Saturday, October 12, 2024
Homeರಾಜ್ಯಎಚ್ಚೆತ್ತ ಸರ್ಕಾರ : ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಕ್ರಮ

ಎಚ್ಚೆತ್ತ ಸರ್ಕಾರ : ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಕ್ರಮ

ಬೆಂಗಳೂರು,ಡಿ.28- ಕನ್ನಡಪರ ಸಂಘಟನೆಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರಾಜ್ಯಸರ್ಕಾರ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹಕಚೇರಿ ಕೃಷ್ಣದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ.

ಗೃಹ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವಾಣಿಜ್ಯ ಮಳಿಗೆಗಳು ಹಾಗೂ ವ್ಯಾಪಾರೋದ್ಯಮಗಳಲ್ಲಿ ಕನ್ನಡ ಭಾಷಾ ನಾಮಫಲಕವನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡರ ನೇತೃತ್ವದಲ್ಲಿ ಬೆಂಗಳೂರಿನಾದ್ಯಂತ ಬೃಹತ್ ಪ್ರತಿಭಟನೆಗಳಾಗಿವೆ. ಈ ವೇಳೆ ಹಲವಾರು ಆಸ್ತಿಪಾಸ್ತಿಗೂ ಧಕ್ಕೆಯಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ನಾರಾಯಣಗೌಡ ಹಾಗೂ ಅವರ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದು ಮತ್ತಷ್ಟು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕನ್ನಡ ಸಂಘಟನೆಗಳನ್ನು ಕೆಣಕಿದಂತಾಗಿದೆ. ಹೋರಾಟ ತೀವ್ರ ಸ್ವರೂಪಕ್ಕೆ ತಿರುಗುವುದರ ಮುನ್ಸೂಚನೆ ಪಡೆದ ಮುಖ್ಯಮಂತ್ರಿಯವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಫೆಲ್ಡಿಂಗ್ ವೇಳೆ ಕನ್ನಡಲ್ಲೇ ‘ಕೈಗೆ ಹಾಕಲೋ’ ಎಂದ ಕೆ.ಎಲ್.ರಾಹುಲ್ ವಿಡಿಯೋ ವೈರಲ್

ಕನ್ನಡ ಸಂಘಟನೆಗಳ ಹೋರಾಟದ ವಿಷಯದಲ್ಲಿ ಸಹನೆಯಿಂದ ವರ್ತಿಸುವಂತೆ ಸಭೆಯಲ್ಲಿ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರೊಂದಿಗೆ ಸಂಘರ್ಷಗಳಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ಅನಗತ್ಯವಾದ ಬಲಪ್ರಯೋಗಕ್ಕೆ ಅವಕಾಶ ನೀಡಬಾರದು. ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜೊತೆ ಸಹನೆಯಿಂದ ವರ್ತಿಸಬೇಕು ಎಂದು ಪೊಲೀಸರು ಸೂಚಿಸಿರುವುದಾಗಿ ತಿಳಿದುಬಂದಿದೆ.

ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಆದೇಶವನ್ನು ಜಾರಿಗೊಳಿಸಲು ಬಿಬಿಎಂಪಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಕಾರಿಗಳು ಕೆಲಸ ಮಾಡಬೇಕು. ವಾಣಿಜ್ಯ ಮತ್ತು ಉದ್ಯಮಗಳಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ನಾಮಫಲಕ ಬದಲಾವಣೆಗೆ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದ್ದಾರೆ.

RELATED ARTICLES

Latest News