ಸಿಐಡಿಯಿಂದ ಮತ್ತೆ ಅಮೃತ್ ಪೌಲ್ ವಿಚಾರಣೆ

Social Share

ಬೆಂಗಳೂರು,ನ.16- ಪಿಎಸ್ಐ ಅಕ್ರಮ ನೇಮಕಾತಿ ಸಂಬಂಧ ಸದ್ಯ ಜೈಲು ಪಾಲಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪುನಃ ತನಿಖೆಗೆ ಒಳಪಡಿಸಿದೆ. ಸಿಐಡಿಯ ಡಿವೈಎಸ್ಪಿ ಅಂಜುಮಾನ್ ನೇತೃತ್ವದಲ್ಲಿ ಸಿಐಡಿಯ
ಕೇಂದ್ರ ಕಚೇರಿ ಕಾರ್ಟಲ್ ಭವನದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಪ್ರಕರಣ ಕುರಿತು ಮಾಹಿತಿ ಪಡೆದರು.

ಈ ಹಿಂದೆಯೂ ಸಿಐಡಿ ತನಿಖಾ ತಂಡ ಅಮೃತ್ ಪೌಲ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿತ್ತು. ಇತ್ತೀಚೆಗಷ್ಟೇ ಈ ಪ್ರಕರಣದ ಆರೋಪಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಹಗರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ ಪಿ ಶಾಂತಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದರು.

ಬೆಂಗಳೂರಿನ ಸಹಕಾರನಗರದಲ್ಲಿರುವ ಅಮೃತ್ ಪೌಲ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಒಟ್ಟು 11 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು.

ಚುನಾವಣೆಯಲ್ಲಿ ಗೆಲವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕಳೆದ ಜುಲೈ 4ರಂದು ಅಮೃತ್ ಪೌಲ್ ರನ್ನು ಬಂಧಿಸಿದ್ದರು. 545 ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ.

ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ಹಣ ವರ್ಗಾವಣೆ ಆಗಿದೆ. ಇನ್ನು ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ ಎಂದು ಸಿಐಡಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದರು.

ಬಂಧಿತ ಮಾಜಿ ಎಡಿಜಿಪಿ ಅಮೃತ್ ಪೌಲ್, ಡಿವೈಎಸ್ಪಿ ಶಾಂತಕುಮಾರ್ ಸೇರಿ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಪ್ರಮುಖ ದಾಖಲೆಗಾಗಿ ಬೆಳಗ್ಗೆ 11 ಗಂಟೆಯಿಂದ ಪರಿಶೀಲನೆ ನಡೆಸಿದ್ದಾರೆ.

ಮನಿ ಲ್ಯಾಂಡಿಂಗ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಡಿ ದಾಳಿಯಾಗಿದೆ. ಸಹಕಾರ ನಗರದಲ್ಲಿರುವ ಅಮೃತ್ ಪಾಲ್ ನಿವಾಸ, ಆಡುಗೋಡಿ ಟೆಕ್ನಿಕಲ್ ಸೆಲ್ನಲ್ಲಿರುವ ಶಾಂತಕುಮಾರ್ರ ಮನೆಗಳ ಮೇಲೂ ದಾಳಿ ಮಾಡಲಾಗಿದೆ.

ಮಾಧ್ಯಮಗಳು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸಲಿ : ಜೆ.ಸಿ.ಮಾಧುಸ್ವಾಮಿ

ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಕಳೆದ ಜು.4ರಂದು ಅಮೃತ್ ಪೌಲ್ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರನ್ನು ಪಿಎಸ್ಐ ಹುದ್ದೆ ನೇಮಕಾತಿ ಹಗರಣ ಪ್ರಕರಣದಲ್ಲಿ ಸಿಐಡಿ ಅಧಿರಿಗಳು ಬಂಧಿಸಿದ್ದು, ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಇದಕ್ಕೂ ಮುನ್ನವೇ ಅಂದರೆ ಮೇ 12ರಂದು ಡಿವೈಎಸ್ಪಿ ಶಾಂತಕುಮಾರ್ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ಪಂಜಾಬ್ ಮೂಲದ ಅಮೃತ್ ಪೌಲ್, 1995ರ ಬ್ಯಾಚ್ನ ಐಪಿಎಸ್ ಅಧಿಕಾರಿ. 2000-2003ರ ವರೆಗೆ ಉಡುಪಿ ಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದರು. 2014ರಲ್ಲಿ ಕರ್ನಾಟಕ ವೆಸ್ಟರ್ನ್ ರೇಂಜ್ ಐಜಿಯಾಗಿ ಕೆಲಸ ಮಾಡಿದ ಅಮೃತ್ ಪೌಲ್, 2018ರಲ್ಲಿ ಸೆಂಟ್ರಲ್ ರೇಂಜ್ ಐಜಿಯಾಗಿ ನೇಮಕವಾದರು.

ಬೆಂಗಳೂರಿನಲ್ಲಿ ಎಲ್ಲ ಅವಿಷ್ಕಾರ ಸಾಧ್ಯ : ಸಿಎಂ ಬೊಮ್ಮಾಯಿ

ಕರ್ನಾಟಕದ ನೇಕಾತಿಯ ಸಂಪೂರ್ಣ ಜವಾಬ್ದಾರಿ ಇವರದ್ದೇ ಆಗಿತ್ತು. ಒಎಂಆರ್ ಶೀಟ್ ಕೊಠಡಿ ಕೀ ಇವರ ಉಸ್ತುವಾರಿಯಲ್ಲೇ ಇತ್ತು. ಅಕ್ರಮದ ವಹಿವಾಟು ನೇಮಕಾತಿ ವಿಭಾಗದ ಕಚೇರಿಯಲ್ಲೇ ನಡೆದಿದೆ, ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರೇ ಡೀಲ್ ಕುದುರಿಸಿದ್ದರು ಎಂಬ ಆರೋಪವಿದೆ.

Articles You Might Like

Share This Article