Sunday, July 7, 2024
Homeರಾಜ್ಯಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ

ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು, ಜೂ.9- ಯಶಸ್ವಿನಿ ಯೋಜನೆಯಡಿ ಬರುವ 200 ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ರಾಜ್ಯಸರ್ಕಾರ ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ಆಸ್ಪತ್ರೆಗಳು ಸಹ ಹೆಚ್ಚಾಗಿದ್ದು, ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಇದರಿಂದ ಭರ್ಜರಿ ಲಾಭವಾಗಲಿದೆ. 2003 ರಲ್ಲಿ ಆರಂಭವಾಗಿದ್ದ ಈ ಯೋಜನೆಯು ಕಾರಣಾಂತರಗಳಿಂದ 2018 ರಲ್ಲಿ ಸ್ಥಗಿತವಾಗಿತ್ತು. 2023ರ ಜನವರಿಯಲ್ಲಿ ಸಹಕಾರ ಸಂಘದ ಅಡಿ ಮರು ಜಾರಿಗೊಳಿಸಿತ್ತು. 2023-24 ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾ.31 ರವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ.

ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‍ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ.

ಇದರಿಂದ ಯೋಜನೆಯ ಫಲಾನುಭವಿಗಳಿಗೆ ಸುಲಭವಾಗಿ ಚಿಕಿತ್ಸೆ ದೊರೆಯಲಿದೆ. ಯಶಸ್ವಿನಿ ಯೋಜನೆಯಡಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳ ಪರಿಷ್ಕರಣೆ ಮಾಡಲಾಗಿದೆ. ಈ ಯೋಜನೆಯಡಿ 370ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ ಈಗ 600 ರ ಗಡಿ ದಾಟಿದೆ.

RELATED ARTICLES

Latest News