ನಾಳೆಯಿಂದ ಸರ್ಕಾರಿ ಕಚೇರಿಗಳು ಬಂದ್..?

Social Share

ಬೆಂಗಳೂರು,ಫೆ.28- ಕೂಡಲೇ ಏಳನೇ ವೇತನ ಆಯೋಗದ ವರದಿಯನ್ನು ಅನುಷ್ಠಾನ ಮಾಡುವುದು ಹಾಗೂ ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ ಹಳೆಯ ವ್ಯವಸ್ಥೆಯನ್ನೇ ಮುಂದುವರೆಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ನಾಳೆಯಿಂದ ಕಚೇರಿಯನ್ನು ಬಂದ್‍ಮಾಡಿ ಅರ್ನಿಷ್ಟಾವ ಮುಷ್ಕರ ನಡೆಸಲಿದ್ದಾರೆ.

ಇದರಿಂದಾಗಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಕಚೇರಿಗೆ ಬರುವ ನೌಕರರನ್ನು ತಡೆ ಹಿಡಿಯುವುದು ಇಲ್ಲವೇ ಬಲವಂತವಾಗಿ ಮುಷ್ಕರದಲ್ಲಿ ಪಾಲ್ಗೊಳ್ಳಬೇಕೆಂದು ಯಾವುದೇ ಸಂಘಟನೆಗಳು ಒತ್ತಡ ಹಾಕಬಾರದೆಂದು ರಾಜ್ಯ ಸರ್ಕಾರ ಎಚ್ಚರಿಕೆ ಕೊಟ್ಟಿದೆ.

ಇದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ತತ್‍ಕ್ಷಣವೇ ಅನುಷ್ಠಾನ ಮಾಡಲು ಸರ್ಕಾರ ಸಿದ್ದವಿದ್ದು, ನೌಕರರು ಮುಷ್ಕರ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಎಂದು ಮನವಿ ಮಾಡಿದ್ದಾರೆ.

ಚಂದ್ರಯಾನ-3ರ ಮಿಷನ್‍ನಲ್ಲಿ ಇಸ್ರೋದ ಮತ್ತೊಂದು ಸಾಧನೆ

ಆದರೆ ಇದ್ಯಾವುದಕ್ಕೂ ಜಗ್ಗದ ಸರ್ಕಾರಿ ನೌಕರರು ನಾಳೆಯಿಂದ ಕರ್ತವ್ಯಕ್ಕೆ ಗೈರು ಹಾಜರಾಗಿ ಬೇಡಿಕೆ ಈಡೇರುವವರೆಗೂ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪಂಜಾಬ್, ರಾಜಸ್ಥಾನ, ಛತ್ತಿಸ್‍ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಎನ್‍ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೆ ನೌಕರರು ಆಗ್ರಹಿಸಿದ್ದಾರೆ.

ಸರ್ಕಾರಿ ಸೇವೆಯಲ್ಲಿ ವ್ಯತ್ಯಯ:
ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಛೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, ಬಿಡಬ್ಲ್ಯೂಎಸ್‍ಎಸ್ ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಛೇರಿ, ಪುರಸಭೆ ಕಛೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ (ಐಸಿಯು, ಎಂಐಸಿಯು ಹೊರತುಪಡಿಸಿ), ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್‍ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಆಗಲಿವೆ.

ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದರು. ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮುಷ್ಕರದ ನಿರ್ಧಾರವನ್ನ ಹಿಂತೆಗೆದುಕೊಳ್ಳಿ. 7ನೇ ವೇತನ ಆಯೋಗ ಶಿಫಾರಸ್ಸು ಜಾರಿಗೆ ಅಗತ್ಯವಿರುವ ಹಣವನ್ನು ಬಿಡುಗಡೆಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.

ಇದಕ್ಕೆ ತೃಪ್ತರಾದ ಸರ್ಕಾರಿ ನೌಕರರು, ಲಿಖಿತ ವಾಗ್ದಾನ ನೀಡುವಂತೆ ನೌಕರರು ಪಟ್ಟು ಹಿಡಿದಿದ್ದು, ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮುಷ್ಕರಕ್ಕೆ ಮುಂದಾಗಿರುವ ಸರ್ಕಾರಿ ನೌಕರರನ್ನು ಕರೆಸಿ ಸರ್ಕಾರ ಮಾತುಕತೆ ನಡೆಸಲಿದೆ ಎಂದು ಹೇಳಲಾಗಿತ್ತು. ಇದುವರೆಗೆ ಸರ್ಕಾರದ ಕಡೆಯಿಂದ ಸರ್ಕಾರಿ ನೌಕರರ ಸಂಘಕ್ಕೆ ಮಾತುಕತೆಗೆ ಬರುವಂತೆ ಬುಲಾವ್ ಬಂದಿಲ್ಲ.

ಈವರೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಕಾರಣ ಸರ್ಕಾರಿ ನೌಕರರು ಮುಷ್ಕರಕ್ಕೆ ಅಣಿಯಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರಕ್ಕಾಗಿ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು ತಮ್ಮ ಅೀನದಲ್ಲಿ ಬರುವ ಉಪಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಯುಕ್ತಿಕವಾಗಿ ಆಹ್ವಾನ ನೀಡುವ ಮೂಲಕ ಸಭೆಗಳನ್ನು ಏರ್ಪಡಿಸಿ ಮುಕ್ತವಾಗಿ ಚರ್ಚಿಸಿ ಅರ್ನಿಷ್ಟಾವ ಮುಷ್ಕರ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದೆ.

ನಾಳೆ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಬೇಕು. ಕೇಂದ್ರ ಸಂಘವು ನಿರ್ದಿಷ್ಟಪಡಿಸುವ ಮಾಹಿತಿಗಳನ್ನೊಳಗೊಂಡ ಪೋಸ್ಟರ್‍ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರಪಡಿಸಬೇಕು ಎಂದು ಸೂಚಿಸಿದೆ.

ಅನಿರ್ದಿಷ್ಟಾವ ಮುಷ್ಕರವನ್ನು ಸಂಘಟನೆಗಳು ಅಧಿಕೃತ ಸೂಚನೆ ನೀಡುವವರೆಗೆ ಮುಂದುವರಿಸಬೇಕು. ಮುಷ್ಕರ ನಡೆಯುತ್ತಿರುವ ಸಂಧರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆ-ಉಪವಾಸ- ಧರಣಿ- ಸತ್ಯಾಗ್ರಹ-ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ ಹಾಗೂ ಶಾಂತಿಯುತವಾಗಿ ಗೈರುಹಾಜರಾಗುವ ಮೂಲಕ ಹೋರಾಟ ಮಾಡಬೇಕೆಂದು ತಿಳಿಸಿದೆ.

ಹಿಂದೂ ದೇವರುಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದವನಿಗೆ ಬಿತ್ತು ಗೂಸಾ

ತಾಲೂಕು, ಜಿಲ್ಲಾ ಮಟ್ಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಇಲಾಖಾವಾರು ತಂಡಗಳನ್ನು ರಚಿಸಿಕೊಂಡು ಮುಷ್ಕರ ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಜಿಲ್ಲೆ ತಾಲೂಕು ವ್ಯಾಪ್ತಿಯ ಸರ್ಕಾರಿ ಕಛೇರಿ, ಶಾಲಾ-ಕಾಲೇಜು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳ ಮನವೊಲಿಸಿ ಕರ್ತವ್ಯಕ್ಕೆ ಹಾಜರಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದೆ.

ರಾಜ್ಯ ಸಂಘ ನಿರ್ದಿಷ್ಟಪಡಿಸಿರುವ ಮಾದರಿಯಲ್ಲಿ ಕರಪತ್ರ, ಇಮೇಜ್, ಪೋಸ್ಟರ್ ಮತ್ತು ಪ್ಲೆಕ್ಸ್ ಇತ್ಯಾದಿ ಮಾಡಿಸಿ ಪ್ರಚಾರ ಕೈಗೊಳ್ಳಬೇಕು. ಮುಷ್ಕರ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳಲ್ಲಿ ಸರ್ಕಾರವನ್ನು ಟೀಕಿಸಬಾರದು ಹಾಗೂ ಯಾವುದೇ ಜನಪ್ರತಿನಿಧಿಗಳನ್ನು ಭಿನ್ನ ಹೇಳಿಕೆಗಳಿಂದ ಗೊಂದಲ ಉಂಟಾಗುವ ಸಾಧ್ಯತೆ ಇರುವುದರಿಂದ ಮುಷ್ಕರಕ್ಕೆ ಸಂಬಂಧಿಸಿದಂತೆ ಮುದ್ರಣ ಎಲೆಕ್ಟ್ರಾನಿಕ್ ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದೆ.

ಮುಷ್ಕರದ ಸಂದರ್ಭದಲ್ಲಿ ಸರ್ಕಾರ ಮುಷ್ಕರವನ್ನು ಹತ್ತಿಕ್ಕಲು ಕಾನೂನು ಕ್ರಮಗಳ ಮೂಲಕ ಬೆದರಿಕೆ ಹಾಕಿದ್ದಲ್ಲಿ ಸರ್ಕಾರಿ ನೌಕರರು ಎದೆಗುಂದದೆ ಮುಷ್ಕರವನ್ನು ಯಶಸ್ವಿಗೊಳಿಸಬೇಕು.

ದೇಶದ ಸಮಗ್ರ ಅಭಿವೃದ್ಧಿಗೆ ತಂತ್ರಜ್ಞಾನ ನೆರವು ನೀಡಲಿದೆ; ಮೋದಿ

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು (ಕ್ಯಾಶುವಾಲಿಟಿ, ಐಸಿಯು, ಎಂಐಸಿಯು-ಮಾತ್ರ) ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಬೇಕು. ಇನ್ನುಳಿದ ಎಲ್ಲಾ ಇಲಾಖೆಯ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳು ಮುಷ್ಕರದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಲಾಗಿದೆ.

Karnataka, Govt, employees, start, indefinite, strike, March 1,

Articles You Might Like

Share This Article