ರಾಜ್ಯದಲ್ಲಿ ಮೋದಿ ಸುನಾಮಿ ಜೋರಾಗಿದೆ : ಸಿಎಂ ಬೊಮ್ಮಾಯಿ

Social Share

ಹುಬ್ಬಳ್ಳಿ,ಮಾ.13- ರಾಜ್ಯದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಸುನಾಮಿ ಜೋರಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯದ ಬಹುಭಾಗಗಳಿಗೆ ಪ್ರಧಾನಿಯವರು ಭೇಟಿ ಕೊಟ್ಟು ಸರ್ಕಾರದ ಅಭಿವೃದ್ದಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡಿದ್ದಾರೆ.

ಹೀಗಾಗಿ ಮೋದಿ ಅವರ ಕುರಿತಂತೆ ಹೆಚ್ಚಿನ ಒಲವು ವ್ಯಕ್ತವಾಗುತ್ತಿದೆ. ಹಾಗೆಯೇ ಬಿಜೆಪಿ ಪರವಾದ ಒಲವು ನಾಡಿನ ಜನರಲ್ಲಿ ಕಂಡುಬರುತ್ತಿದೆ ಎಂದು ಸಮರ್ಥಿಸಿಕೊಂಡರು.

ಮೋದಿಯವರು ದೇವರಲ್ಲ. ಆದರೆ ಈ ದೇಶದ ಮಹಾನ್ ನಾಯಕರು. ಕಷ್ಟ ಕಾಲದಲ್ಲಿ ದೇಶವನ್ನು ಮುನ್ನಡೆಸಿದವರು. ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆ ಕಾಪಾಡಿದ್ದಾರೆ. ಜನರ ಕಲ್ಯಾಣ ಕಾರ್ಯಕ್ರಮಗಳೊಂದಿಗೆ ದೇಶವನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯುತ್ತಿರುವ ನಾಯಕರು ಎಂದು ಬಣ್ಣಿಸಿದರು.

ಶಾಶ್ವತವಾಗಿ ಮುಚ್ಚಿದ ಅಮೇರಿಕಾದ ಸಿಲಿಕಾನ್ ವ್ಯಾಲಿ ಬ್ಯಾಂಕ್

ಕೆಲ ಸಚಿವರು ಪಕ್ಷ ಬಿಡುತ್ತಾರೆ ಎಂಬುದು ಊಹಾಪೋಹದ ವಿಚಾರ. ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೋವಿಡ್‍ನಂತ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಂತಹ ಸಂದರ್ಭದಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ ಬಡವರ ಕೈಹಿಡಿದಿದ್ದಾರೆ ಎಂದು ಹೇಳಿದರು.

ಸಚಿವ ಸೋಮಣ್ಣ ಮತ್ತು ನಾನು ಬಹಳ ಹಳೆಯ ಸ್ನೇಹಿತರು. ನಿನ್ನೆ ಹುಬ್ಬಳ್ಳಿಯಲ್ಲಿ ಔಪಚಾರಿಕವಾಗಿ ಭೇಟಿ ಆಗಿದ್ದಷ್ಟೇ. ನಮ್ಮ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ವಿ.ಸೋಮಣ್ಣ ಜತೆಗೇ ಇದ್ದಾರೆ. ಮುಂದೆಯೂ ಇರುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ -ಅಖಿಲೇಶ್ ಯಾದವ್ ಭೇಟಿ

ಕೆಪಿಟಿಸಿಎಲ್ ಹಾಗೂ ಎಸ್ಕಾಂ ನವರೊಂದಿಗೆ ನಮ್ಮ ಸಚಿವರು ಸಂಪರ್ಕದಲ್ಲಿದ್ದಾರೆ. ಸಮಸ್ಯೆ ಬಗೆಹರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

Karnataka, Narendra Modi, wave, CM Bommai,

Articles You Might Like

Share This Article