Wednesday, May 31, 2023
Homeಇದೀಗ ಬಂದ ಸುದ್ದಿ24 ಮಂದಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ, ಸಂಪುಟ ಭರ್ತಿ

24 ಮಂದಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ, ಸಂಪುಟ ಭರ್ತಿ

- Advertisement -

ಬೆಂಗಳೂರು, ಮೇ 27-ರಾಜಭವನದಲ್ಲಿಂದು ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಂಪುಟಕ್ಕೆ 24 ಮಂದಿ ನೂತನ ಸಚಿವರ ಸೇರ್ಪಡೆಯ ಮೂಲಕ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ.ರಾಜಭವನದ ಗಾಜಿನ ಮನೆಯಲ್ಲಿ ಇಂದು ಮಧ್ಯಾಹ್ನ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿ ಬೋಸಿದರು. ಹಿರಿಯ ಶಾಸಕರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಎನ್,ಚಲುವರಾಯಸ್ವಾಮಿ, ಕೆ.ವೆಂಕಟೇಶ್,ಡಾ. ಹೆಚ್.ಸಿ.ಮಹದೇವಪ್ಪ ಸೇರಿದಂತೆ 24 ಮಂದಿ ಸಂಪುಟ ದರ್ಜೆ ಸಚಿವರಾಗಿ ಅಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.

ಈಶ್ವರ್ ಖಂಡ್ರೆ, ಕ್ಯಾತಸಂದ್ರದ ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪೂರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪೂರ್, ಎಸ್.ಎಸ್.ಮಲ್ಲಿಕಾರ್ಜುನ್, ಶಿವರಾಜ ಎಸ್.ತಂಗಡಗಿ, ಡಾ. ಶರಣಪ್ರಕಾಶ್ ಆರ್.ಪಾಟೀಲ್, ಮಂಕಾಳವೈದ್ಯ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂಖಾನ್,ಡಿ.ಸುಧಾಕರ್, ಸಂತೋಷ್ ಎಸ್.ಲಾಡ್, ಎನ್.ಎಸ್.ಬೋಸರಾಜು, ಬಿ.ಎಸ್. ಸುರೇಶ, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್ ಹಾಗೂ ಬಿ.ನಾಗೇಂದ್ರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಾಳೆ ಲೋಕಾರ್ಪಣೆಯಾಗಲಿದೆ ಭವ್ಯ ನೂತನ ಸಂಸತ್ ಭವನ, ಏನೇನಿದೆ ವಿಶೇಷತೆ..?

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‍ನ ಹಿರಿಯ ನಾಯಕರು ಸೇರಿದಂತೆ ಕಿಕ್ಕಿರಿದು ಸೇರಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅಭಿಮಾನಿಗಳು ಜಯ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ನೂತನ ಸಚಿವರಿಗೆ ಮುಖ್ಯಮಂತ್ರಿಯವರು ನಾಳೆ ಖಾತೆ ಹಂಚಿಕೆ ಮಾಡಲಿದ್ದು, ಸೋಮವಾರದಿಂದಲೇ ಆಯಾ ಇಲಾಖೆಯ ಜವಾಬ್ದಾರಿ ನಿರ್ವಹಿಸಲು ಅವಕಾಶ ಮಾಡಿಕೊಡಲಿದ್ದಾರೆ.ಸಚಿವರ ಕುಟುಂಬ ಸದಸ್ಯರು, ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ಚಿತ್ರರಂಗ ಅನೇಕ ಗಣ್ಯರು ಭಾಗವಹಿಸಿದ್ದರು. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಬಹಳಷ್ಟು ಮಂದಿ ಪಾಸ್‍ಗಳು ಇಲ್ಲದಿದ್ದರೂ ಕಾರ್ಯಕ್ರಮಕ್ಕೆ ಬಂದು ರಾಜಭವನದೊಳಗೆ ಒಳಗೆ ಬಿಡುವಂತೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು.ಬಹಳ ವರ್ಷಗಳ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಕಾರಕ್ಕೆ ಬಂದ ಕಾಂಗ್ರೆಸ್‍ನಲ್ಲಿ ಸಂಭ್ರಮ ಮನೆ ಮಾಡಿತ್ತು. ಸುಮಾರು 30 ವರ್ಷಗಳ ಬಳಿಕ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬರುತ್ತಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ.

ಸಚಿವ ಸ್ಥಾನ ಸಿಗದೇ ಇದ್ದವರ ಅಸಮಾಧಾನಗಳು, ಬೆಂಬಲಿಗರ ಪ್ರತಿಭಟನೆ ಆಕ್ರೋಶಗಳು ಒಂದೆಡೆಯಾದರೆ, ಅವಕಾಶ ಸಿಕ್ಕವರ ಪಾಳಯದಲ್ಲಿ ಸಂಭ್ರಮ ಮನೆ ಮಾಡಿತ್ತು. ಪಟಾಕಿ ಸಿಡಿಸಿ, ಸಿಹಿ ಹಂಚಿ, ಭಿತ್ತಿಪತ್ರ, ಬ್ಯಾನರ್ ಪ್ರದರ್ಶಿಸುವ ಮೂಲಕ ಸಂತೋಷ ವ್ಯಕ್ತಪಡಿಸಿದ್ದಾರೆ.ಪ್ರಮಾಣ ವಚನ ಸ್ವೀಕಾರಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಪ್ರಮಾಣದ ಜನರು ಆಗಮಿಸಿದ್ದರಿಂದ ರಾಜಭವನದ ಸುತ್ತಮುತ್ತ ಸಂಚಾರ ಅವ್ಯವಸ್ಥೆ ಉಂಟಾಗಿತ್ತು. ಶಾಸಕರ ಭವನ, ಅರಮನೆ ಮೈದಾನ ಸೇರಿದಂತೆ ಹಲವು ಕಡೆ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿತ್ತು.ಜತೆಗೆ ರಾಜಭವನ ಸಂಪರ್ಕಿಸುವ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಸಲಾಗಿತ್ತು. ಸೂಕ್ತ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

#KarnatakaCabinet, #CabinetExpansion, #CongressGovt,

- Advertisement -
RELATED ARTICLES
- Advertisment -

Most Popular