ಬೆಂಗಳೂರು,ಮೇ 21- ದೇಶದಲ್ಲೇ ಕರ್ನಾಟಕ ಪೊಲೀಸ್ ಬೆಸ್ಟ್ ಎಂದು ಇಂದು ಸೇವೆಯಿಂದ ನಿವೃತ್ತಿಯಾ ಗುತ್ತಿರುವ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ಇಂದು ಏರ್ಪಡಿಸಿದ್ದ ಬೀಳ್ಕೊಡುಗೆ ಕವಾಯತಿನಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ನಾನು ಬೆಂಗಳೂರು ನಗರ ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಪೊಲೀಸ್ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಪ್ರತಿಯೊಂದು ವಿಭಾದಲ್ಲೂ ಕೆಲಸ ಮಾಡುವಾಗ ಎಲ್ಲಾ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ನನಗೆ ಪ್ರೋತ್ಸಾಹ ನೀಡಿದ್ದಾರೆ, ಅವರೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಪೊಲೀಸ್ ಇಲಾಖೆಯಲ್ಲಿ ನಾನು 38 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದೇನೆ. ರಾಜ್ಯ ಅಲ್ಲದೆ ವಿದೇಶದಲ್ಲೂ ಕರ್ತವ್ಯ ನಿರ್ವಹಿಸಿದ್ದೇನೆ, ಸಂದರ್ಭದಲ್ಲಿ ಬೇರೆ ಬೇರೆ ದೇಶ ಹಾಗೂ ವಿವಿಧ ರಾಜ್ಯಗಳ ಪೊಲೀಸ್ ತಂಡಗಳ ಸೇವೆ ಗಮನಿಸಿದ್ದೇನೆ. ಅದರಲ್ಲೂ ನಮ ಕರ್ನಾಟಕ ಪೊಲೀಸ್ ಪಡೆ ಅತ್ಯುತ್ತಮ ಬೆಸ್ಟ್ ಎಂದು ಹೇಳಲು ಹೆಮೆಯಾಗುತ್ತಿದೆ ಎಂದು ಅವರು ಮುಕ್ತ ಕಂಠದಿಂದ ಶ್ಲಾಸಿದರು.
ಪದಕ ಪ್ರದಾನ:
ಇದೇ ಸಂದರ್ಭದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ 200 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಇದೇ ಪ್ರಥಮ ಬಾರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹೆಸರಿನಲ್ಲಿ ಪ್ರಶಂಸನಾ ಸೇವಾ ಪದಕ ಪ್ರದಾನ ಮಾಡಿದ್ದೇನೆ.
ಈ ಪದಕ ನೀಡಲು ಸರ್ಕಾರದಿಂದ 200 ಮಂದಿಗೆ ಮಾತ್ರ ಅವಕಾಶವಿದೆ. ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಇಲಾಖೆಯ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಉತ್ತಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು ಅವರು ಹೇಳಿದರು.ಬೀಳ್ಕೊಡುಗೆ ಕವಾಯತಿನ ನೇತೃತ್ವವನ್ನು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ವಹಿಸಿದ್ದರು.