Sunday, May 19, 2024
Homeರಾಜ್ಯರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು,ಮಾ.18- ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದವಾರ ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯಾಗಿತ್ತು. ನಿನ್ನೆ ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗಿದ್ದು, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಸಾಧಾರಣವಾಗಿ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಟ್ರಪ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಕರ್ನಾಟಕದ ಮೇಲೂ ಬೀರಲಿದ್ದು, ದಕ್ಷಿಣ ಒಳನಾಡು ಮತ್ತು ಮಲೆನಾಡು ಇತರ ಪ್ರದೇಶಗಳಲ್ಲಿ ಮಳೆಯಾಗುವ ಸಂಭವ ಇದೆ.

28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ

ಸದ್ಯ ಈ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೆರಡು ದಿನದಲ್ಲಿ ಮಳೆ ನಿರೀಕ್ಷಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಬೇಸಿಗೆಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.
ಮಾರ್ಚ್‍ನಿಂದ ಮೇ ವರೆಗೆ ರಾಜ್ಯದ ಉತ್ತರ ಒಳಭಾಗಗಲ್ಲಿ ತಾಪಮಾನ ಹೆಚ್ಚಾಗಿರುತ್ತದೆ. ತಿಂಗಳಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಭಾಗಗಳಲ್ಲಿ ಸುಡುವ ಶಾಖದಿಂದ ಜನರು ನಿರಾಳವಾಗಬಹುದು.

RELATED ARTICLES

Latest News