ಬೆಂಗಳೂರು, ಫೆ.10- ಕರ್ನಾಟಕವು ದೇಶದಲ್ಲೇ ಇತರೆ ರಾಜ್ಯಗಳಿಗಿಂತಲೂ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಪರ ರಾಜ್ಯವಾಗಿದ್ದು, ಪ್ರಜಾಸ್ನೇಹಿ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನಹಿತ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಶಭಾಷ್‍ಗಿರಿ ನೀಡಿದ್ದಾರೆ.
ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ತಮ್ಮ 34 ಪುಟಗಳ ಭಾಷಣದಲ್ಲಿ ಸರ್ಕಾರದ ಸಾಧನೆಗಳ ಸಿಂಹಾವಲೋಕನ ಮಾಡಿದರು. ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡದ ರಾಜ್ಯಪಾಲರು, ಕರ್ನಾಟಕ ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದೆ. ಇಲ್ಲಿನ ಸರ್ಕಾರ ಪ್ರಗತಿಪರ, ಪ್ರಜಾಸ್ನೇಹಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ.
ಸದಸ್ಯರೆಲ್ಲರೂ ರಚನಾತ್ಮ ಮತ್ತು ಗುಣಾತ್ಮ ಚರ್ಚೆಯಲ್ಲಿ ಪಾಲ್ಗೊಂಡು ಮತ್ತಷ್ಟು ಪ್ರಗತಿಪರದತ್ತ ಕೊಂಡೊಯ್ಯಲಿ ಎಂದು ಆಶಿಸಿದರು.
ರೈತರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ. ಅಭಿವೃದ್ಧಿ ಪಥದಲ್ಲಿ ಮುಂಚೂಣಿ ರಾಜ್ಯವಾಗಿ ಹೊರ ಹೊಮ್ಮಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿಪಥ ಕ್ರಮಿಸುವ ವಿಶ್ವಾಸವಿದೆ ಎಂದು ಹೇಳಿದರು.
ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್‍ಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. 271 ನಮ್ಮ ಕ್ಲಿನಿಕ್‍ಗಳು ಕಾರ್ಯಾರಂಭ ಮಾಡಿವೆ. ಅನುಮೋದನೆ ಆಗಿರುವ 128 ಮಹಿಳಾ ಸ್ವಾಸ್ಥ್ಯ ಕೇಂದ್ರಗಳಲ್ಲಿ 53 ಮಹಿಳಾ ಸ್ವಾಸ್ಥ್ಯ ಕೇಂದ್ರಗಳು ಸಾರ್ವಜನಿಕ ಸೇವೆಗೆ ಶೀಘ್ರವೇ ಲೋಕಾರ್ಪಣೆಗೊಳಿವೆ ಎಂದು ತಿಳಿಸಿದರು.
ಕೇಂದ್ರ ರೈಲ್ವೆ ಸಚಿವಾಲಯದೊಂದಿಗೆ ಶೇ.50:50 ಪಾಲುದಾರಿಕೆಯೊಂದಿಗೆ 9 ಹೊಸ ರೈಲು ಮಾರ್ಗಗಳ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ. ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಸೆಮಿ ಹೈಸ್ಪೀಡ್ ರೈಲು ಸೇವೆ ಹಾಗೂ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇವೆ ಪ್ರಾರಂಭಿಸಲಾಗಿದೆ ಎಂದರು.
ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಮುಖ್ಯಮಂತ್ರಿ ರೈತ ವಿದ್ಯಾನಿಯನ್ನು ನೇಕಾರರು, ಕೃಷಿ ಕಾರ್ಮಿಕರು ಮತ್ತಿತರಿಗೆ ವಿಸ್ತರಣೆ ಮಾಡಲಾಗಿದೆ. 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾಯಿಸಲಾಗಿದೆ ಎಂದು ಹೇಳಿದರು.
ಕೃಷಿ ಸಂಜೀವಿನಿ ಯೋಜನೆಯಡಿ 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಪ್ರಸಕ್ತ ವರ್ಷ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಅನುಷ್ಠಾನ ಮಾಡುವುದಾಗಿ ರಾಜ್ಯಪಾಲರು ಘೋಷಿಸಿದರು. ಅಶಕ್ತ, ಅನಾರೋಗ್ಯಪೀಡಿತ, ನಿರ್ಗತಿಕ ಜಾನುವಾರು ಸಂರಕ್ಷಣೆ ಮಾಡಲು ರಾಜ್ಯ ಸರ್ಕಾರದಿಂದ 100 ಹೊಸ ಸರ್ಕಾರಿ ಗೋಶಾಲೆಗಳನ್ನು ನಿರ್ಮಿಸಲಾಗಿದೆ.
ಸರ್ಕಾರಿ ಹಾಗೂ ಖಾಸಗಿ ಗೋಶಾಲೆಗಳಲ್ಲಿರುವ ಜಾನುವಾರು ಸಂರಕ್ಷಿಸಲು ಸಾರ್ವಜನಿಕ ಸಹಭಾಗಿತ್ವ ಪ್ರೋತ್ಸಾಹಿಸುವ ಪುಣ್ಯಕೋಟಿ ದತ್ತು ಯೋಜನೆ ಜÁರಿಗೊಳಿಸಲಾಗಿದೆ ಎಂದರು.
ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಒಂದು ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಮರಣ ಹೊಂದಿದೆ ಕರು, ದನ, ಎತ್ತುಗಳಿಗೆ ಪರಿಹಾರ ನೀಡಲು ಸರ್ಕಾರದಿಂದ 37 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಕೇಂದ್ರ ಪುರಸ್ಕøತ ಯೋಜನೆಗಳಡಿ ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ 640 ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಲ್ಲಿ ಪ್ರತಿ ಸಂಘಕ್ಕೆ 3.99 ಲಕ್ಷ ರೂ. ಗಳಂತೆ ಒಟ್ಟು 193 ಕೋಟಿ ರೂ. ವೆಚ್ಚದಲ್ಲಿ ಗಣಕೀಕರಣ ಮಾಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 638.98 ಕೋಟಿ ರೂ. ವೆಚ್ಚದಲ್ಲಿ 27.85 ಲಕ್ಷ ಕುಟುಂಬಗಳ 50 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. ಜಲಜೀವನ್ ಮಿಷನ್ ಅಡಿಯಲ್ಲಿ 37.54 ಲಕ್ಷ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.
2011ರ ಕರ್ನಾಟಕ ಭೂ ಕಬಳಿಕೆ ಅನಿಯಮಕ್ಕೆ ತಿದ್ದುಪಡಿ ತಂದು ಬಿಬಿಎಂಪಿ ವ್ಯಾಪ್ತಿಯ 18 ಕಿ.ಮೀ., ಮಹಾನಗರ ಪಾಲಿಕೆ 10 ಕಿ.ಮೀ., ನಗರಪಾಲಿಕೆ ವ್ಯಾಪ್ತಿಯ 5 ಕಿ.ಮೀ., ಪುರಸಭೆ ವ್ಯಾಪ್ತಿಯ 3 ಕಿ.ಮೀ.ಗೆ ಸೀಮಿತಗೊಳಿಸಿ ಭೂಕಬಳಿಕೆ ಕಾಯ್ದೆ ಅನುಷ್ಠಾನ ಮಾಡಿದೆ ಎಂದು ಶ್ಲಾಘಿಸಿದರು.
ಎತ್ತಿನಹೊಳೆ ಸಮಗ್ರ ಕುಡಿಯು ನೀರಿನ ಯೋಜನೆಯಡಿ, ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿ¯್ಲÉಗಳ 527 ಕೆರೆಗಳಿಗೆ ನೀರು ತುಂಬಿಸಲಾಗುವುದು. ಕಳಸಾ-ಬಂಡೂರ ನಾಲಾ ತಿರುವ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಸಮ್ಮತಿಸಿದೆ ಎಂದರು.
ಪಂಜಾಬ್‍ನ ಗಡಿಯಲ್ಲಿ ಚೀನಾ ಮೇಡ್ ಶಸ್ತ್ರಾಸ್ತ್ರ, ಡ್ರಗ್ಸ್ ಎಸೆದ ಪಾಕ್ ಡ್ರೋನ್
ಅತ್ಯಾಚಾರ ಪ್ರಕರಣಗಳು ಮತ್ತು ಪೋಕ್ಸೋ ಕಾಯ್ದೆ ಪ್ರಕರಣಗಳ ವಿಚಾರಣೆಗಾಗಿ 31 ಶೀಘ್ರಗತಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಕನ್ನಡ ಮತ್ತು ಪ್ರಾದೇಶಿಕ ಭಾಷೆಯ ಚಲನ ಚಿತ್ರಗಳಿಗೆ ನೀಡುವ ಸಹಾಯಧನವನ್ನು 125 ರಿಂದ 200 ಚಲನಚಿತ್ರಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.
ರಾಜ್ಯದ ರಾಜಸ್ವ ಸಂಗ್ರಹಣೆಯು ಕಳೆದ ಜನವರಿ ಅಂತ್ಯಕ್ಕೆ ಶೇ.90ರಷ್ಟು ಗುರಿ ಸಾಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಇದು ಶೇ.21ರಷ್ಟು ಹೆಚ್ಚಳವಾಗಿದೆ. ಬಂಡವಾಳ ವೆಚ್ಚವು 33991 ಕೋಟಿ ರೂ. ಆಗಿದೆ.
ರಾಜ್ಯದ 1475 ತಾಂಡಾ, ಗೊಲ್ಲರ ಹಟ್ಟಿ, ಕುರುಬರಹಟ್ಟಿ ಮತ್ತಿತರ ಕಡೆ ವಾಸಿಸುತ್ತಿದ್ದ ದಾಖಲೆ ರಹಿತ ಜನರಿಗೆ ಶಾಶ್ವತವಾಗಿ ಸೂರು ಕಲ್ಪಿಸುವ ವ್ಯವಸ್ಥೆ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು 52,200 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿರುವುದು ದಾಖಲೆಯಾಗಿದೆ ಎಂದು ಪ್ರಶಂಸಿಸಿದರು.
ಉನ್ನತ ಶಿಕ್ಷಣವನ್ನು ಮತ್ತಷ್ಟು ಸುಧಾರಿಸಲು ದೇಶದಲ್ಲೇ ಮೊದಲ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ, ಹಾಸನದಲ್ಲಿ 7 ಹೊಸ ವಿಶ್ವ ವಿದ್ಯಾಲಯ ಸ್ಥಾಪನೆ, 7 ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಂಡಿದೆ ಎಂದರು.
ಬೆಂಗಳೂರು ಮಹಾನಗರ ಸಂಚಾರ ದಟ್ಟಣೆ ನಿವಾರಿಸಲು ವಿವಿಧ ಸಂಸ್ಥೆಗಳನ್ನು ಒಗ್ಗೂಡಿಸಲು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಕಾರ ಕಾಯ್ದೆ ಜಾರಿಗೆ ತರಲಾಗಿದೆ.
ಬಹು ನಿರೀಕ್ಷಿತ ಬೆಂಗಳೂರ ಮೆಟ್ರೋರೈಲು ಯೋಜನೆಯು ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ 7.53 ಕಿ.ಮೀ, ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೆ 6.12 ಕಿ.ಮೀ. ಸೇರಿ 13.65 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ.
ಇದೀಗ ಬೈಯ್ಯಪ್ಪನಹಳ್ಳಿಯಿಂದ ವೈಟ್‍ಫೀಲ್ಡ್‍ವರೆಗಿನ 18.81 ಕಿ.ಮೀ. ಉದ್ದ ಕಾಮಗಾರಿ ಪೂರ್ಣಗೊಂಡಿದ್ದು, ಮಾರ್ಚ್‍ನಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು.
ವಿಮಾನದಲ್ಲಿ ದೋಷ, 13 ಗಂಟೆ ನಿಲ್ದಾಣದಲ್ಲೇ ಕಾಲ ಕಳೆದ 170 ಪ್ರಯಾಣಿಕರು
ಹೊರವರ್ತುಲ ರಸ್ತೆ, ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ಬೆಂಗಳೂರು ಉಪನಗರ ರೈಲು ಯೋಜನೆ ಪ್ರಗತಿಯಲ್ಲಿದ್ದು, ಸಂಚಾರ ದಟ್ಟಣೆ ಕಡಿಮೆ ಮಾಡುತ್ತದೆ ಎಂಬ ವಿಶ್ವಾಸವನ್ನು ರಾಜ್ಯಪಾಲರು ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 11,333 ಪೌರ ಕಾರ್ಮಿಕರನ್ನು ನೇರ ಪಾವತಿ ವ್ಯವಸ್ಥೆಯಡಿ ಖಾಯಂಗೊಳಿಸಲು ಸರ್ಕಾರ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟಿದೆ. ಈ ವರ್ಷ 5,11,687 ಕಾರ್ಮಿಕರನ್ನು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಫಲಾನುಭವಿಗಳಾಗಿ ನೋಂದಾಯಿಸಲಾಗಿದೆ. ಕಾರ್ಮಿಕರ ರಾಜ್ಯ ವಿಮಾ ಯೋಜನೆ ಆಸ್ಪತ್ರೆಗಳ ಸಾಮಥ್ರ್ಯವನ್ನು 50ರಿಂದ 100 ಹಾಸಿಗೆ ಸಾಮಥ್ರ್ಯಕ್ಕೆ ಉನ್ನತೀಕರಣ, 19 ಹೊಸ ಕಾರ್ಮಿಕರ ವಿಮಾ ಚಿಕಿತ್ಸಾಲಯ ಪ್ರಾರಂಭಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
Karnataka, Government, Follows Model, Inclusive, Development, Governor,