ಮರಾಠಿಗರ ಪುಂಡಾಟಿಕೆ ಕನ್ನಡಿಗರ ಆಕ್ರೋಶ

Social Share

ಬೆಂಗಳೂರು,ನ.26- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದ ಮತ್ತೆ ಭುಗಿಲೇಳುವ ಲಕ್ಷಣಗಳು ಗೋಚರಿಸಿದ್ದು, ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ಮರಾಠಿಗರ ಪುಂಡಾಟಕ್ಕೆ ಕನ್ನಡಿಗರು ಸಿಡಿದೆದ್ದಿದ್ದಾರೆ.

ಕಳೆದ ರಾತ್ರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್‍ಗಳಿಗೆ ಕಲ್ಲು ತೂರಾಟ ನಡೆಸಿ ಬಸ್‍ಗಳ ಗಾಜು ಒಡೆದು ಹಾಕಿ ಕಪ್ಪು ಮಸಿ ಬಳಿದಿದ್ದಾರೆ. ಮಹಾರಾಷ್ಟ್ರದ ಈ ಅತಿರೇಕದ ವರ್ತನೆಗೆ ಕರ್ನಾಟಕದಲ್ಲಿ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗಿದ್ದರೆ ಕನ್ನಡಪರ ಸಂಘಟ ನೆಗಳು ಕೂಡ ಬೀದಿಗಿಳಿದು ಮರಾಠಿಗರ ಪುಂಡಾಟಕ್ಕೆ
ಕಡಿವಾಣ ಹಾಕಬೇಕೆಂದು ಎಚ್ಚರಿಸಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ಡಿಪೋಗೆ ಸೇರಿದ ಪುಣೆ, ಅಥಣಿ ಹಾಗೂ ಮೀರಜ್-ಕಾಗವಾಡದಿಂದ ತೆರಳಿದ್ದ ಬಸ್‍ಗಳಿಗೆ ಕಳೆದ ರಾತ್ರಿ ಕೆಲವು ಕಿಡಿಗೇಡಿಗಳು ಕಲ್ಲು ಎಸೆದು ಬಸ್ ಮುಂಭಾಗದ ಗಾಜುಗಳನ್ನು ಒಡೆದು ಹಾಕಿದ್ದಾರೆ.
ಎರಡು ಬಸ್‍ಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಕರ್ನಾಟಕದಿಂದ ತೆರಳುವ ಬಸ್‍ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ಹಾನಿ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕರ್ನಾಟಕ ರಕ್ಷಣೆ ವೇದಿಕೆಯ ಶಿವರಾಮೇಗೌಡ ನೇತೃತ್ವದ ಬಣ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮಾಜಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿಗಳನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ಅಫ್ಜಲಪುರ ತಾಲೂಕಿನ ಬಳೂರ್ಗಿ ಗ್ರಾಮದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಮಹಾರಾಷ್ಟ್ರ ಬಸ್‍ಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿದೆ. ತಾಲೂಕಿನ ಬಳೂರ್ಗಿ ಗ್ರಾಮದಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ ಬಸ್ ತಡೆದ ಕನ್ನಡಪರ ಹೋರಾಟಗಾರರು ಮಸಿ ಬಳಿದು ಮಹಾರಾಷ್ಟ್ರ ಸರಕಾರ ವಿರುದ್ಧ ಕಿಡಿಕಾರಿದ್ದಾರೆ.

ರಣಹೇಡಿ ಮಹಾರಾಷ್ಟ್ರ ಸರಕಾರ ಪದೇಪದೆ ಗಡಿ ವಿಚಾರಕ್ಕೆ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಅಲ್ಲದೆ, ನಮ್ಮ ಸಾರಿಗೆ ಬಸ್‍ಗಳಿಗೆ ಮುಸಿ ಬಳಿಯುವುದು ಸೇರಿ ಇತರೆ ಕೀಳು ಮಟ್ಟದ ಕೆಲಸಗಳನ್ನು ಮಾಡಿ ಕನ್ನಡಿಗರಿಗೆ ಅವಮಾನ ಮಾಡುವ ಕೆಲಸ ನಿರಂತರವಾಗಿ ಮಾಡುತ್ತಿದೆ. ಇನ್ಮುಂದೆ ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಮಹಿಳೆ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಭಾರತಿಯನ ಬಂಧನ

ಅತ್ತ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‍ಗಳಿಗೆ ಮಸಿ ಬಳಿದು ಉದ್ಧಟತನ ಪ್ರದರ್ಶಿಸಿದ್ದರೆ ಮತ್ತೊಂದೆಡೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ 300ಕ್ಕೂ ಹೆಚ್ಚು ಬಸ್‍ಗಳ ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತಗೊಳಿಸಿದೆ.

ಬೆಳಗಾವಿ, ಚಿಕ್ಕೋಡಿ ಸೇರಿ ರಾಜ್ಯದ ಹಲವು ಭಾಗಗಳಿಗೆ ಸಂಚರಿಸುತ್ತಿದ್ದ ಎಂಎಸ್‍ಆರ್‍ಟಿಸಿ ಬಸ್‍ಸಂಚಾರ ಬಂದಾಗಿವೆ. ಆದರೂ, ಮಹಾರಾಷ್ಟ್ರದಿಂದ ಬಂದಿದ್ದ ಬಸ್ಸೊಂದಕ್ಕೆ ಶುಕ್ರವಾರದ ಸಂಜೆಯೇ ಮಸಿ ಬಳಿಯುವ ಮೂಲಕ ಕರ್ನಾಟಕ ನವನಿರ್ಮಾಣ ಸೇವೆಯ ಕಾರ್ಯಕರ್ತರು ಮಹಾರಾಷ್ಟ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ನಮ್ಮದು, ಕನ್ನಡದ ಒಂದು ಅಂಗುಲ ಜಾವನ್ನು ಸಹ ಬಿಟ್ಟುಕೊಡುವುದಿಲ್ಲ. ಮುಂಬೈ, ಸೊಲ್ಲಾಪುರ, ಅಂಕಲಕೋಟೆ ಸೇರಿದಂತೆ ಮಹಾರಾಷ್ಟ್ರದ ಎಲ್ಲಾ ಕನ್ನಡ ಪ್ರದೇಶಗಳು ಕನ್ನಡಿಗರದ್ದು. ಕರ್ನಾಟಕದ ನೆಲಕ್ಕೆ ಸೇರಿದ್ದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗಟ್ಟಿಯಾಗಬೇಕು. ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಸಬೇಕು ಎಂದು ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ.

ಮೀರಜ್- ಕಾಗವಾಡ ಮಧ್ಯೆ ಸಂಚಾರ ಮಾಡುತ್ತಿದ್ದ ಕೆಎಸ್‍ಆರ್ ಟಿಸಿ ಬಸ್‍ಗೆ ಕಲ್ಲು ತೂರಾಟ ನಡೆಸಿದ್ಧಾರೆ. ರಾತ್ರಿ 10.30ಕ್ಕೆ ಪುಣೆಯಿಂದ ಅಥಣಿ ಕಡೆಗೆ ಬರುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಾಗವಾಡ-ಮೀರಜ್ ಮಾರ್ಗದ ಬಸ್ ಸಂಚಾರ ಬಂದ್ ಆಗಿದೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಬಸ್ ಸೇವೆ ಸ್ಥಗಿತವಾಗಿದೆ.

ಬಸ್ಸಿನಲ್ಲಿ ಕೇವಲ ಕರ್ನಾಟಕದ ಜನರು ಮಾತ್ರ ಇರುವುದಲ್ಲ, ಮಹಾರಾಷ್ಟ್ರದ ಜನರು ಕೂಡ ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರ ಜೀವಕ್ಕೆ ಹಾನಿಯಾದರೆ ಅದಕ್ಕೆ ಯಾರು ಹೊಣೆ ಮಹಾರಾಷ್ಟ್ರದ ಗೂಂಡಾಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮಹಾರಾಷ್ಟ್ರ ಸರ್ಕಾರಕ್ಕೆ ತಾಕೀತು ಮಾಡಬೇಕು ಎಂದು ಜನತೆ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದ ವರ್ತನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಮತದಾರರ ಪಟ್ಟಿ ಮರು ಪರಿಷ್ಕರಣೆಗೆ ಡಿಕೆಶಿ ಆಗ್ರಹ

ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಎರಡು ರಾಜ್ಯಗಳ ಸಾಮರಸ್ಯ ಹಾಳುಮಾಡುವುದು ಬೇಡ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಎಚ್‍ಡಿಕೆ ಆಕ್ರೋಶ: ಬೆಳಗಾವಿ ಗಡಿ ಭಾಗದ ಅಭಿವೃದ್ಧಿಗೆ ಕರ್ನಾಟಕದ ಕೊಡುಗೆ ಹೆಚ್ಚಿದೆ. ಹೆಚ್ಚು ಸಕ್ಕರೆ ಕಾರ್ಖಾನೆಗಳು, ಸುವರ್ಣ ಸೌಧ, ನೀರಾವರಿ ಸೌಲಭ್ಯ ಕೊಟ್ಟಿದ್ದೇವೆ. ಶಿಕ್ಷಣ, ಭಾಷಾವಾರು ಸೌಲಭ್ಯದಲ್ಲಿ ಸ್ವಲ್ಪ ಸಮಸ್ಯೆ ಇರೋದು ನಿಜ. ಅಲ್ಲಿನ ಆರ್ಥಿಕ ಚಟುವಟಿಕೆಗಳನ್ನು ಮಹಾರಾಷ್ಟ್ರಕ್ಕೆ ಸೆಳೆಯುವ ಪ್ರಯತ್ನ ಆಗುತ್ತಿದೆ. ಮಹಾರಾಷ್ಟ್ರದ ಧ್ವನಿಗೆ ಕರ್ನಾಟಕ ಬಿಜೆಪಿಯವರ ಕುಮ್ಮಕ್ಕು ಇದೆಯಾ ಎಂಬ ಅನುಮಾನ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಶಿವಸೇನೆ ಒಡೆದು ಬಿಜೆಪಿ ಜೊತೆ ಸೇರಿದ ಗುಂಪು ಗಡಿ ತಗಾದೆ ತೆಗೆದಿದೆ. ಎಂಟು ದಿನದ ಕೋಲಾರ ಚಿಕ್ಕಬಳ್ಳಾಪುರ ಪ್ರವಾಸದಲ್ಲಿ ತೆಲುಗು ಭಾಷಿಕರು, ಆಂಧ್ರ ಪರವಾನಗಿ ವಾಹನಗಳನ್ನು ನೋಡಿದೆ. ಆನೇಕಲ್ ಭಾಗದಲ್ಲಿ ತಮಿಳುನಾಡು, ಮಂಗಳೂರು ಭಾಗದಲ್ಲಿ ಕೇರಳ ಗಡಿ ಇದೆ. ಆದರೆ, ಇಲ್ಲೆಲ್ಲೂ ಗಡಿ ವಿವಾದ , ಅಶಾಂತಿ ಇಲ್ಲ. ಬೆಳಗಾವಿಯ ಬಗ್ಗೆ ಮಹಾರಾಷ್ಟ್ರ ಕಣ್ಣು ಯಾಕೆ ಎಂದು ಪ್ರಶ್ನಿಸಿದರು.

ಪ್ರತಿ ವರ್ಷ ನಾನು ಭಾರತಕ್ಕೆ ಹೋಗಲು ಬಯಸುತ್ತೇನೆ : ಅನುಷ್ಕಾ ಸುನಕ್

ಬಿಜೆಪಿ ಸರಕಾರ ಬಂದ ವೇಳೆಯೇ ಗಡಿ ವಿವಾದ ಬರುತ್ತೆ. ಬೊಮ್ಮಾಯಿ ಹೆಬ್ಬೆಟ್ಟಿನ ಮುಖ್ಯಮಂತ್ರಿ, ಹೊರನೋಟಕ್ಕೆ ಕನ್ನಡಿಗರಿಗೆ ಮುಂದೆ ಹೇಳೋದೇ ಬೇರೆ. ಅಂತಿಮವಾಗಿ ದೆಹಲಿ ನಾಯಕರ ಮುಂದೆ ಕೈಕಟ್ಟಿ ನಿಲ್ಲುತ್ತಾರೆ ಎಂದು ಆರೋಪಿಸಿದರು.

Karnataka, Maharashtra, border, row,

Articles You Might Like

Share This Article