ಬೆಂಗಳೂರು ಫೆ.14- ಮೃತ ಕಾರ್ಮಿಕರ ಅಂತ್ಯ ಸಂಸ್ಕಾರ ವೆಚ್ಚವನ್ನು 10 ಸಾವಿರದಿಂದ 20 ಸಾವಿರ ರೂ.ಗಳಿಗೆ ಹೆಚ್ಚಿಸಲು ನಗರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆದ ನಗರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 95ನೆ ಸಭೆಯಲ್ಲಿ ಕಾರ್ಮಿಕರ ವೈದ್ಯಕೀಯ ನೆರವು ಯೋಜನೆಗೆ ಇನ್ನೂ ಕೆಲವು ಶಸ್ತ್ರ ಚಿಕಿತ್ಸೆಗಳನ್ನು ಸೇರ್ಪಡೆಗೊಳಿಸುವ ಕುರಿತಂತೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಸಂಘಟಿತ ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಪ್ರೋತ್ಸಾಹ, ಧನಸಹಾಯವನ್ನು ಕುಟುಂಬದಲ್ಲಿನ ಎರಡು ಮಕ್ಕಳಿಗೂ ನೀಡುವಂತೆ ಸಚಿವರು ಸೂಚಿಸಿದರು.
ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಸೇರಿದಂತೆ ಕಾರ್ಮಿಕ ಇಲಾಖೆಯ ಅಕಾರಿಗಳು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯರು, ಕಾರ್ಮಿಕ ಸಂಘಟನೆಗಳ ಪ್ರತಿನಿಗಳು ಉಪಸ್ಥಿತರಿದ್ದರು.
#KarnatakaBuildingAndConstructionWorkersWelfareBoard, #KBOCWWB,