ಮೈಸೂರು,ನ.19- ಮುಡಾ ಪ್ರಕರಣಕ್ಕೆ ಸಂಬಂಧಿಸಿ ದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾಗಿರುವ ಮುಡಾದ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.
ಮುಡಾ ಪ್ರಕರಣ ಸಂಬಂಧ ಲೋಕಾಯುಕ್ತ ಕಚೇರಿಗೆ ನ. 19ರಂದು ಹಾಜರಾಗುವಂತೆ ನಟೇಶ್ ಅವರಿಗೆ ನೋಟಿಸ್ ನೀಡಿತ್ತು.ಈ ಹಿನ್ನೆಲೆಯಲ್ಲಿ ಮುಡಾ ಮಾಜಿ ಆಯುಕ್ತ ನಟೇಶ್ ಮೈಸೂರಿನ ದಿವಾನ್‌್ಸ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ.
ನಟೇಶ್ ಇಂದು ಲೋಕಾಯುಕ್ತ ಕಚೇರಿಗೆ ಹಾಜರಾಗಿ ಮುಡಾ ಪ್ರಕರಣ ಸಂಬಂಧ ವಿಚಾರಣಾಧಿಕಾರಿ ಆಗಿರುವ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಆದೇಶದಂತೆ ಮುಡಾ ಹಗರಣದ ಬಗ್ಗೆ ತನಿಖೆ ನಡೆಸಿ ಡಿಸೆಂಬರ್ನಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ಮುಡಾ ಪ್ರಕರಣದ ಆರೋಪಿಗಳನ್ನೆಲ್ಲ ವಿಚಾರಣೆಗೊಳಪಡಿಸಿ ಇದೀಗ ಮುಡಾದ ಮಾಜಿ ಆಯುಕ್ತರಾದ ನಟೇಶ್ ಅವರ ವಿಚಾರಣೆಯನ್ನು ನಡೆಸಿದ್ದಾರೆ.
ಮುಡಾ ಪ್ರಕಣ ಸಂಬಂಧ ಸಿಎಂ ಸಿದ್ಧರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಎಲ್ಲರ ವಿಚಾರಣೆಯನ್ನೂ ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ನಡೆಸಿದ್ದಾರೆ. ಮುುಡಾ ಮಾಜಿ ಆಯುಕ್ತ ನಟೇಶ್ ಅವರು ವಿಚಾರಣೆಗಾಗಿ ಆಗಮಿಸಿದಾಗ ಮಾಧ್ಯಮದವರು ವಿಡಿಯೋ ಮಾಡಲು ಮುಂದಾಗುತ್ತಿದ್ದಂತೆ ಕೈಯಲ್ಲಿದ್ದ ಬ್ಯಾಗ್ನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿ, ನಾನೇನು ಇಲ್ಲಿ ಡ್ಯಾನ್‌್ಸ ಮಾಡುತ್ತಿದ್ದೇನಾ ಎಂದು ಮಾಧ್ಯಮದವರ ವಿರುದ್ಧ ಸಿಡಿಮಿಡಿಗೊಂಡು ಕಚೇರಿಯ ಒಳನಡೆದರು.
ಸುಮಾರು ಎರಡೂವರೆ ಗಂಟೆಗಳ ಕಾಲ ಲೋಕಾಯುಕ್ತರು ಸುದೀರ್ಘವಾಗಿ ವಿಚಾರಣೆ ನಡೆಸಿದರು. ನಂತರ ಹೊರಬಂದ ನಟೇಶ್ ಅವರು ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟುಹೋದವರು. ನಂತರ ಮುಖ್ಯಮಂತ್ರಿಯವರ ಆಪ್ತ ಧ್ರುವಕುಮಾರ್ ಕೂಡ ವಿಚಾರಣೆಗೆ ಆಗಮಿಸಿದ್ದು, ಲೋಕಾಯುಕ್ತ ಎಸ್ಪಿ ಉದೇಶ್ ಅವರು ವಿಚಾರಣೆ ನಡೆಸಿದರು.