಜೀವನ ಇತ್ಯಾದಿ ಯೋಜನೆಗಳಡಿ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು.2025-26ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದರು.
ಪ್ರಗತಿಯಲ್ಲಿರುವ 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ, 70 ಕೋಟಿ ರೂ. ಮೊತ್ತದ ಹೆಚ್.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 24 ಕೆರೆ ತುಂಬಿಸುವ ಯೋಜನೆ, 93.50 ಕೋಟಿ ರೂ. ಮೊತ್ತದ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸುವ ಭರವಸೆ ನೀಡಿದರು.
ಕಾನೂನು ಇಲಾಖೆ ದಾಖಲೆ ಸಂಗ್ರಹಕ್ಕೆ ಸ್ಮಾರ್ಟ್ ಸಿಸ್ಟಂ
ರಾಜ್ಯದ ನ್ಯಾಯಾಲಯಗಳ ಕಾರ್ಯ ಕಲಾಪಗಳ ಪ್ರತಿಲೇಖನ, ನ್ಯಾಯಾಂಗ ದಾಖಲೆಗಳ ಅನುವಾದ ಮತ್ತಿತರ ಮಾಹಿತಿ ಪಡೆಯಲು 2 ಕೋಟಿ ರೂ. ವೆಚ್ಚದಲ್ಲಿ ಸಾರ್ಟ್ ಸಿಸ್ಟಮ್ ಅನುಷ್ಠಾನಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ ಬಜೆಟ್‌ನಲ್ಲಿ ಕಾನೂನು ಇಲಾಖೆಯ ಬಗ್ಗೆ ಪ್ರಸ್ತಾಪಿಸಿದ್ದು, ರಾಜ್ಯ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿನ ಗ್ರಂಥಾಲಯ ಮೇಲ್ದರ್ಜೆಗೇರಿಸಲು ಮತ್ತು ಡಿಜಿಟಲ್ ಗ್ರಂಥಾಲಯ ಪ್ರಾರಂಭಿಸಲು 2 ಕೋಟಿ ರೂ. ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ, ನಿಯಮಗಳು ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವೋಕೇಟ್ ಜನರಲ್ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವುದಾಗಿ ತಿಳಿಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂ ಸ್ವಾಧೀನ ಕುರಿತ ತಗಾದೆಗಳ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲು ಬಾಗಲಕೋಟೆಯಲ್ಲಿ ವಿಶೇಷ ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.ಕೊಪ್ಪಳ ಜಿಲ್ಲೆಯ ನೂತನ ನ್ಯಾಯಾಲಯ ಸಂಕೀರ್ಣಕ್ಕೆ 50 ಕೋಟಿ, ಕುಕನೂರು ಮತ್ತು ಕಾರಟಗಿ ತಾಲ್ಲೂಕಿನಲ್ಲಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತಲಾ 9 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನೀಡುವುದಾಗಿ ತಿಳಿಸಿದ್ದಾರೆ.
➤ ದೇಶದಲ್ಲೇ ಅತಿಹೆಚ್ಚು ಬಜೆಟ್ ಮಂಡಿಸಿದ 2ನೇ ಸಿಎಂ : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಸಕ್ತ 2025-26ನೇ ಸಾಲಿನ ಆಯವ್ಯಯವನ್ನು ಮಂಡಿಸುವ ಮೂಲಕ ದೇಶದಲ್ಲೇ ಅತಿಹೆಚ್ಚು ಬಜೆಟ್ ಮಂಡಿಸಿದ 2ನೇ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ರಾಜ್ಯಪಾಲರಾಗಿದ್ದ ಗುಜರಾತ್‌ನ ಹಣಕಾಸು ಸಚಿವ ವಜುಬಾಯಿ ವಾಲಾ ಅವರು ಅಲ್ಲಿನ ಹಣಕಾಸು ಸಚಿವರಾಗಿದ್ದ ವೇಳೆ 18 ಬಜೆಟ್ ಮಂಡಿಸಿದ ದಾಖಲೆ ಅವರ ಹೆಸರಿನಲ್ಲಿದೆ. ಇದನ್ನು ಬಿಟ್ಟರೆ ದೇಶದಲ್ಲಿ 2ನೇ ಅತಿಹೆಚ್ಚು ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ.
ಈ ಹಿಂದೆ ಅಂದರೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು 13 ಬಜೆಟ್ ಮಂಡಿಸಿದ್ದರು. ಆ ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರು ಇದೀಗ 16 ಬಜೆಟ್ ಮಂಡಿಸಿದ ಏಕೈಕ ಹಣಕಾಸು ಸಚಿವರೆಂಬ ಕೀರ್ತಿಗೆ ಭಾಜನರಾಗಿದ್ದಾರೆ. 1994ರಲ್ಲಿ ಮೊದಲ ಬಾರಿಗೆ ಜನತಾದಳ ಅಧಿಕಾರದಲ್ಲಿದ್ದಾಗ ಹಣಕಾಸು ಖಾತೆ ಹೊಂದಿದ್ದ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿ ಗಮನಸೆಳೆದಿದ್ದರು. ಆದಾದ ಬಳಿಕ ಮತ್ತೊಂದು ಬಜೆಟ್ ಮಂಡನೆ ಮಾಡಿದರು.
ಅಂದು ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ದೇವೇಗೌಡರಿಗೆ ಪ್ರಧಾನಿ ಹುದ್ದೆ ಲಭಿಸಿದ್ದರಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಬಳಿಕ ಜೆ.ಎಚ್.ಪಟೇಲ್ ಅವರು ಸಿಎಂ ಆಗಿ, ಸಿದ್ದರಾಮಯ್ಯನವರು ಡಿಸಿಎಂ ಹುದ್ದೆಗೆ ಬಡ್ತಿ ಪಡೆದು ಬಜೆಟ್ ಮಂಡನೆ ಮಾಡಿದ್ದರು.2004ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ಧರ್ಮಸಿಂಗ್ ಮುಖ್ಯಮಂತ್ರಿಯಾದರೆ ಸಿದ್ದರಾಮಯ್ಯನವರು ಡಿಸಿಎಂ ಆಗಿದ್ದರು. ಆ ವೇಳೆಯೂ ಎರಡು ಬಜೆಟ್ ಮಂಡನೆ ಮಾಡಿದ್ದರು.
ನಂತರ 2013ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಸತತ 5 ವರ್ಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. 2023ರಲ್ಲಿ ಕಾಂಗ್ರೆಸ್ ಪುನಃ ಜನಾದೇಶ ಪಡೆದು ಅಧಿಕಾರ ಹಿಡಿದಾಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವುದರ ಜೊತೆಗೆ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡು ಎರಡು ಬಾರಿ ಬಜೆಟ್ ಮಂಡಿಸಿದ್ದರು.
ಇದೀಗ ಮತ್ತೊಂದು ಬಜೆಟ್ ಮಂಡಿಸುವ ಮೂಲಕ ಕರ್ನಾಟಕದಲ್ಲಿ 16 ಬಜೆಟ್ ಮಂಡಿಸಿದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆ ಗೆ ಪಾತ್ರರಾಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದ ರಾಮಕೃಷ್ಣ ಹೆಗಡೆ, ವೀರಪ್ಪ ಮೊಯ್ಲಿ, ಕೆಂಗಲ್ ಹನುಮಂತಯ್ಯ, ಎಸ್.ಆರ್.ಕಂಠಿ, ಎಸ್.ಬಂಗಾರಪ್ಪ, ಎಸ್.ಎಂ.ಕೃಷ್ಣ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್ ಹಾಗೂ ಹಣಕಾಸು ಸಚಿವರಾಗಿದ್ದ ಎಂ.ವೈ.ಗೋರ್ಪಡೆ, ಎಂ.ವಿ.ರಾಜಶೇಖರ್ ಮೂರ್ತಿ ಬಜೆಟ್ ಮಂಡಿಸಿದ್ದರು.