ಬೆಂಗಳೂರು,ಜು.6- ದೇಶದ ಪ್ರತಿಷ್ಠಿತ ಇಂಡಿಯನ್ ಜಸ್ಟೀಸ್ ರಿಪೋರ್ಟ್‌ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಡೀ ದೇಶದಲ್ಲೇ ನ್ಯಾಯ ನೀಡಿಕೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇಂಡಿಯನ್ ಜಸ್ಟೀಸ್ ರಿಪೋರ್ಟ್ ಒಟ್ಟು 10 ಅಂಕಗಳನ್ನಿಟ್ಟು ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ 6.38 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದರು. ಈ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಗೃಹಸಚಿವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.