AICC ಅಧ್ಯಕ್ಷ ಸ್ಥಾನದ ಚುನಾವಣೆ : ಖರ್ಗೆ ಬೆಂಬಲಿಸಲು ರಾಜ್ಯ ಕಾಂಗ್ರೆಸ್ ಮುಖಂಡರ ಕರೆ

Social Share

ಬೆಂಗಳೂರು, ಅ.14- ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಚುನಾವಣೆ ಇದೇ ಅಕ್ಟೋಬರ್ನಲ್ಲಿ ನಡೆಯುತ್ತಿದ್ದು, ಕರ್ನಾಟಕದ ಪ್ರತಿನಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮತಗಟ್ಟೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಛೇರಿ, ಕ್ವಿನ್ಸ್ ರಸ್ತೆ, ಬೆಂಗಳೂರು ಇಲ್ಲಿ ತೆರೆಯಲಾಗಿದೆ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು, ಅ.17 ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಚುನಾವಣೆ ನಡೆಯುತ್ತಿದ್ದು ಇದರಲ್ಲಿ ನಮ್ಮ ರಾಜ್ಯದವರೆ ಆದ ಮುತ್ಸದ್ದಿ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸ್ರ್ಪಸಿದ್ದಾರೆ.

ನಿಷ್ಟಾವಂತ ಹಿರಿಯ ಕಾಂಗ್ರೆಸ್ ನಾಯಕರಾದ ಖರ್ಗೆ ಅವರು ಸಮರ್ಥ ಆಡಳಿತಗಾರರಾಗಿದ್ದು ತಮಗೆ ವಹಿಸಿದ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅತ್ಯಂತ ಸಮರ್ಥವಾಗಿ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸಿರುವುದು ತಮಗೆಲ್ಲಾ ತಿಳಿದಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡರಲ್ಲಿಯೂ ಕ್ಯಾಬಿನೆಟ್ ಸಚಿವರಾಗಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ ಅನುಭವಿಗಳಾಗಿದ್ದಾರೆ. ಅಲ್ಲದೆ 9 ಬಾರಿ ಶಾಸಕರಾಗಿ ಮತ್ತು 2 ಬಾರಿ ಸಂಸದರಾಗಿ ಚುನಾಯಿತರಾಗಿ ಜನಾನುರಾಗಿ ನಾಯಕರಾಗಿರುತ್ತಾರೆ .

ಅಷ್ಟೇ ಅಲ್ಲದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮತ್ತು ಕರ್ನಾಟಕ ವಿಧಾನಸಭೆಯಲ್ಲಿ ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಒಮ್ಮೆ ಸಭಾ ನಾಯಕರಾಗಿ ಸೇವೆ ಸಲ್ಲಿಸಿರುತ್ತಾರೆ . ಅಲ್ಲದೆ ಎಐಸಿಸಿ ಯ ಪ್ರಧಾನ ಕಾರ್ಯದರ್ಶಿಗಳಾಗಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ .

ಖರ್ಗೆ ಯವರು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿದು ಮಹಾತ್ಮ ಗಾಂಧಿ , ಪಂಡಿತ್ ಜವಹರಲಾಲ್ ನೆಹರು , ಡಾ || ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ತತ್ವ ಸಿದ್ಧಾಂತಗಳನ್ನು ಸಾರುವ ಮೂಲಕ ನಮ್ಮ ಮಾಜಿ ಪ್ರಧಾನಮಂತ್ರಿಗಳಾದ ಶ್ರೀಮತಿ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಯವರ ಆಶಯದಂತೆ ಕಾಂಗ್ರೆಸ್ ಸಂಘಟನೆಯನ್ನು ತನ್ಮೂಲಕ ನಮ್ಮ ದೇಶವನ್ನು ಸದೃಢಗೊಳಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ಸ್ರ್ಪಸಿದ್ದಾರೆ .

ಇಂತಹ ಮುತ್ಸದ್ದಿ ರಾಜಕಾರಣಿ ಮತ್ತು ಅನುಭವಿ ಆಡಳಿತಗಾರರಾದ ನಮ್ಮವರೆ ಆದ ಮಲ್ಲಿಕಾರ್ಜುನ್ ಖರ್ಗೆಯವರಿಗೆ ತಮ್ಮ ಮತವನ್ನು ಕೋರಲು ನಾನು ಹೆಮ್ಮೆ ಪಡುತ್ತೇನೆ . ದಯವಿಟ್ಟು ತಮ್ಮ ಮತವನ್ನು ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ನೀಡಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿ ಶಿವಣ್ಣ ,ಕೃಷ್ಣಪ್ಪ ,ಸುರೇಶ್ ಮುಂತಾದ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು

Articles You Might Like

Share This Article