ಬೆಂಗಳೂರು, ಜ.28- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೆಬಲ್ (ಸಿಎಆರ್/ ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಇಂದು ಬಿಗಿ ಭದ್ರತೆಯಲ್ಲಿ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ ಗಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿತ್ತು. ಎಲ್ಲರನ್ನೂ ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದ ದೃಶ್ಯಗಳು ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕಂಡುಬಂದವು.
ಬೆಂಗಳೂರು ನಗರದಲ್ಲಿ 78 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಯಾವುದೇ ಅಕ್ರಮಗಳಿಗೆ ಎಡೆಮಾಡಿಕೊಡದೆ ಸಿಸಿಟಿವಿಗಳು ಹಾಗೂ ಸ್ಕ್ರೀನಿಂಗ್ ಮೆಷಿನ್‍ಗಳನ್ನು ಪರೀಕ್ಷಾ ಕೇಂದ್ರದ ಬಳಿ ಅಳವಡಿಸಲಾಗಿತ್ತು.
- Advertisement -
