ಪ್ರವಾಹಕ್ಕೆ ಬಂದಾಗ ಬಾರದ ಪ್ರಧಾನಿ ಪ್ರಚಾರಕ್ಕೆ ಮಾತ್ರ ಹಾಜರ್ : ಜೆಡಿಎಸ್ ಟೀಕೆ

Social Share

ಬೆಂಗಳೂರು, ಫೆ.7- ನಮ್ಮ ಕರುನಾಡು ಬರಗಾಲ, ಪ್ರವಾಹದಿಂದ ತತ್ತರಿಸಿದಾಗೆಲ್ಲ ಮಾಯವಾಗುವ ಪ್ರಧಾನಿ ನರೇಂದ್ರಯವರು, ಚುನಾವಣೆ ಹತ್ತಿರ ಬಂದ ತಕ್ಷಣ ಪ್ರತ್ಯಕ್ಷರಾಗುತ್ತಾರೆ ಎಂದು ಜೆಡಿಎಸ್ ಟೀಕೆ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಇಡೀ ದೇಶದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಪ್ರಮುಖ ರಾಜ್ಯಗಳಲ್ಲೊಂದಾದ ಕರ್ನಾಟಕದ ಸಮಸ್ಯೆಗಳಿಗೆ ಕುರುಡಾಗಿ ವರ್ತಿಸುವವರು, ಈಗ ಮತ ಕೇಳಲು ಯಾವ ಮುಖ ಹೊತ್ತು ಬರುತ್ತಾರೆ ಎಂದು ಪ್ರಶ್ನಿಸಿದೆ.

ಕರ್ನಾಟಕ ಬಿಜೆಪಿ ಪಾಲಿಗೆ ಇಂದು ಪಾಲಕರನ್ನು ಶಾಲೆಗೆ ಬರಮಾಡಿಕೊಳ್ಳುವ ದಿನದ ಹಾಗೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ಚುನಾವಣೆ ಗೆಲ್ಲಲು ಅಣಿಯಾಗುವ ಉತ್ಸಾಹಲ್ಲಿದ್ದಾರೆ ರಾಜ್ಯ ಬಿಜೆಪಿಯವರು ಎಂದು ವ್ಯಂಗ್ಯವಾಡಿದೆ.

ಆದಾಯ ಮತ್ತು ಕಾಪೆರ್ರೆ ಟ್ ತೆರಿಗೆ, ಜಿಎಸ್‍ಟಿಗಳನ್ನು ಕೇಂದ್ರದ ಖಜಾನೆಗೆ ತುಂಬಿಸಿಕೊಳ್ಳಲು ಮಾತ್ರ ಕರ್ನಾಟಕ ಬೇಕು. ನಮ್ಮಿಂದ ಸಂಗ್ರಹವಾದ ತೆರಿಗೆಯಲ್ಲಿ ಕನಿಷ್ಠ ಪಾಲು ಸಿಗುವುದೇ ಕನಸಾಗಿದೆ. ಇನ್ನೂ ಸಮಪಾಲು ದೂರದ ವಿಷಯ. ಒಕ್ಕೂಟ ಸರ್ಕಾರವು ಕರ್ನಾಟಕವನ್ನು ಕಾಲು ಒರೆಸುವ ಮ್ಯಾಟ್‍ನಂತೆ ಬಳಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರದ ಬಜೆಟ್‍ನಲ್ಲಿ ಸರ್ವ ಹಿತ ರಕ್ಷಣೆಗೆ ಆದ್ಯತೆ : ಪ್ರಧಾನಿ

ಕರ್ನಾಟಕವು ಸೇರಿದಂತೆ ಎಲ್ಲ ರಾಜ್ಯಗಳ ಪ್ರಾದೇಶಿಕತೆಯ ಕತ್ತು ಹಿಸುಕುವ ಕುತಂತ್ರದ ರಾಜಕೀಯ ಮುಂದುವರಿದಿದೆ. ರಾಜ್ಯಗಳ ಅಕಾರವನ್ನೆಲ್ಲ ಮೊಟಕುಗೊಳಿಸಿದ್ದಾಯ್ತು. ಈಗ ಚುನಾವಣೆ ಹತ್ತಿರ ಬಂದಿದೆ ಎಂಬ ಕಾರಣಕ್ಕೆ ಕೆಲವು ಯೋಜನೆಗಳ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿಯವರೆ, ನಿಮ್ಮ ಮುಖವಾಡ ಕಳಚಿ ಬಹಳ ದಿನಗಳಾಗಿವೆ ಎಂದು ಕುಟುಕಿದೆ.

ಇನ್ನೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಮತ್ತು 25 ಸಂಸದರು ತಮ್ಮ ಬೆನ್ನೆಲುಬನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ರಾಜ್ಯದ ಜನತೆ ಅವರಿಗೆ ಮುಖ್ಯವೇ ಅಲ್ಲ. ಏನಿದ್ದರೂ ಮೋದಿಯವರ ಭಜನೆ ಮತ್ತು ಮುಖಸ್ತುತಿ ರಾಜಕಾರಣವಷ್ಟೆ. ಅವರಿಗೆಲ್ಲ ಮೋದಿ ಹೆಸರಿನಲ್ಲಿ ಅಕಾರ ಪಡೆಯುವ ಹುಚ್ಚು ಭ್ರಮೆ ಎಂದಿದೆ.

ಮೋದಿಯವರು ಬಂದ ದಿನ ರೆಕ್ಕೆ ಬಲಿತ ಹಕ್ಕಿಯಂತೆ ಆಡುವುದು ಮಾತ್ರ ಇಲ್ಲಿನ ಬಿಜೆಪಿಯವರಿಗೆ ಗೊತ್ತಿರುವುದು. ಇಂತಹ ಬೃಹತ್ ನಾಟಕ ಮಂಡಳಿಯ ಯಾವ ಪ್ರದರ್ಶನವೂ ಇನ್ನು ಕರ್ನಾಟಕದಲ್ಲಿ ನಡೆಯುವುದಿಲ್ಲ. ನಿಮ್ಮಂತಹ ಮುಖೇಡಿ ರಾಜಕಾರಣಿಗಳು ಹಾಗೂ ನಿಮ್ಮನ್ನು ತೊಗಲು ಗೊಂಬೆಗಳನ್ನಾಗಿ ಮಾಡಿರುವ ದೆಹಲಿ ದೊರೆಗಳನ್ನು ರಾಜ್ಯ ತಿರಸ್ಕರಿಸಲಿದೆ ಎಂದು ಟೀಕಿಸಿದೆ.

ಅದಾನಿ ಹಗರಣದ ತನಿಖೆಗೆ ಪ್ರತಿಪಕ್ಷಗಳ ಪಟ್ಟು, ಕಲಾಪ ಮುಂದೂಡಿಕೆ

ರಾಜ್ಯ ಬಿಜೆಪಿಯಂತೂ ನಪುಂಸಕವಾಗಿರುವುದು ದಿಟ. ಬರಡು ಭೂಮಿಯಂತೆ ಯಾವ ಪ್ರಯೋಜನವು ಇಲ್ಲದ ರಾಜ್ಯ ಸರ್ಕಾರವಿದು. ಸಾರ್ವಜನಿಕರ ಹಣ ಬಾಚುವ, ದೋಚುವುದಷ್ಟೆ ಇವರ ಕಾಯಕ. ಒಟ್ಟಿನಲ್ಲಿ ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರವನ್ನು ಜನರು ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಭವಿಷ್ಯ ನುಡಿದಿದೆ.

Karnataka, Flood, PM Modi, elections, campaign, JDS,

Articles You Might Like

Share This Article