ನವದೆಹಲಿ,ಮೇ 26- ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಕಳೆದ 15 ದಿನಗಳಿಂದ ಶಿಮ್ಲಾ ಪ್ರವಾಸದಲ್ಲಿದ್ದ ಸೋನಿಯಾ ಗಾಂಧಿ ಅವರು ನಿನ್ನೆ ರಾತ್ರಿ ದೆಹಲಿಗೆ ವಾಪಾಸ್ ಆಗಿದ್ದಾರೆ. ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಇಂದು ಬೆಳಗ್ಗೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲಿ ರಾಹುಲ್‍ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಸಿದ್ದರಾಮಯ್ಯ ಅವರನ್ನು ಸೋನಿಯಾಗಾಂಧಿ ಅಭಿನಂದಿಸಿದ್ದರು. ಕಾಂಗ್ರೆಸ್ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಪರಿಣಾಮಕಾರಿಯಾಗಿ ಈಡೇರಿಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ವಾಪಾಸ್ಸಾಗಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿ ವರಿಷ್ಠರ ಮನೆಗೆ ತೆರಳಿದ್ದರು. ಮಧ್ಯಾಹ್ನದ ಬಳಿಕ ಡಿ.ಕೆ.ಶಿವಕುಮಾರ್ ಕೂಡ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಸಿಂಗಾಪುರದಲ್ಲಿ 5 ಮಿಲಿಯನ್ ವಂಚಿಸಿದ ಭಾರತೀಯನಿಗೆ 30 ತಿಂಗಳ ಸಜೆ
#CMSiddaramaiah, #meets, #SoniaGandhi, #RahulGandhi,