Friday, October 25, 2024
Homeರಾಜ್ಯಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಕೋರ್ಟ್ ತೀರ್ಪು : ವಿಜಯೇಂದ್ರ ಸ್ವಾಗತ

ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಕೋರ್ಟ್ ತೀರ್ಪು : ವಿಜಯೇಂದ್ರ ಸ್ವಾಗತ

Karnataka Congress MLA Satish Sail convicted by special court in Illegal Mining Case

ಬೆಂಗಳೂರು,ಅ.25– ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎಂಬುದನ್ನು ನಿರೂಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ತೀರ್ಪು ಮುಡಾ, ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ ಎಂದಿದ್ದಾರೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ 200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ವಿರುದ್ಧ ಬಂದಿರುವ ತೀರ್ಪು, ಬ್ರಹಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರಿಗೂ ಇದೇ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ಹೇಳಿದ್ದಾರೆ.

ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಉಚ್ಛ ನ್ಯಾಯಾಲಯದ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ ಎಂದು ತಿಳಿಸಿದ್ದಾರೆ.

ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿಗಳು, ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು, ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

RELATED ARTICLES

Latest News