ಬೆಂಗಳೂರು,ಡಿ.29- ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಪ್ರಣಾಳಿಕೆ ತಯಾರಿಕೆಯನ್ನು ಆರಂಭಿಸಿರುವ ಕಾಂಗ್ರೆಸ್ ಜನರಿಂದ ಸಲಹೆಗಳನ್ನು ಸ್ವೀಕರಿಸಲು ನಿಮ್ಮ ಸಂಕಲ್ಪ, ನಮ್ಮ ಹೊಣೆ ಎಂಬ ಕ್ಯೂಆರ್ ಕೋಡ್ ಬಿಡುಗಡೆ ಮಾಡಿದೆ.
ಮುನ್ನೋಟ-2023ರ ಕ್ಯೂಆರ್ ಕೋಡ್ ಅನ್ನು ಕೆಪಿಸಿಸಿ ಕಚೇರಿಯಲ್ಲಿ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್, ನಾವು ಕೊಡುವ ಭರವಸೆಗಳು ಈಡೇರಿಕೆ, ಕಾರ್ಯಗತವಾದ ಭರವಸೆಗಳಾಗಿರಲಿವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ್ರೆ ಏನೆಲ್ಲಾ ಕಾರ್ಯಕ್ರಮ ನೀಡಲಿದೆ ಎಂಬ ಬಗ್ಗೆ ಪ್ರಣಾಳಿಕೆ ಬಿಡುಗಡೆ ಮಾಡುತ್ತಾ ಬಂದಿದೆ. ಈ ಮೊದಲು ಕಾಂಗ್ರೆಸ್ ನೀಡಿದ್ದ 160 ಭರವಸೆಗ ಪೈಕಿ ಬಹುತೇಕ ಎಲ್ಲವನ್ನೂಈಡೇರಿಸಲಾಗಿತ್ತು. ಪ್ರಣಾಳಿಕೆ ಹೊರತಾದ ಅನ್ನ ಭಾಗ್ಯ ಯೋಜನೆ ಅನುಷ್ಠಾನಗೊಳಿಸಿದ್ದು ಇತಿಹಾಸ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಪ್ರಣಾಳಿಕೆ ಬಹಳ ಮುಖ್ಯವಾದದ್ದು. ಅಧಿಕಾರಕ್ಕೆ ಬಂದ ಮೇಲೆ ಅದನ್ನು ತಪ್ಪದೇ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಕಾಂಗ್ರೆಸ್ನಿಂದ ಮಾತ್ರ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಸಾಧ್ಯ ಎಂದಿದ್ದಾರೆ.
ಈ ಮೊದಲು ಆಡಳಿತ ಸುಧಾರಣಾ ಸಮಿತಿ ರಚನೆ ಮಾಡಲಾಗಿತ್ತು. ಅಲ್ಲಿ ಸೂಕ್ತ ಸಲಹೆಗಳು ಬಂದಿವೆ. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸ್ಪಷ್ಟ ನಿಲುವು ವ್ಯಕ್ತಪಡಿಸಲಿದೆ. ರಾಜ್ಯದ ಒಳಿತಿಗಾಗಿ, ಜನಪರ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದರು.
BIG NEWS: ಕಳಸಾ-ಬಂಡೂರಿ ನಾಲಾ ಯೋಜನೆಯ ಕೇಂದ್ರ ಗ್ರೀನ್ ಸಿಗ್ನಲ್
ಈ ಮೊದಲು ಎಐಸಿಸಿ ವತಿಯಿಂದ ಎಲ್ಲಾ ರಾಜ್ಯಗಳಲ್ಲೂ ಚಿಂತನ ಶಿಬಿರ ನಡೆಸಲಾಗಿದೆ. ಜಿಲ್ಲಾ ಮಟ್ಟದ ಸಭೆಗಳು ನಡೆದಿವೆ. ಸ್ಥಳೀಯ ಸಮಸ್ಯೆಗಳನ್ನು ಆಲಿಸಲಾಗಿದೆ. ಜನರ ಸಮಸ್ಯೆ ಚರ್ಚಿಸಲು 6 ಸಮಿತಿಗಳನ್ನು ರಚಿಸಲಾಗಿತ್ತು. ಅಲ್ಲಿ ಕೃಷಿ,ಆರೋಗ್ಯ ಸೇರಿದಂತೆ ಅನೇಕ ವಿಚಾರಗಳ ಚರ್ಚೆಯಾಗಿದೆ ಎಂದರು.
ಸಮಾಜದಲ್ಲಿ ಶೇ.50ರಷ್ಟು ಮಹಿಳೆಯರಿದ್ದಾರೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿತ್ತು. ಸ್ತ್ರೀ ಶಕ್ತಿ, ಆಶಾ ಕಾರ್ಯಕರ್ತರು ಸೇರಿದಂತೆ ಅನೇಕ ವರ್ಗಗಳಲ್ಲಿ ಸಮಸ್ಯೆಗಳಿವೆ. ಅವುಗಳ ಬಗ್ಗೆಯೂ ಪ್ರಣಾಳಿಕೆಯಲ್ಲಿ ಚರ್ಚೆ ನಡೆಸಲಾಗುವುದು. ಪ್ರಮುಖವಾಗಿ ಕೃಷಿ, ನೀರಾವರಿ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಕೃಷಿ ಉತ್ಪನ್ನಗಳ ಮಾರಾಟ ಸೇರಿದಂತೆ ಎಲ್ಲಾ ಸಮಸ್ಯೆಗಳ ಬಗ್ಗೆ ಗಮನ ಹರಿಸಲಾಗಿದೆ. ಗ್ರಾಮೀಣ ಭಾಗದ ಮೂಲ ಸೌಲಭ್ಯಗಳು, ಜಿಎಸ್ಟಿ ಬಾಕಿ, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಪ್ರಾಣಾಳಿಕೆಯಲ್ಲಿ ತಿಳಿಸಲಿದೆ ಎಂದರು.
ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಶೀಘ್ರವೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದರಿಂದ ಪಕ್ಷಕೆ ಅನುಕೂಲವಾಗಲಿದೆ. ಚುನಾವಣೆಗೆ ಕಾಂಗ್ರೆಸ್ ಯಾವಾಗಲೂ ಸಿದ್ದವಾಗಿದೆ, ಅವ ಪೂರ್ವ ಚುನಾವಣೆ ಆದರೂ ಕಾಂಗ್ರೆಸ್ ಲಾಭವಾಗಲಿ ಎಂದು ಹೇಳಿದರು.
BIG NEWS ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಚಿವ ಮಾಧುಸ್ವಾಮಿ
ಅಮಿತ್ ಷಾ ರಾಜ್ಯ ಪ್ರವಾಸವನ್ನ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸುವುದಿಲ್ಲ. ಅಮಿತ್ ಷಾ ಅಜೆಂಡಾ ಬಿಜೆಪಿಯದ್ದು, ಕಾಂಗ್ರೆಸ್ ಅಜೆಂಡಾವೇ ಬೇರೆ. ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸುತ್ತಾರೆ. ನಾವು ಅಭಿವೃದ್ಧಿ ವಿಚಾರಗಳಿಗೆ ಚುನಾವಣೆ ನಡೆಸುತ್ತೇವೆ ಎಂದರು.
karnataka, Congress, assembly election, manifesto, Parameshwar,