ಕರ್ನಾಟಕದ ಮೇಲೆ ಮೋದಿ ಕಣ್ಣು, ರಾಜ್ಯಕ್ಕೆ ಮತ್ತೆ ಮತ್ತೆ ಭೇಟಿ

Social Share

ಬೆಂಗಳೂರು,ಜ.24- ಗುಜರಾತ್ ರಾಜ್ಯ ಚುನಾವಣೆ ಬಳಿಕ ಇದೀಗ ಕರ್ನಾಟಕದತ್ತ ಮುಖ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಭೇಟಿ ನೀಡಿ ಜನಮನ ಗೆಲ್ಲಲು ಬಿರುಸಿನ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಇನ್ನೆರಡು ತಿಂಗಳುಗಳಲ್ಲಿ ಚುನಾವಣೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ವಾರಗಳಿಂದ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರದ ನಾಯಕರು ಪಕ್ಷದ ಕಾರ್ಯಕ್ರಮಗಳು ಹಾಗೂ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಬೆಂಗಳೂರಿಗೆ ನಿರಂತರ ಭೇಟಿ ನೀಡುತ್ತಿದ್ದಾರೆ.

ಈ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳನ್ನೇ ಬಿಜೆಪಿ ಇದೀಗ ಪ್ರಚಾರ ಕಾರ್ಯಕ್ರಮಗಳನ್ನಾಗಿ ಬಳಕೆ ಮಾಡಿಕೊಳ್ಳುತ್ತಿದೆ. ಫೆಬ್ರವರಿಯಲ್ಲಿ ಮೋದಿಯವರು ಎರಡರಿಂದ ಮೂರು ಬಾರಿ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27ರಂದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಮೋದಿಉದ್ಘಾಟನೆ ಮಾಡಲಿದ್ದಾರೆ.

ಪಿಎಸ್‍ಐ ಪರೀಕ್ಷಾ ಅಕ್ರಮ ಆರೋಪಿಯಿಂದ ವಿಡಿಯೋ ಬಾಂಬ್..!

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಗಣಿಗಾರಿಕೆ ಶಾಲೆಯೊಂದರ ಶಂಕುಸ್ಥಾಪನೆಯನ್ನೂ ಇದೇ ವೇಳೆ ಮೋದಿಯವರು ನೆರವೇರಿಸುವ ನಿರೀಕ್ಷೆಯಿದೆ. ಮೋದಿ ಪಾಲ್ಗೊಳ್ಳುವ ನಿರೀಕ್ಷೆಯಿರುವ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸುವ ಯೋಜನೆ ಇದ್ದು, ಚಿಕ್ಕಬಳ್ಳಾಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕೂಡ ಲೋಕಾರ್ಪಣೆಗೊಳ್ಳಲು ಮೋದಿಯವರ ಸಮಯಕ್ಕಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ ತಿಂಗಳಿನಲ್ಲಿ ತುಮಕೂರಿನ ಗುಬ್ಬಿ ತಾಲೂಕಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಹೆಲಿಕಾಪ್ಟರ್ ಸೌಲಭ್ಯಕ್ಕೆ ಮೋದಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಬಹುತೇಕ ಸಿದ್ಧವಾಗಿದ್ದು, ಮಾರ್ಚ್ ತಿಂಗಳಿನಲ್ಲಿ ಉದ್ಘಾಟಿಸುವ ನಿರೀಕ್ಷೆಯಿದೆ.

ಪಕ್ಷ ದುರ್ಬಲವಾಗಿರುವ, ವಿವಿಧ ಕಾರಣಗಳಿಂದ ನಕಾರಾತ್ಮಕ ಪರಿಣಾಮಗಳನ್ನು ಎದುರಿಸುತ್ತಿರುವ ಜಿಲ್ಲೆಗಳು ಮತ್ತು ಪ್ರದೇಶಗಳಿಗೆ ಪ್ರಧಾನಿ ಭೇಟಿ ನೀಡುತ್ತಿದ್ದಾರೆಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.
ಇನ್ನು ಕೆಲವೇ ವಾರಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ಮೋದಿಯವರು ಭೇಟಿ ನೀಡಲಿದ್ದು, ನಂತರ ಅಂತಿಮವಾಗಿ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿಯವರು ಭೇಟಿ ನೀಡಿದ ಎಲ್ಲಾ ಪ್ರದೇಶಗಳಿಗೂ ರಾಜ್ಯ ನಾಯಕರೂ ಕೂಡ ಭೇಟಿ ನೀಡಲಿದ್ದಾರೆ. ಆದರೆ ಮೋದಿಯವರ ಭೇಟಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ನಾಯಕರೊಬ್ಬರು ಹೇಳಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ, ಪಕ್ಷವು ತನ್ನದೇ ಕಾರ್ಯಕರ್ತರಿಂದ ಆಕ್ರೋಶಗಳನ್ನು ಎದುರಿಸುತ್ತಿದೆ. ಹೀಗಾಗಿ ಮೋದಿಯವರ ಭೇಟಿ ಕಾರ್ಯಕ್ರಮದಲ್ಲಿ ಸ್ವಲ್ಪ ಮಟ್ಟಿಗೆ ಸಮಾಧಾನ ತರಲು ಸಹಾಯ ಮಾಡಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್ ಬಳಿಕ ಮೋದಿಯವರು ನವೆಂಬರ್ ತಿಂಗಳಿನಲ್ಲಿ ಮತ್ತೆ ರಾಜ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬೆಂಗಳೂರು ನಗರ ಹಾಗೂ ಗ್ರಾಮಾಂತ ಜಿಲ್ಲೆಗಳ ಮೇಲೆ ಕೇಂದ್ರೀಕರಿಸಿದ್ದರು. ಭೇಟಿ ವೇಳೆ ವಂದೇ ಭಾರತ್ ಚೆನ್ನೈ-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು.

ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಇನ್ನೂ ನಿರ್ಧಾರವಾಗಿಲ್ಲ : ಜಿಲ್ಲಾಧಿಕಾರಿ

ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಉದ್ಘಾಟಿಸಿದ್ದರಲ್ಲದೆ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ನಂತರ ಈ ತಿಂಗಳ ಆರಂಭದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವದಲ್ಲಿ (ಯುವಜನೋತ್ಸವ) ಮೋದಿಯವರು ಭಾಗವಹಿಸಿದ್ದರು.

ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ಮೋದಿಯವರ ಕಾರ್ಯಕ್ರಮದಲ್ಲಿ ಬೀರ್ದ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಬಂಜÁರ ಸಮುದಾಯದವರಿಗೆ ಹಕ್ಕುಪತ್ರಗಳನ್ನೂ ವಿತರಿಸಲಾಯಿತು. ಕಳೆದ ಸೆಪ್ಟೆಂಬರ್ ತಿಂಗಳಿನಿಂದಲೂ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಆಗಾಗ್ಗೆ ಭೇಟಿ ನೀಡುತ್ತಲೇ ಬಂದಿದ್ದಾರೆ.

Karnataka, election, campaign, PM Modi,

Articles You Might Like

Share This Article