ಬೆಂಗಳೂರು- ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಮಾರಂಭಕ್ಕೆ ಜನರ ಸೇರಿಸುವ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋ ಸಂಬಂಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ.
ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಟೀಕಿಸಿದೆ.
ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಟೀಕಿಸಿದೆ.
ಗ್ರಾಮೀಣ ಕ್ಷೇತ್ರದ ಪಂತಬಾಳೇಕುಂದಿಯಲ್ಲಿ ಬುಧವಾರ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕ್ಷೇತ್ರದ ಜನತೆಯ ನಿರ್ಧಾರದಂತೆ ಮಾ.5 ರಂದು ಅನಾವರಣ ಕಾರ್ಯಕ್ರಮ ಆಯೋಜಿಸಿದ್ದೇವೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಹಾಗೂ ನೆರೆಯ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ.
ಶತಮಾನಗಳಷ್ಟುಹಳೆಯದಾದ ರಾಜಹಂಸಗಡ ಕೋಟೆಯನ್ನು ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್, ಅದೂ ನಾನು ಈ ಕ್ಷೇತ್ರದ ಶಾಸಕರಾದ ನಂತರ. ಮಾ.3 ರಂದು ಮಹಾರಾಷ್ಟ್ರದ ರಾಯಗಢದಿಂದ ಶಿವಾಜಿ ಮಹಾರಾಜರ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಮಾ.4ರಂದು ರಾಜಹಂಸಗಢಕ್ಕೆ ಆಗಮಿಸಿದ ನಂತರ, ಮಾ.5ರಂದು ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ಮಾಡಿ, ನಂತರ ಶಿವಾಜಿ ಪ್ರತಿಮೆ ಲೋಕಾರ್ಪಣೆ ಮಾಡೋಣ ಎಂದು ಹೇಳಿದ್ದರು.
#KarnatakaPolls, #ViralClip, #claims, #Siddaramaiah, #crowd, #rallies,