Thursday, February 22, 2024
Homeರಾಜ್ಯಎಂ.ಎಂ.ಕಲುಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ : ಸಿಎಂ

ಎಂ.ಎಂ.ಕಲುಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ : ಸಿಎಂ

ಬೆಳಗಾವಿ, ಡಿ.6- ಹಿರಿಯ ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಹಾಗೂ ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಾಡಳಿತ ಇಲಾಖೆಗೆ ಸೂಚಿಸಿದ್ದಾರೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.ಕಲಬುರ್ಗಿ ಅವರ ಪತ್ನಿ ಉಮಾದೇವಿ ಎಂ.ಎಂ.ಕಲಬುರ್ಗಿ ಅವರು ವಿಶೇಷ ನ್ಯಾಯಾಲಯ ರಚಿಸುವಂತೆ ಕೋರಿರುವ ಬಗ್ಗೆ ಜರೂರು ಅಗತ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಗೌರಿ ಸಹೋದರಿ ಕವಿತಾ ಲಂಕೇಶ್ರವರೂ ಕೂಡ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ ಪೂರ್ಣಾವ ನ್ಯಾಯಾೀಶರನ್ನು ನೇಮಕ ಮಾಡುವಂತೆ ಕೋರಿದ್ದಾರೆ. ಈ ಬಗ್ಗೆ ಜರೂರು ಅಗತ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ಸೂಚಿಸಿದ್ದಾರೆ. ಈ ಎರಡೂ ಪ್ರಕರಣಗಳ ಬಗ್ಗೆ ಪ್ರತ್ಯೇಕ ಸೂಚನೆ ನೀಡಲಾಗಿದೆ.

ಹಿರಿಯ ಸಾಹಿತಿ ಹಾಗೂ ಕನ್ನಡ ಸಂಶೋಧನಾ ಕ್ಷೇತ್ರದ ದಿಗ್ಗಜ ಡಾ.ಎಂ.ಎಂ.ಕಲಬುರ್ಗಿ ಅವರು 2015 ರ ಆಗಸ್ಟ್ 31 ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿದ್ದರು. ಹತ್ಯೆಯಾಗಿ 7 ವರ್ಷಗಳು ಪೂರ್ಣಗೊಂಡಿವೆ. ಈ ಪ್ರಕರಣದ ಸಂಬಂಧ 2018-19 ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು.

ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯವಾಗಿದ್ದು, ವಿಶೇಷ ನ್ಯಾಯಾಲಯ ರಚಿಸುವಂತೆ ಕಲಬುರ್ಗಿಯವರ ಪತ್ನಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.

ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ

ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ 2017 ರ ಸೆಪ್ಟೆಂಬರ್ 5 ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೆ ಒಳಗಾಗಿದ್ದು, 1200 ಪುರಾವೆ ಹಾಗೂ 5 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಸಾಕ್ಷ್ಯಗಳನ್ನು ಒಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ 2022 ರ ಜುಲೈನಿಂದ ಪ್ರಾರಂಭವಾಗಿದೆ. ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ ಪೂರ್ಣಾವ ನ್ಯಾಯಾೀಶರನ್ನು ನೇಮಕ ಮಾಡುವಂತೆ ಕವಿತಾ ಲಂಕೇಶ್ ಕೋರಿದ್ದು, ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ಅಗತ್ಯ ಕ್ರಮ ಜರುಗಿಸಲು ಸೂಚಿಸಿದ್ದಾರೆ.

RELATED ARTICLES

Latest News