ಮದ್ಯ ಖರೀದಿ ವಯೋಮಿತಿ ಸಡಿಲಿಕೆ ಮಾಡದಿರಲು ಸರ್ಕಾರ ತೀರ್ಮಾನ

Social Share

ಬೆಂಗಳೂರು,ಜ.18- ಸಾರ್ವಜನಿಕ ವಲಯ ಹಾಗೂ ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮದ್ಯ ಖರೀದಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸಡಿಲಿಕೆ ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಹಿಂದೆ ಅಬಕಾರಿ ಇಲಾಖೆಯು ಮದ್ಯ ಖರೀದಿಗೆ ನಿಗದಿ ಮಾಡಿದ್ದ ವಯೋಮಿತಿಯನ್ನು 21ರಿಂದ 18ವರೆಗೆ ಇಳಿಕೆ ಮಾಡಲು ನಿರ್ಧರಿಸಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೋರಲಾಗಿತ್ತು.

ಆದರೆ ಈ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿ ಸರ್ಕಾರವೇ ಯುವಜನತೆಯನ್ನು ಮದ್ಯಪಾನಕ್ಕೆ ಪ್ರೋತ್ಸಾಹಿಸಲು ಕುಮ್ಮಕ್ಕು ನೀಡುತ್ತಿದೆ ಎಂದು ಚಿಂತಕರು, ಸಾಹಿತಿಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತಿತರರು ವಿರೋಧ ವ್ಯಕ್ತಪಡಿಸಿದ್ದರು. ಬೇರೆ ರಾಜ್ಯದಲ್ಲಿ ಮದ್ಯ ಖರೀದಿಗೆ 18 ವಯೋಮಿತಿ ಇದ್ದರೂ ಪರವಾಗಿಲ್ಲ. ನಮ್ಮ ರಾಜ್ಯದಲ್ಲಿ ಇದಕ್ಕೆ ಅವಕಾಶ ಬೇಡ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಕೊಡುಗೆಗಳಿಗೆ ಟಕ್ಕರ್ ಕೊಡಲು ಕಮಲ ಪ್ರಣಾಳಿಕೆ ತಯಾರಿ

ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ-ಅಸ್ಪಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‍ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಟೀಕೆ ವ್ಯಕ್ತವಾಗಿತ್ತು.

ಹೀಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಸರ್ಕಾರ ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ. 2015ರವರೆಗೆ ಆಲ್ಕೋಹಾಲ್ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸು 18 ವರ್ಷವಿತ್ತು. 1967ರ ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳಿಗೆ ತಿದ್ದುಪಡಿ ಮಾಡುವ ಮೂಲಕ ಮದ್ಯ ಖರೀದಿ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲಾಯಿತು. ಆದರೆ ಈಗ ಸರಕಾರ ಮದ್ಯ ಖರೀದಿಸುವ ವಯಸ್ಸನ್ನು 18ವರ್ಷಕ್ಕೆ ಇಳಿಸಲು ಚಿಂತನೆ ನಡೆಸಿತ್ತು.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇವೆ 2.5 ಲಕ್ಷ ಹುದ್ದೆಗಳು

ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಮದ್ಯಪಾನ ಮಾರಾಟಕ್ಕಿರುವ ಕಾನೂನುಬದ್ಧ ವಯಸ್ಸನ್ನು ಇಳಿಸುವ ಸಂಬಂಧ ಕಾನೂನಿಗೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ವಿಚಾರವಾಗಿ ಕರಡು ಅಧಿಸೂಚನೆಯನ್ನು ಜನವರಿ 10ರಂದು ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಈ ಹಿಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ಕಾನೂನಿತ್ತು. ಈಗ ಕರ್ನಾಟಕ ಅಬಕಾರಿ (ಪರವಾನಿಗೆಯ ಸಾಮಾನ್ಯ ಷರತ್ತು ತಿದ್ದುಪಡಿ) ನಿಯಮ 2023 ತರಲು ಮುಂದಾಗಿರುವ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಮದ್ಯ ಕೊಳ್ಳುವ ನಿರ್ಬಂಧವನ್ನು ಸಡಿಲಿಸಿ ವಯಸ್ಸಿನ ಮಿತಿಯನ 18 ವರ್ಷಕ್ಕಿಳಿಸಲು ಸರ್ಕಾರ ಮುಂದಾಗಿತ್ತು.

ಕರ್ನಾಟಕ ಅಬಕಾರಿ ಪರವಾನಿಗೆ (ಸಾಮಾನ್ಯ ಷರತ್ತು) ನಿಯಮ 1967 ಅನ್ನು 2015ರಲ್ಲಿ ಕರ್ನಾಟಕ ಅಬಕಾರಿ ಇಲಾಖೆ ತಿದ್ದುಪಡಿಗೆ ತಂದು ಕುಡಿತದ ವಯಸ್ಸನ್ನು ಕನಿಷ್ಠ 18ರಿಂದ 21 ವರ್ಷಕ್ಕೆ ಏರಿಸಿತ್ತು. ಅದರಂತೆ ಪಬ್, ಬಾರ್‍ಗಳಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ.

Karnataka, plans, reduce, legal, age, alcohol, purchase,

Articles You Might Like

Share This Article