ಬೆಂಗಳೂರು : ಅಂತಿಮ ತೀರ್ಪು ಬರುವವರೆಗೂ ಯಾವುದೇ ರೀತಿಯ ಧಾರ್ಮಿಕ ಗುರುತುಗಳನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಪ್ರವೇಶಿಸದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರ ನೇತೃತ್ವದ ತ್ರಿಸದಸ್ಯ ಪೀಠ ಸುದೀರ್ಘ ವಾದವನ್ನು ಆಲಿಸಿದ ನಂತರ ರಾಜ್ಯದಲ್ಲಿ ಶಾಂತಿ, ನೆಮ್ಮದಿ ಕಾಪಾಡುವುದು ಮುಖ್ಯವಾಗಿದೆ. ಶಿಕ್ಷಣ ಸಂಸ್ಥೆಗಳು ಆರಂಭಗೊಂಡನಂತರ ಯಾವುದೇ ರೀತಿಯ ಧಾರ್ಮಿಕ ಸಂಕೇತವನ್ನು ಸೂಚಿಸುವ ಉಡುಪುಗಳನ್ನು ಬಳಸುವಂತಿಲ್ಲ ಎಂದು ಹೇಳುವ ಮೂಲಕ ಹಿಜಾಬ್ ವಿವಾದಕ್ಕೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿದೆ.
ಇದೆ ವೇಳೆ ಅರ್ಜಿದಾರರ ವಾದವನ್ನೂ ಕೂಡ ಪರಿಶೀಲಿಸಲಾಗುವುದು, ನ್ಯಾಯಾಲಯದ ಮೇಲೆ ನೀವು ನಂಬಿಕೆ ಇಡಬೇಕು ಎಂದು
ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ನಿರಂತರವಾಗಿ ಈ ವಿಚಾರದ ವಿಚಾರಣೆ ನಡೆಸಲು ನ್ಯಾಯಾಲಯ ಸಿದ್ಧವಿದ್ದು ಶಾಲಾ ಕಾಲೇಜುಗಳು ಶೀಘ್ರದಲ್ಲೇ ಆರಂಭಗೊಂಡು ಶೈಕ್ಷಣಿಕ ಚಟುವಟಿಕೆಗಳು ನಡೆಯಲಿ ಎಂದು ಆದೇಶ ನೀಡಿದ್ದಾರೆ.
ಈಗ ಶಾಲೆ-ಕಾಲೇಜುಗಳನ್ನು ಪ್ರವೇಶಿಸುವಾಗ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದ್ದು ಹಿಜಾಬ್ ಅಥವಾ ಕೇಸರಿ ಶಾಲು ಧರಿಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಮೂರ್ತಿಗಳು ಮೌಖಿಕ ಆದೇಶ ಹೊರಡಿಸಿದರು.
