ಬೆಂಗಳೂರು, ಜ.31-ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕೆಲವೆಡೆ ಚದುರಿದಂತೆ ಅಕಾಲಿಕ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಎರಡು ಮೂರು ದಿನಗಳ ಕಾಲ ಕಂಡು ಬರಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪ್ರಬಲವಾಗುವ ಲಕ್ಷಣಗಳಿಲ್ಲ. ಹೀಗಾಗಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆಯಾಗಬಹುದು. ಆದರೆ, ವ್ಯಾಪಕ ಪ್ರಮಾಣದ ಮಳೆಯಾಗುವ ಲಕ್ಷಣಗಳಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಇನ್ನೆರಡು ದಿನ ಮಳೆಯಾಗಬಹದು. ಕಲ್ಯಾಣ ಕರ್ನಾಟಕ ಭಾಗದ ಒಂದೆರಡು ಕಡೆ ಮಳೆಯಾಗುವ ಸಂಭವವಿದೆ.
ಅರೆ ಬೆತ್ತಲೆ ಮಹಿಳೆಯಿಂದ ವಿಮಾನ ಸಿಬ್ಬಂದಿಗೆ ಕಪಾಳಮೋಕ್ಷ
ಉಳಿದಂತೆ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಮಳೆಯಾಗುವ ಸಾಧ್ಯತೆ ವಿರಳ ಎಂದು ತಜ್ಞರು ಹೇಳಿದ್ದಾರೆ.
ಜನವರಿ, ಫೆಬ್ರವರಿ ಮಾಹೆಯಲ್ಲಿ ಮಳೆಯಾಗುವ ಸಾಧ್ಯತೆ ತೀರಾ ವಿರಳ. ಹವಾಮಾನದಲ್ಲಿ ಉಂಟಾಗುವ ಕೆಲವು ಬದಲಾವಣೆಯಿಂದಾಗಿ ಆಗೊಮ್ಮೆ, ಈಗೊಮ್ಮೆ ಅಕಾಲಿಕ ಮಳೆಯಾಗುವ ಸಾಧ್ಯತೆ ಇದೆ. ಆದರೆ, ವ್ಯಾಪಕ ಪ್ರಮಾಣದಲ್ಲಿ ಎಲ್ಲೆಡೆ ಚಳಿಗಾಲದಲ್ಲಿ ಮಳೆಯಾಗುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.
ಬಸ್‍ಗೆ ಡಿಕ್ಕಿ ಹೊಡೆದ ಕಾರು, ನಾಲ್ವರ ಸಾವು
ಜನವರಿ ತಿಂಗಳಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 2 ಮಿ.ಮೀ.ಆಗಿದ್ದು, ಈತನಕ್ಕೆ ಶೇ,60ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಕನಿಷ್ಠ ತಾಪಮಾನ ಏರಿಕೆಯಾಗಿದ್ದು, ಚಳಿ ಪ್ರಮಾಣ ಕಡಿಮೆಯಾಗಿದೆ.
Karnataka, might, light, rain, Bengaluru,