ಗಡಿ ವಿವಾದ ಕುರಿತು ಸಿಎಂಗೆ ಬೊಮ್ಮಾಯಿಯಿಗೆ ಡಿಕೆಶಿ ಸವಾಲ್

Social Share

ಬೆಂಗಳೂರು,ಡಿ.28- ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ನೀಡಿರುವ ಪೊಳ್ಳು ಹೇಳಿಕೆಯ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿ, ಕರ್ನಾಟಕದ ಒಂದಿಂಚೂ ಜÁಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬ ಮಾತಿಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳು ಈ ರೀತಿ ಪೊಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಆಶ್ಚರ್ಯಕರವೇನಲ್ಲ ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸಿದ್ಧರಿಲ್ಲದಿದ್ದರೆ, ಇಷ್ಟರಲ್ಲಾಗಲೇ ಕ್ರಮ ಕೈಗೊಳ್ಳಬೇಕಿತ್ತು ಎಂದಿದ್ದಾರೆ.

ಹೆಚ್ಚಿದ ಸಚಿವಾಕಾಂಕ್ಷಿಗಳ ಒತ್ತಡ : ಸಂಪುಟ ವಿಸ್ತರಣೆಗೆ ಷಾ ಬಳಿ ಸಿಎಂ ಬೇಡಿಕೆ

ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದಿಲ್ಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕ ಭರವಸೆ ನೀಡಲಿ ಎಂದು ಸವಾಲೆಸೆದಿದ್ದಾರೆ.

ಒಂದೇ ವರ್ಷದಲ್ಲಿ 100 ಠಾಣೆಗಳ ಸ್ಥಾಪನೆ : ಬೊಮ್ಮಾಯಿ

ಈ ಮೂಲಕ ಬೊಮ್ಮಾಯಿಯವರ ಪೊಳ್ಳು ಭರವಸೆಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿರುವ ಡಿ.ಕೆ.ಶಿವಕುಮಾರ್, ಕೇಂದ್ರ ಗೃಹ ಸಚಿವರು ಸಾರ್ವಜನಿಕ ಭರವಸೆ ನೀಡುವಂತೆ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

Karnataka, Maharashtra, border dispute, dk shivakumar, CM Bommai,

Articles You Might Like

Share This Article