ಬೆಂಗಳೂರು,ಮಾ.1- ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು, 6 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 1,224 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿಗೆ 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಸೇರಿ 6.9 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಸರ್ಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಧಾರ್ಮಿಕ ಸಂಸ್ಥೆಗಳ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ಇಂದು ಮೊದಲು ಮಾತೃಭಾಷೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ಪರೀಕ್ಷೆ ನಡೆಯಲಿದೆ. ಮಾರ್ಚ್ 22 ರವರೆಗೂ ಪಿಯುಸಿ ಪರೀಕ್ಷೆಗಳು ನಡೆಯಲಿವೆ.