ಬೆಂಗಳೂರು,ಮಾ.3- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ಮನೆಯಲ್ಲೂ ಮೂಟೆಗಳಲ್ಲಿ ಕಟ್ಟಿಡಲಾಗಿದ್ದ ಗರಿ ಗರಿ ನೋಟಿನ ಕಂತೆಗಳು ಪತ್ತೆಯಾಗಿವೆ.
ಸಂಜಯನಗರದಲ್ಲಿರುವ ಪ್ರಶಾಂತ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಅವರ ಮನೆಯಲ್ಲಿ 6 ಕೋಟಿ ರೂ.ಗೂ ಹೆಚ್ಚಿನ ನಗದು ಪತ್ತೆಯಾಗಿದೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.
ನಿರ್ದಿಷ್ಟ ದೂರು ಆಧರಿಸಿ ನಿನ್ನೆ ಪ್ರಶಾಂತ್ ಮಾಡಾಳ್ ಅವರಿಗೆ ಸೇರಿದ ಕೃಮಾರಕೃಪ ಸಮೀಪ ಇರುವ ಖಾಸಗಿ ಕಚೇರಿ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 2.2 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದರು. ನಂತರ ಅವರ ಮನೆ ಮೇಲೆ ದಾಳಿ ನಡೆಸಿದಾಗ 6.10 ಕೋಟಿ ರೂ. ನಗದು ಪತ್ತೆಯಾಗಿದೆ. ಒಟ್ಟು 8.12 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚುವ ಉದ್ದೇಶದಿಂದ ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಆಡಳಿತರೂಢ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ.
ತಂದೆಯಿಂದ ಲೈಂಗಿಕ ಕಿರುಕುಳ: ಮನನೊಂದ ಬಾಲಕಿ ಆತ್ಮಹತ್ಯೆ
ಬಿಜೆಪಿ ಶಾಸಕರಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರು ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷರಾಗಿದ್ದರೆ, ಅವರ ಮಗ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಶಾಂತ್ ಅವರ ಬಳಿಯಿಂದ ವಶಪಡಿಸಿಕೊಂಡಿರುವ ಹಣದ ಬಗ್ಗೆ ಲೋಕಾಯುಕ್ತ ಸಂಸ್ಥೆ ಸ್ವತಂತ್ರ ತನಿಖೆ ನಡೆಸುತ್ತಿದೆ. ಈ ವಿಚಾರದಲ್ಲಿ ನಮ್ಮ ಸರ್ಕಾರ ಮೂಗು ತೂರಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಸಂಸ್ಥೆಯನ್ನು ನಾವು ಮರು ಸ್ಥಾಪಿಸಿದ್ದೇವೆ. ಕಾಂಗ್ರೆಸ್ ಆಡಳಿತದಲ್ಲಿ ಲೋಕಾಯುಕ್ತ ವಿಸರ್ಜನೆಯೊಂದಿಗೆ ಸಾಕಷ್ಟು ಪ್ರಕರಣಗಳು ಮುಚ್ಚಿ ಹಾಕಲಾಗಿತ್ತು. ಈ ರೀತಿ ಮುಚ್ಚಿ ಹಾಕಿರುವ ಪ್ರಕರಣಗಳ ತನಿಖೆ ನಡೆಸುತ್ತೇವೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾಗಿದ್ದು ನಮ್ಮ ನಿಲುವು ಸ್ಪಷ್ಟವಾಗಿದೆ.
ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ
ತಂತ್ರವಾಗಿ ತನಿಖೆ ನಡೆಸುತ್ತೇವೆ ಮತ್ತು ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಎಂದು ಅವರುಕ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.
Karnataka, Lokayukta, raids, BJP MLA, son, recovers, Rs 8 crore, cash,