ಬೆಂಗಳೂರು, ಜೂ.22- ನಗರದ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ (ರೇಸ್ ಕೋರ್ಸ್) ಕುದುರೆ ಪಂದ್ಯಗಳ ಆಯೋಜನೆಗೆ ಏಕ ಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.
ರೇಸ್ ಕೋರ್ಸ್ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡುವುದಕ್ಕೆ ಅನುಮತಿ ನೀಡಿದ್ದ ಮಧ್ಯಂತರ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾ। ಎನ್.ವಿ. ಅಂಜಾರಿಯಾ ಮತ್ತು ನ್ಯಾ। ಕೆ.ವಿ. ಅರವಿಂದ್ ಅವರಿದ್ದ ನ್ಯಾಯಪೀಠ ಏಕ ಸದಸ್ಯ ಪೀಠ ಮಧ್ಯಂತರ ಆದೇಶಕ್ಕೆ ತಡೆ ನೀಡಿದೆ.
ಸರ್ಕಾರ ಮೇಲನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಕುದರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಅಮಾನತ್ತಿನಿಟ್ಟಿರುವುದಾಗಿ ಪೀಠ ತಿಳಿಸಿದೆ.
ಅಲ್ಲದೆ, ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್ಗಳ ಆಯೋಜನೆಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ಆ. 13ಕ್ಕೆ ಮುಂದೂಡಿದೆ.