ಬೆಂಗಳೂರು,ನ.27- ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಉಂಟಾಗಿರುವ ಗಡಿ ವಿವಾದವನ್ನು ಸುಪ್ರೀಂಕೋರ್ಟ್‍ನಲ್ಲಿ ಸಮರ್ಪಕವಾಗಿ ಕಾನೂನು ಹೋರಾಟ ನಡೆಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಜೆ ಕಾನೂನು ತಜ್ಞರ ಸಭೆ ಕರೆದಿದ್ದಾರೆ.
ಸಂಜೆ 7 ಗಂಟೆಗೆ ರೇಸ್‍ಕೋರ್ಸ್ ರಸ್ತೆಯ ನಿವಾಸದಲ್ಲಿ ನಡೆಯಲಿರುವ ಸಭೆಗೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ್ ವಿ.ಪಾಟೀಲ್ ಸೇರಿದಂತೆ ರಾಜ್ಯವನ್ನು ಪ್ರತಿನಿಧಿಸುವ ಸುಪ್ರೀಂಕೋರ್ಟ್ ವಕೀಲರು ಕೂಡ ಭಾಗಿಯಾಗಲಿದ್ದಾರೆ.
ಗಡಿಯಲ್ಲಿರುವ ಕನ್ನಡ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಬೇಕೆಂದು ಮಹಾರಾಷ್ಟ್ರ ಸುಪ್ರೀಂಕೋರ್ಟ್‍ನಲ್ಲಿ ದಾವೆ ಹೂಡಿತ್ತು. ಮುಂದುವರೆದ ಅರ್ಜಿ ವಿಚಾರಣೆ ನಡೆಯಲಿದ್ದು, ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಕುರಿತಂತೆ ಸಿಎಂ ವಿವರ ಪಡೆಯಲಿದ್ದಾರೆ.
ರಾಜಸ್ಥಾನ : ನೆರೆಮನೆಗೆ ನುಗ್ಗಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ರಾಜ್ಯದ ಪರವಾಗಿ ಸುಪ್ರೀಂಕೋರ್ಟ್‍ನಲ್ಲಿ ಸಮರ್ಥವಾಗಿ ವಾದ ಮಂಡಿಸುವುದು, ಮಹಾಜನ್ ಆಯೋಗದ ವರದಿ ಸೇರಿದಂತೆ ಮತ್ತಿತರ ಕ್ರಮಗಳ ಬಗ್ಗೆಯೂ ಕಾನೂನು ತಜ್ಞರ ಜೊತೆ ಚರ್ಚೆ ಮಾಡುವರು.
ಕ್ಷುಲ್ಲಕ ವಿಚಾರಕ್ಕೆ ಘರ್ಷಣೆ : ಚುನಾವಣೆ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಸಾವು
ಮಹಾರಾಷ್ಟ್ರ ಸರ್ಕಾರ ಪದೇ ಪದೆ ಗಡಿ ವಿವಾದವನ್ನು ಮುಂದಿಟ್ಟುಕೊಂಡು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸುವುದು ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಾನೂನು ಮೂಲಕವೇ ಹೋರಾಟ ನಡೆಸಿ ಸಮಸ್ಯೆಯನ್ನು ಇತ್ಯರ್ಥಪಡಿಸಲು ಸಮರ್ಥ ವಾದ ಮಂಡಿಸಬೇಕೆಂದು ಸಿಎಂ ವಕೀಲರಲ್ಲಿ ಮನವಿ ಮಾಡಲಿದ್ದಾರೆ.
Karnataka, Maharashtra, border, dispute, experts, meeting, CM Bommai,