ಬೆಂಗಳೂರು,ಫೆ.22- ಗ್ರಾಮಪಂಚಾಯ್ತಿಗಳ ಭೌಗೋಳಿಕ ವಿಸ್ತೀರ್ಣಕ್ಕೆ ಅನುಕೂಲ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ತಿದ್ದುಪಡಿ ವಿಧೇಯಕ 2024ನ್ನು ವಿಧಾನಪರಿಷತ್‍ನಲ್ಲಿ ಅಂಗೀಕಾರ ನೀಡಲಾಯಿತು. ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಷತ್‍ನಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡರು.
ವಿಧೇಯಕದ ಮೇಲೆ ಮಾತನಾಡಿದ ಅವರು, 2024ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ತಿದ್ದುಪಡಿಯಿಂದ ಗ್ರಾಮಪಂಚಾಯ್ತಿಗಳ ಬೌಗೋಳಿಕ ವಿಸ್ತೀರ್ಣಕ್ಕೆ ಇದು ಅನುಕೂಲವಾಗಲಿದೆ ಎಂದು ಹೇಳಿದರು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಧೇಯಕವನ್ನು ತಿದ್ದುಪಡಿ ಮಾಡಲಾಗಿದೆ. ಗ್ರಾಮಪಂಚಾಯ್ತಿಗಳ ಭೌಗೋಳಿಕ ವಿಸ್ತೀರ್ಣವನ್ನು ನಿಗದಿಪಡಿಸಲು ಅನುಕೂಲವಾಗುತ್ತದೆ ಎಂದರು.
ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.
ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ
ಕರ್ನಾಟಕ ಪಂಚಾಯತ್‍ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ.
ವಿದ್ಯುತ್ ಕಂಬದಿಂದ ಬಿದ್ದು ಲೈನ್‍ಮನ್ ಸಾವು
ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದುಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅನಿಯಮ 1993 ಅನ್ನು ತಿದ್ದುಪಡಿ ಮಾಡುವುದು ಅವಶ್ಯ ಎಂದು ಈ ವಿಧೇಯಕ ತರಲಾಗಿದೆ. ಈ ವಿಧೇಯಕದ ಮೇಲೆ ಸದಸ್ಯರಾದ ಕೆ.ಎಸ್.ತಿಪ್ಪೇಸ್ವಾಮಿ, ತೇಜಸ್ವಿನಿ ರಮೇಶ್, ಬಿ.ಕೆ.ಹರಿಪ್ರಸಾದ್, ನಾಗರಾಜ್ ಯಾದವ್ ಹಾಗೂ ಪ್ರತಿಪಕ್ಷದ ನಾಯಕ ಕೋಟಾಶ್ರೀನಿವಾಸ್ ಪೂಜಾರಿ ಮಾತನಾಡಿ, ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದರು. ಬಳಿಕ ಸಭಾಧ್ಯಕ್ಷರು ಧ್ವನಿಮತದ ಮೂಲಕ ವಿಧೇಯಕಕ್ಕೆ ಅಂಗೀಕಾರ ನೀಡಿದರು.