ಜನವರಿಯಲ್ಲಿ 6,085 ಕೋಟಿ ದಾಖಲೆಯ ಜಿಎಸ್‍ಟಿ ಸಂಗ್ರಹ

Social Share

ಬೆಂಗಳೂರು,ಫೆ.11- ಜನವರಿ ತಿಂಗಳಿನಲ್ಲಿ 6085 ಕೋಟಿ ರೂ. ಜಿಎಸ್‍ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಜಿಎಸ್‍ಟಿ ತೆರಿಗೆ ಸಂಗ್ರಹ ಣೆಯಲ್ಲಿ ಕರ್ನಾಟಕ ಶೇ.30ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ ಎಂದು ಪ್ರಶಂಸಿಸಿದ್ದಾರೆ.

ಬಿಎಸ್‍ವೈಗೆ ಇದು ಕೊನೆ ಅಧಿವೇಶನ

ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ತಿಳಿಸಿದ್ದಾರೆ.

Karnataka, collected, record, GST, Rs 6085 cr, January, CM Bommai,

Articles You Might Like

Share This Article