ಬೆಂಗಳೂರು,ಜ.11-ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ನಿನ್ನೆ ಮುಖ್ಯಮಂತ್ರಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರ ಮಗ ಮತ್ತು ಸೊಸೆಗೂ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಬೊಮ್ಮಾಯಿ ತೆರಳಿದ್ದಾರೆ ಎನ್ನಲಾಗಿದೆ.
ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೋವಿಡ್ ದೃಢಈ ಹಿಂದೆ ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಎರಡೂ ಬಾರಿಯೂ ಅಂದು ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿತ್ತು.
ಎರಡೂ ಬಾರಿಯೂ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದಲೇ ಕಡತ ವಿಲೇವಾರಿ, ವರ್ಚುಯಲ್ ಮೀಟಿಂಗ್ ಸೇರಿದಂತೆ ಕರ್ತವ್ಯ ನಿರ್ವಹಣೆ ಮಾಡಿ ಗಮನ ಸೆಳೆದಿದ್ದನ್ನು ಇಲ್ಲಿ ಸ್ಮರಿಸಬಹುದು.
