ಬೆಂಗಳೂರು,ಜು.22- ಲೋಕೋಪ ಯೋಗಿ ಇಲಾಖೆ ಅಡಿ ಅನುದಾನ ಹಂಚಿಕೆಯಲ್ಲಿ ರಾಜಕೀಯ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿಷಯ ಆಡಳಿತ ಹಾಗೂ ಪ್ರತಿಪಕ್ಷ ಶಾಸಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಹೈದ್ರಾಬಾದ್, ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನದಡಿ ಪ್ರತ್ಯೇಕ ಅನುದಾನ ನೀಡಿದಂತೆ ಹೆಚ್ಚು ಮಳೆ ಸುರಿದು ರಸ್ತೆ ಹಾಳಾಗುವ ಕರಾವಳಿ ಭಾಗಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು.
ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿಯ ಸುರೇಶ್‍ಗೌಡ, ಅನುದಾನವನ್ನು ಒಂದು ಪಕ್ಷದ ಶಾಸಕರಿಗೆ ಹೆಚ್ಚು ನೀಡಲಾಗುತ್ತಿದೆ. ಬಿಜೆಪಿ-ಜೆಡಿಎಸ್‍ನವರಿಗೆ ತಾರತಮ್ಯವಾಗುತ್ತಿದೆ. ಇದನ್ನು ಸರಿಪಡಿಸದೇ ಇದ್ದರೆ ನಾವು ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನು ಒಪ್ಪದ ಕಾಂಗ್ರೆಸ್ ಶಾಸಕರು ಬಿಜೆಪಿ ಆಡಳಿತದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡಿಮೆ ಅನುದಾನ ನೀಡಲಾಗುತ್ತಿತ್ತು ಎಂದು ತಿರುಗೇಟು ನೀಡಿ ವಾಗ್ವಾದಕ್ಕಿಳಿದರು.
ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಸುನಿಲ್‍ಕುಮಾರ್‍ರವರು ರಸ್ತೆ ದುರಸ್ತಿಗೆ ಎನ್‍ಡಿಆರ್‍ಎ-ïನಡಿ 30 ಸಾವಿರ, ಮನೆ ನಿರ್ಮಾಣಕ್ಕೆ 1.25 ಲಕ್ಷ ರೂ. ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಲುವುದಿಲ್ಲ. ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆ, ಮನೆಗಳಿಗೆ ವಿಶೇಷ ಪ್ಯಾಕೇಜ್ ನೀಡಿ ಎಂದು ಒತ್ತಾಯಿಸಿದರಲ್ಲದೆ ಹಿಂದೆ ಮಹದೇವಪ್ಪ ಲೋಕೋಪಯೋಗಿ ಸಚಿವ ರಾಗಿದ್ದಾಗ ತಾರತಮ್ಯ ಮಾಡದೆ ಅನುದಾನ ಹಂಚಿದ್ದರು. ಈಗ ತಾರತಮ್ಯ ಹೆಚ್ಚಾಗಿದೆ ಎಂದು ಹೇಳಿದರು.
ವಿರೋಧ ಪಕ್ಷದ ಶಾಸಕ ಆರ್.ಅಶೋಕ್ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗದಂತೆ ಎಚ್ಚರಿಕೆ ವಹಿಸುವಂತೆ ತಾಕೀತು ಮಾಡಿದರು.
ಉತ್ತರ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಳೆಗಾಲದ ನಂತರ ಹಾಳಾದ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು. ಸದ್ಯಕ್ಕೆ ತಾತ್ಕಾಲಿಕವಾಗಿ ಸಂಚಾರ ಸುಗಮಗೊಳ್ಳಲು ಅಗತ್ಯ ಕೆಲಸ ನಿರ್ವಹಿಸುವುದಾಗಿ ಹೇಳಿದರಲ್ಲದೆ ಅನುದಾನ ಹಂಚಕೆಯಲ್ಲಿ ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ. ಸಿಐಆರ್‍ಎ-ïನ ಅನುದಾನವನ್ನು ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು.