Monday, May 6, 2024
Homeರಾಜ್ಯಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾಂಗ್ರೆಸ್ ಸರ್ಕಾರ

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾಂಗ್ರೆಸ್ ಸರ್ಕಾರ

ಬೆಂಗಳೂರು,ಅ.23- ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭಾರೀ ಸದ್ದು ಮಾಡಿದ್ದ ಹಿಜಾಬ್ ಮತ್ತೆ ಮುನ್ನೆಲೆಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಭಾಗವಹಿಸುವುದನ್ನು ಅನುಮತಿಸಿರುವುದಕ್ಕೆ ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿವೆ.

ಈ ಹಿಂದೆ ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ವಿರೋಧಿಸಿ ಭಾರೀ ಪ್ರಮಾಣದ ಪ್ರತಿಭಟನೆಗಳಾಗಿದ್ದವು. ಇದು ಹಂತಹಂತವಾಗಿ ಬೆಳೆದು ಹಲವು ರೀತಿಯ ಕೋಮು ಸ್ವರೂಪಗಳನ್ನು ಪಡೆದುಕೊಂಡಿತ್ತು. ಸರ್ಕಾರ ಬದಲಾದ ಬಳಿಕ ಒಂದಷ್ಟು ದಿನ ಈ ರೀತಿಯ ಗದ್ದಲಗಳಿಗೆ ಕಡಿವಾಣ ಬಿದ್ದಿತ್ತು. ಆದರೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಟ್ ಪರೀಕ್ಷೆಯಲ್ಲಿ ಭಾಗವಹಿಸುವುದಕ್ಕೆ ಹಿಜಾಬ್ ಧರಿಸಲು ಅವಕಾಶ ನೀಡಿದೆ ಎಂಬ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿವೆ.

ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು

ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರತಿಭಟನೆ ಮಾಡುತ್ತಿರುವವರು ನೀಟ್ ಪರೀಕ್ಷೆಯ ನಿಯಮಾವಳಿಗಳನ್ನು ಪರಿಶೀಲನೆ ಮಾಡಬೇಕು. ಇದನ್ನು ಏಕೆ ವಿವಾದ ಮಾಡಲಾಗುತ್ತಿದೆ ಎಂದು ಗೊತ್ತಿಲ್ಲ. ನೀಟ್ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶವಿದೆ. ನೀಟ್ ಪರೀಕ್ಷೆಯಲ್ಲಿರುವ ಮಾರ್ಗಸೂಚಿಗಳನ್ನೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಸರಣೆ ಮಾಡುತ್ತಿದೆ. ನಾವು ವಿಶೇಷವಾದ ಯಾವುದೇ ನಿಯಮಾವಳಿಗಳನ್ನೂ ರೂಪಿಸಿಲ್ಲ ಮತ್ತು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಪ್ರತಿಭಟನೆ ಮಾಡುವವರು ಮೊದಲು ನೀಟ್ ಪರೀಕ್ಷೆಯ ನಿಯಮಾವಳಿಗಳನ್ನು ಅಧ್ಯಯನ ಮಾಡಲಿ, ನಂತರ ಅವರು ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿಸಲಿ ಎಂದು ತಿರುಗೇಟು ನೀಡಿದರು.

RELATED ARTICLES

Latest News