ಬೆಂಗಳೂರು, ಆ.22- ಕರ್ನಾಟಕ ಪತ್ರಕರ್ತರ ಸಹಕಾರ ಸಂಘ 75ನೇ ವರ್ಷಪೂರೈಸಿರುವ ಹಿನ್ನೆಲೆಯಲ್ಲಿ ನಾಳೆ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಅಮೃತ ಸಂಭ್ರಮ ಹಾಗೂ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಹಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9.00 ಗಂಟೆಗೆ ಮಣಿಪಾಲ್ ಆಸ್ಪತ್ರೆ ವೈದ್ಯರ ತಂಡದಿಂದ ಸಂಘದ ಸದಸ್ಯರು ಹಾಗೂ ಸದಸ್ಯರ ಕುಟುಂಬವರ್ಗಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಭಿರವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10.30ಕ್ಕೆ ಅಮೃತ ಸಂಭ್ರಮ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಸಂಘದ ಸುವರ್ಣ ಭವನಕ್ಕೆ ಅಳವಡಿಸಲಾಗಿರುವ ಲಿಫ್‌್ಟ ಅನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ರಮೇಶ್ ಎಂ ಪಾಳ್ಯ ತಿಳಿಸಿದ್ದಾರೆ.
ಇವರೊಂದಿಗೆ ಮುಖ್ಯ ಅತಿಥಿಗಳಾಗಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು, ಕರ್ನಾಟಕ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಂಘ ಹೊರತಂದಿರುವ ಅಮೃತ ಸಂಭ್ರಮ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು. ಅಲ್ಲದೆ, ಸಂಘಕ್ಕಾಗಿ ಶ್ರಮಿಸಿದ ಹಿರಿಯ ಚೇತನಗಳಾದ ಮಾಜಿ ಅಧ್ಯಕ್ಷರು, ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಗೌರವಕಾರ್ಯದರ್ಶಿಗಳು ಮತ್ತು ಸ್ಮರಣ ಸಂಚಿಕೆ ಸಂಪಾದಕೀಯ ಮಂಡಳಿ ಸದಸ್ಯರನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮ ಮುಗಿದ ನಂತರ ಮಧ್ಯಾಹ್ನ 12.00ಕ್ಕೆ ಸಂಘದ 2024-2025ನೇ ಸಾಲಿನ ಸರ್ವಸದಸ್ಯರ ಸಭೆಯು ಸಂಘದ ಅಧ್ಯಕ್ಷ ರಮೇಶ್ ಎಂ(ಪಾಳ್ಯ) ಅವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಈ ವೇಳೆಯಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾವು ದಯವಿಟ್ಟು ಸಭೆಗೆ ಹಾಜರಾಗಿ, ಕಾರ್ಯಕ್ರಮವನ್ನು ಯಶಸ್ವಿಗಳಿಸಬೇಕಾಗಿ ವಿನಂತಿಸುತ್ತೇವೆ.
- ತೆರಿಗೆ ವಂಚನೆ, ಗೇಮಿಂಗ್ ಆ್ಯಪ್ಗಳ ಮೂಲಕ ಅಕ್ರಮ ಆಸ್ತಿ ಆರೋಪ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇ.ಡಿ.ವಶಕ್ಕೆ
- ಬೀದಿ ನಾಯಿಗಳ ಕುರಿತ ತೀರ್ಪು ಮಾರ್ಪಾಡು ಮಾಡಿದ ಸುಪ್ರೀಂ
- ನಾಳೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಮಹೋತ್ಸವ
- ಸವದತ್ತಿ ಯಲ್ಲಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ರೂ. ವೆಚ್ಚದಲ್ಲಿ ಯೋಜನೆ : ಎಚ್.ಕೆ.ಪಾಟೀಲ್
- ಬಿಜೆಪಿಯಲ್ಲಿ ಬುದ್ಧಿವಂತರಿಗೆ ಸ್ಥಾನ ಇಲ್ಲ : ಕಾಲೆಳೆದ ಸಿಎಂ ಸಿದ್ದರಾಮಯ್ಯ