ಬೆಂಗಳೂರು,ಫೆ.8- ವರ್ಷದ ಮೊದಲ ಜಂಟಿ ಅಧಿವೇಶನ ಶುಕ್ರವಾರ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಕ್ಸಮರಕ್ಕೆ ವೇದಿಕೆಯಾಗಲಿದೆ.
ಶುಕ್ರವಾರ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸದನವನ್ನು ಶಿಷ್ಟಾಚಾರದಂತೆ ಸೋಮವಾರಕ್ಕೆ ಮುಂದೂಡಲಿದ್ದಾರೆ.
ನಂತರ ಸೋಮವಾರ ರಾಜ್ಯಪಾಲರ ಭಾಷಣಕ್ಕೆ ಮೇಲೆ ಚರ್ಚೆ ನಡೆಯಲಿದೆ. ಸರ್ಕಾರದ ಮೇಲೆ ಕೇಳಿಬಂದಿರುವ ಕೆಲವು ಭ್ರಷ್ಟಾಚಾರದ ಆರೋಪಗಳ ಕುರಿತು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಗಿಬೀಳಲು ಸಜ್ಜಾಗಿವೆ.
ಗುತ್ತಿಗೆದಾರರ ಸಂಘ ಸರ್ಕಾರದ ಮೇಲೆ ಆರೋಪಿಸಿರುವ 40% ಕಮೀಷನ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿಡಿಸಿರುವ ಬ್ರಾಹ್ಮಣ ಸಿಎಂ ಹೇಳಿಕೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಸೂಲಿ, ಸ್ಯಾಂಟ್ರೊ ರವಿ ಪ್ರಕರಣ ಸೇರಿದಂತೆ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಪರಿಸರ ಸ್ನೇಹಿ ಧರಿಸಿನೊಂದಿಗೆ ಸಂಸತ್ ಕಲಾಪದಲ್ಲಿ ಪ್ರಧಾನಿ ಭಾಗಿ
ಇದು ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಆಗಿರುವುದರಿಂದ ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳ ಬಗ್ಗೆ ಬೆಳಕು ಚೆಲ್ಲಲು ತುದಿಗಾಲಲ್ಲಿ ನಿಂತಿದೆ. ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಹಾಗೂ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಮುಂದುವರೆಸಲು 8 ಸಾವಿರ ಕೋಟಿ ಅನುದಾನ ಹೊರತುಪಡಿಸಿದರೆ ಕೇಂದ್ರದ ಆಯವ್ಯಯದಲ್ಲಿ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸಿಕ್ಕಂತಾಗಿದೆ ಎಂದು ಕಾಂಗ್ರೆಸ್, ಜೆಡಿಎಸ್ ದೂರಿವೆ.
ಅಲ್ಲದೆ ದೇಶದಲ್ಲೇ ಅತಿಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳ ಪೈಕಿ ಕರ್ನಾಟಕ 2ನೇ ರಾಜ್ಯವಾಗಿದೆ. ರಾಜ್ಯದ ಪಾಲಿನ ಸುಮಾರು 13 ಸಾವಿರ ಕೋಟಿ ಜಿಎಸ್‍ಟಿ ಹಣವನ್ನು ಬಿಡುಗಡೆ ಮಾಡದಿರುವುದು ಚರ್ಚೆಗೆ ಬರಲಿದೆ.
ಅತಿಹೆಚ್ಚು ತೆರಿಗೆ ಸಂದಾಯವಾದರೂ ಕೇಂದ್ರ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡುವಲ್ಲೂ ತಾರತಮ್ಯ ಎಸಗಿದೆ ಎಂಬ ಆಪಾದನೆ ಕೇಳಿಬಂದಿದೆ.
ಕರ್ನಾಟಕಕ್ಕೆ ಒಂದೇ ಒಂದು ಪೈಸಾವನ್ನು ಕೂಡ ಬಿಡುಗಡೆ ಮಾಡದಿರುವುದು ಪ್ರತಿಪಕ್ಷಗಳ ಆರೋಪಕ್ಕೆ ಮತ್ತೊಂದು ಅಸ್ತ್ರ ನೀಡಿದಂತಾಗಿದೆ. ಹೀಗೆ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಸಜ್ಜಾಗಿವೆ. ಪ್ರತಿಪಕ್ಷಗಳ ತಂತ್ರಕ್ಕೆ ಆಡಳಿತಾರೂಢ ಬಿಜೆಪಿ ಸರ್ಕಾರ ಪ್ರತ್ಯಾಸ್ತ್ರ ಹೂಡಿದೆ.
ಸದನದ ಒಳಗೆ ಹಾಗೂ ಹೊರಗೆ ಕೈಗೊಳ್ಳುವ ಹೋರಾಟಗಳು ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೆಲವು ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ನಡೆಸುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುವ ವಿಚಾರವಾಗಿ ಕೈ ನಾಯಕರು ಚರ್ಚಿಸಲಿದ್ದಾರೆ.
ವಿಧಾನಸಭೆ ಹಾಗೂ ವಿಧಾನ ಪರಿಷತ್‍ಲ್ಲಿ ಯಾವ್ಯಾವ ನಾಯಕರು ಯಾವ ವಿಚಾರದ ಕುರಿತು ತಮ್ಮ ವಿಚಾರ ಮಂಡಿಸಬೇಕು ಎಂಬುದನ್ನೂ ಸಹ ನಿರ್ಧರಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಯೋಚಿಸಿದ್ದಾರೆ.
2023ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ರಾಜ್ಯ ಸರ್ಕಾರ ಈ ಸಾರಿಯ ಬಜೆಟ್ ಮಂಡಿಸಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಖರ್ಚು ವೆಚ್ಚಗಳು ಹಾಗೂ ಸಾಲದ ಹೊರೆಯ ನಡುವೆ ಜನಪ್ರಿಯ ಘೋಷಣೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂಬ ವಾದ ಮಂಡಿಸಲು ತೀರ್ಮಾನಿಸಿವೆ.
ಚುನಾವಣೆಗೆ ಬಿಜೆಪಿ ತಯಾರಿ: ಪ್ರಣಾಳಿಕೆ, ಪ್ರಚಾರಕ್ಕಾಗಿ ಉಸ್ತುವಾರಿಗಳ ನೇಮಕ
2018ರ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 600ಕ್ಕೂ ಹೆಚ್ಚು ಬೇಡಿಕೆಗಳಲ್ಲಿ ಶೇ 10ರಷ್ಟು ಬೇಡಿಕೆಯನ್ನೂ ಸಹ ಇದುವರೆಗೂ ಈಡೇರಿಸಿಲ್ಲ. ಈ ವಿಚಾರವನ್ನು ಅಧಿವೇಶನದಲ್ಲಿ ದೊಡ್ಡ ಹೋರಾಟದ ರೂಪದಲ್ಲಿ ಕೈಗೆತ್ತಿಕೊಳ್ಳಲು ಮುಂದಾಗಿವೆ.
ಚುನಾವಣೆ ಸಂದರ್ಭದಲ್ಲಿ ಯಾವುದೇ ಭಾವನಾತ್ಮಕ ವಿಚಾರ ಇಲ್ಲವೇ, ಯಾವುದೇ ನಾಯಕರ ವಿರುದ್ಧ ವೈಯಕ್ತಿಕ ಅವಹೇಳನ ಮಾಡಿ ಜನರ ವಿಶ್ವಾಸ ಕಳೆದುಕೊಳ್ಳಬಾರದು. ಪ್ರತಿಯೊಬ್ಬ ನಾಯಕರು ಯಾವ ರೀತಿಯಲ್ಲಿ ಮಾತನಾಡಬೇಕು ಎಂಬ ಕುರಿತು ಸದ್ಯದಲ್ಲೇ ಸಭೆ ನಡೆಸುವ ಸಾಧ್ಯತೆ ಇದೆ.
ಇತ್ತೀಚೆಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಇದು 40ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಗಂಭೀರವಾಗಿ ಆರೋಪಿಸಿದ್ದರು. ಈ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಪ್ರಶ್ನೆಗಳ ಸುರಿಮಳೆ ಸುರಿಸಲಿದೆ. ಅಲ್ಲದೇ ಪಿಎಸ್‍ಐ ಸೇರಿದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿನ ಹಗರಣ ಕುರಿತು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ನಡೆಸಿವೆ.
ಶಾಸಕ ನಿಸರ್ಗ ನಾರಾಯಣಸ್ವಾಮಿ ಜೆಡಿಎಸ್ ಟಿಕೆಟ್ ನೀಡದಂತೆ ಆಗ್ರಹಿಸಿ ಪ್ರತಿಭಟನೆ
ಈ ಸಂಬಂಧ ಸೋಮವಾರ ಬೆಳಗ್ಗೆ ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಭೆ ಕರೆದಿದ್ದಾರೆ. ಜೆಡಿಎಸ್ ಮುಖಂಡರು ಸಹ ಸಭೆ ಸೇರಲಿದ್ದಾರೆ. ಈ ಹಿಂದೆ ಸರ್ಕಾರದ ಭ್ರಷ್ಟಾಚಾರವನ್ನು ಸದನದಲ್ಲಿ ಬಯಲಿಗೆ ಎಳೆಯುತ್ತೇವೆ ಎಂದು ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದರು.
Karnataka, budget, session, begin, February 10,