Sunday, February 16, 2025
Homeರಾಜ್ಯಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ : ಬೊಮ್ಮಾಯಿ

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ : ಬೊಮ್ಮಾಯಿ

ಬೆಂಗಳೂರು,ಅ.2- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಪ್ರಕ್ಷುಬ್ಧ ವಾತಾವರಣವಿರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂಥ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂಥ ಘಟನೆಗಳು ನಡೆಯುತ್ತದೆ. ಇಂತಹ ಸ್ಟೇಷನ್‍ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿಯನ್ನು ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ. ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‍ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ ಎಂದರು.

ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ

ಇದನ್ನು ಸಮಗ್ರವಾಗಿ ನಿಭಾಯಿಸಬೇಕು, ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು, ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು ಎಂದು ಹೇಳಿದರು.

ಮಾತಲ್ಲಿ ಮಾತ್ರ ಗಾಂಧಿ: ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು ಎಂದರು.

ಸಿಕ್ಕಲ್ಲೆಲ್ಲಾ ಮದ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳೇ ಎಂದು ಹೇಳಿದರು.

RELATED ARTICLES

Latest News