ನವದೆಹಲಿ,ಮಾ.14- ಕೆಎಸ್‍ಡಿಎಲ್ ಹಗರಣದಲ್ಲಿ ಅಚ್ಚರಿಯ ರೀತಿಯಲ್ಲಿ ಜಾಮೀನು ಪಡೆದು ಬಂಧನದಿಂದ ಪಾರಾಗಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ (ಕೆಎಸ್‍ಡಿಎಲ್) ಗುತ್ತಿಗೆ ಹಗರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ.
ಇಂದು ನಡೆದ ಕಲಾಪದ ಆರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಅರ್ಜಿಯ ತುರ್ತು ವಿಚಾರಣಗೆ ಮನವಿ ಸಲ್ಲಿಸಲಾಗಿತ್ತು. ಮುಖ್ಯನ್ಯಾಯಮೂರ್ತಿಗಳು ಮತ್ತೊಬ್ಬ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ಅರ್ಜಿ ಸಲ್ಲಿಸಲು ಲೋಕಾಯುಕ್ತ ಪರ ವಕೀಲರಿಗೆ ಸಲಹೆ ನೀಡಿದ್ದಾರೆ.
ಅರ್ಜಿಯನ್ನು ಆದ್ಯತೆ ಮೇರೆಗೆ ತುರ್ತು ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದಾಗ, ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದಲ್ಲಿ ಸಾಂವಿಧಾನಿಕ ಪೀಠದ ವಿಷಯಗಳ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಲೋಕಾಯುಕ್ತ ಅರ್ಜಿಯನ್ನು ಇಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲ.
ಆಸ್ಟ್ರೇಲಿಯಾಕ್ಕೆ ಪರಮಾಣುಚಾಲಿತ ಜಲಾಂತರಗಾಮಿ ನೌಕೆ : ಬಿಡೆನ್
ನೀವು ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ವಿಷಯವನ್ನು ಪ್ರಸ್ತಾಪಿಸಿ, ಇಲ್ಲದಿದ್ದರೆ ಇದೇ ನ್ಯಾಯಾಲಯ, ಸಂವಿಧಾನ ಪೀಠದ ಅರ್ಜಿಗಳ ವಿಚಾರಣೆ ಮುಗಿದ ಬಳಿಕ ನಿಮ್ಮ ಅರ್ಜಿಯನ್ನು ಪರಿಶೀಲಿಸಲಿದೆ ಎಂದು ಮುಖ್ಯನ್ಯಾಯಮೂರ್ತಿಗಳು, ಲೋಕಾಯುಕ್ತ ವಕೀಲರಿಗೆ ಹೇಳಿದರು. ಮಧ್ಯಾಹ್ನ 2 ಗಂಟೆಗೆ ವಿಚಾರಣೆ ಕೈಗೆತ್ತಿಕೊಳ್ಳಬಹುದು ಎಂದು ವಕೀಲರು ಮನವಿ ಮಾಡಿದಾಗ, ಮೊದಲು ಕೌಲ್ ಅವರ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿ ಎಂದು ಸಲಹೆ ನೀಡಿದರು.
ತಕ್ಷಣ ವಕೀಲರು ನ್ಯಾಯಮೂರ್ತಿ ಕೌಲ್ ನೇತೃತ್ವದ ನ್ಯಾಯಾಲಯಕ್ಕೆ ಧಾವಿಸಿ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಸಲ್ಲಿಸಿದರು. ನ್ಯಾಯಮೂರ್ತಿ ಕೌಲ್ ಅವರು ತುರ್ತು ವಿಚಾರಣೆ ಅಗತ್ಯ ಏನು ಎಂದು ಪ್ರಶ್ನಿಸಿದರು.
ಆರೋಪಿ ಹಾಲಿ ಶಾಸಕರಾಗಿದ್ದು, ಆತನ ಬಳಿಯಿದ್ದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕೀಲರು ಮನವಿ ಮಾಡಿದರು.
ಎಷ್ಟು ಸಾಧ್ಯವೋ ಅಷ್ಟು ಶೀಘ್ರವಾಗಿ ಅರ್ಜಿಯ ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿದ ನ್ಯಾಯಮೂರ್ತಿ ಕೌಲ್ ಅವರು, ಈಗಾಗಲೇ ಜಾಮೀನು ನೀಡಿರುವ ಹೈಕೋರ್ಟ್ ತನ್ನ ವಿವೇಚನೆಯನ್ನು ಬಳಸಿದೆ ಎಂದು ಹೇಳಿದರು.
ಬಿಜೆಪಿಗರನ್ನು ಕೆರಳಿಸಿದ ಮೋದಿ ವಿರುದ್ಧದ ರಾಂಧವಾ ಹೇಳಿಕೆ
ವಕೀಲರು ಮಧ್ಯಾಹ್ನ 2 ಗಂಟೆಗೆ ವಿಷಯ ಪಟ್ಟಿ ಮಾಡುವಂತೆ ಮತ್ತೊಮ್ಮೆ ಮನವಿ ಮಾಡಿದು. ಇದು ಜಾಮೀನು ರದ್ದತಿ ವಿಷಯವಾಗಿದ್ದು, ಸೂಕ್ತ ಸಮಯದಲ್ಲಿ ಪಟ್ಟಿ ಮಾಡಲಾಗುವುದು ಎಂದು ನ್ಯಾಯಮೂರ್ತಿ ಕೌಲ್ ಸ್ಪಷ್ಟ ಪಡಿಸಿದ್ದಾರೆ.
ಕೆಎಸ್‍ಡಿಎಲ್‍ಗೆ ರಾಸಾಯನಿಕ ಪೂರೈಕೆಗೆ ಸಂಬಂಧಿಸಿದ ಟೆಂಡರ್ ಕೊಡಿಸಲು 81 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಡಲಾಗಿತ್ತು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿರುವ ಅಧಿಕಾರಿಯಾಗಿರುವ ಬಿಜೆಪಿ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ತಂದೆಯ ಪರವಾಗಿ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾರ್ಚ್ 2 ರಂದು ಬಂಧಿಸಿದ್ದರು.
ಬಂಧನದ ಬಳಿಕ ಲೋಕಾಯುಕ್ತ ಪೊಲೀಸರು ಅವರ ಮನೆ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ 8.23 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ನಂತರದ ಬೆಳವಣಿಗೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಕೆಎಸ್‍ಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೊದಲ ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಪೊಸುವ ಹಂತದಲ್ಲಿ ಹೈಕೋರ್ಟ್‍ನ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು, ಸಾಕ್ಷ್ಯ ನಾಶ ಮಾಡಬಾರದು, ಐದು ಲಕ್ಷ ರೂಪಾಯಿ ಭದ್ರತಾ ಬಾಂಡ್ ಒದಗಿಸುವ ಜೊತೆಗೆ ವಿಚಾರಣಾಕಾರಿಯ ಮುಂದೆ 48 ಗಂಟೆಯ ಒಳಗೆ ಹಾಜರಾಗುವಂತೆ ಆದೇಶಿಸಿತ್ತು. ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತ್ತು.
ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ
ಹೈಕೋರ್ಟ್ ಆದೇಶದಂತೆ ಮಾಡಾಳು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಒಳಪಟ್ಟಿದ್ದಾರೆ. ತಮ್ಮನ್ನು ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಮಾಡಾಳು ವಿರೂಪಾಕ್ಷಪ್ಪ ವಾದಿಸಿರುವುದನ್ನು ಸ್ಮರಿಸಬಹುದು.
Karnataka, Lokayukta, Madalu Virupakshappa, bail, application, Supreme Court,