ಬೆಂಗಳೂರು, ಮಾ.3- ಇದೇ ಮಾರ್ಚ್ 9 ರಿಂದ ಪ್ರಾರಂಭ ವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಹಿಜಾಬ್ ಧರಿಸಿ ಬರೆಯಲು ಅನುಮತಿ ಕೋರಿ ವಿವಿಧ ಕಾಲೇಜು ಪ್ರಾಂಶುಪಾಲರು, ಮುಸ್ಲಿಂ ವಿದ್ಯಾರ್ಥಿನಿಯರು ವಿನಂತಿ ಮಾಡಿಕೊಂಡಿದ್ದಾರೆ.
ಆದರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಇಂತಹ ಮನವಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ. ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿದ್ದಾರೆ.
ಹಿಜಾಬ್ ಕುರಿತ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿ ಇರುವುದರಿಂದ ಪರೀಕ್ಷೆಯ ಸಮಯದಲ್ಲಿ ಹಿಜಾಬ್‍ಅನ್ನು ಅನುಮತಿಸುವ ಪ್ರಶ್ನೆಯೇ ಇಲ್ಲ. ಈ ಹಿಜಾಬ್ ಕಾರಣದಿಂದ ಯಾವುದೇ ವಿದ್ಯಾರ್ಥಿಯು ಪರೀಕ್ಷೆಗಳನ್ನು ಬಿಟ್ಟುಬಿಡುತ್ತಾರೆ ಎಂದು ನಾವು ಭಾವಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
40% ಸರ್ಕಾರಕ್ಕೆ ಮಾಡಾಳು ಪುತ್ರ ಮತ್ತೊಂದು ಸಾಕ್ಷಿ : ಹೆಚ್‌ಡಿಕೆ
ಕಳೆದ ವರ್ಷ ಮಾರ್ಚ್‍ನಲ್ಲಿ ಕರ್ನಾಟಕ ಹೈಕೋರ್ಟ್ ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ಹೇಳಿತ್ತು. ಶಾಲಾ ಸಮವಸ್ತ್ರದ ಪ್ರಿಸ್ಕ್ರಿಪ್ಷನ್ ಸಾಂವಿಧಾನಿಕವಾಗಿ ಅನುಮತಿಸುವ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನು ವಿದ್ಯಾರ್ಥಿಗಳು ವಿರೋಧಿಸಲು ಸಾಧ್ಯವಿಲ್ಲ.
2022ರ ಫೆಬ್ರವರಿ 5ರಂದು ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರವನ್ನು ಧರಿಸಬೇಕೆಂಬ ಸರ್ಕಾರದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಾಗಿದೆ.
ಕೂಡಲೇ ವಿಧಾನಸಭೆ ಚುನಾವಣೆ ಘೋಷಣೆ ಮಾಡಲು ಸಿದ್ದರಾಮಯ್ಯ ಒತ್ತಾಯ
ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿರುವ ಬಗ್ಗೆ ದಕ್ಷಿಣ ಕನ್ನಡದ ಕಾಲೇಜೊಂದರ ಪ್ರಾಂಶುಪಾಲರು ಮಾತನಾಡಿ, ಕಳೆದ ಒಂದು ವಾರದಲ್ಲಿ, ಪರೀಕ್ಷೆಯನ್ನು ಹಿಜಾಬ್ ಧರಿಸಿ ಬರೆಯಲು ಅನುಮತಿ ಕೋರಿ ನಮಗೆ ಎರಡು ವಿನಂತಿಗಳು ಬಂದಿವೆ. ನಾವು ಅವರನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದೇವೆ.
ನಾವು ಎಲ್ಲಾ ವಿದ್ಯಾರ್ಥಿಗಳಿಗೆ ನಿಯಮಗಳನ್ನು ಅನುಸರಿಸಲು ಸೂಚಿಸಿದ್ದೇವೆ. ಹಿಜಾಬ್ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶವಿದೆ. ವಿದ್ಯಾರ್ಥಿಗಳು ಮತ್ತು ಕಾಲೇಜುಗಳು ಏಕರೂಪದ ನೀತಿಯನ್ನು ಪಾಲಿಸಬೇಕು. ಎಷ್ಟು ವಿದ್ಯಾರ್ಥಿಗಳು ತಪ್ಪಿಸಿಕೊಂಡಿದ್ದಾರೆ ಎಂಬ ಬಗ್ಗೆ ಇಲಾಖೆಯಿಂದ ಯಾವುದೇ ಮಾಹಿತಿ ಇಲ್ಲ. ಕಳೆದ ವರ್ಷ ನಡೆದ ಪರೀಕ್ಷೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Karnataka, girls, seek permission, wear, hijab PU exams,