ದ್ವಿತೀಯ ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Social Share

ಬೆಂಗಳೂರು, ಫೆ.8- ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೆ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16 ರಿಂದ ಮೇ 6ರ ವರೆಗೆ ನಡೆಸಲು ತೀರ್ಮಾನಿಸಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏ.16ರಂದು ಗಣಿತಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ, 18ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, 19ರಂದು ಮಾಹಿತಿ-ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಹೆಲ್ತ್‍ಕೇರ್ ಬ್ಯೂಟಿ ಅಂಡ್ ವೆಲ್‍ನೆಸ್ ಪರೀಕ್ಷೆಗಳು ನಡೆಯಲಿವೆ.
ಏ.20ರಂದು ಇತಿಹಾಸ, ಭೌತಶಾಸ್ತ್ರ, 21ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕøತ, ಅರೇಬಿಕ್, ಫ್ರೆಂಚ್ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ ನಡೆಸಲಾಗುತ್ತದೆ. ಏ.22ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, 23ರಂದು ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, 25ರಂದು ಅರ್ಥಶಾಸ್ತ್ರ, 26ರಂದು ಹಿಂದಿ ಪರೀಕ್ಷೆಗಳು ನಡೆಯುತ್ತವೆ.
ಏ.28ರಂದು ಕನ್ನಡ, 30ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 2ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಮೇ 4ರಂದು ಇಂಗ್ಲಿಷ್, ಮೇ 6ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆಗಳು ನಡೆಯುತ್ತವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಷಕರು ಹಾಗೂ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಅಂತರ್ಜಾಲದಲ್ಲಿ ವೇಳಾಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Articles You Might Like

Share This Article