ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಟಿ. ಜಾನ್ ನಿಧನ

Social Share

ಬೆಂಗಳೂರು,ಫೆ.10- ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಟಿ.ಜಾನ್ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಜಾನ್ ಅವರು ಇಂದು ಬೆಳಗಿನ ಜಾವ 3.30ರ ಸಮಯದಲ್ಲಿ ಇಹಲೋಕ ತ್ಯಜಿಸಿದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

2010ರಿಂದ 2016ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದ ಜಾನ್ ಅವರು ಪತ್ನಿ ಚಚ್ಚಮ್ಮಜಾನ್, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕಮ್ ತಾಲೂಕಿನ ಗ್ರಾಮವೊಂದರಲ್ಲಿ 1931ರ ಅಕ್ಟೋಬರ್ 19 ರಂದು ಜನಿಸಿದ್ದ ಜಾನ್ ಅವರು ನಂತರ ಮಡಿಕೇರಿಗೆ ಬಂದು ನೆಲೆಸಿದ್ದರು.

ವಿಮಾನದಲ್ಲಿ ದೋಷ, 13 ಗಂಟೆ ನಿಲ್ದಾಣದಲ್ಲೇ ಕಾಲ ಕಳೆದ 170 ಪ್ರಯಾಣಿಕರು

ಸಮಾಜಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದ ಜಾನ್ ಅವರು ಸಚಿವರಾಗಿಯೂ ಉತ್ತಮ ಸೇವೆ ಸಲ್ಲಿಸಿದ್ದರು.
ಜಾನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ.

Karnataka, former minister, T. John, passed away,

Articles You Might Like

Share This Article