Monday, April 21, 2025
Homeರಾಜ್ಯಜಿಎಸ್‌‍ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಎಸ್‌‍ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka ranks second in GST collection: Chief Minister Siddaramaiah

ಬೆಂಗಳೂರು,ಏ.21– ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ ಕಾರಣದಿಂದ ರಾಜ್ಯ ಜಿಎಸ್‌‍ಟಿ ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ ಎಂದರು.

ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

5.5 ಲಕ್ಷ ಸರ್ಕಾರಿ ನೌಕರರಿಗೆ ಇಂದಿನ ಪ್ರಶಸ್ತಿ ಪುರಸ್ಕೃತರು ಸ್ಫೂರ್ತಿಯಾಗಬೇಕು. ಪ್ರಶಸ್ತಿ ಪುರಸ್ಕೃತರ ಜವಾಬ್ದಾರಿ ಈಗ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಪ್ರಜ್ಞೆ ಹೆಚ್ಚಿಸಿಕೊಂಡು ಜನರ ಸೇವೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.
ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರತು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. 50 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಫಲಕ ನೀಡಿ ಸನಾನಿಸಲಾಯಿತು.ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಅಶೋಕ್‌ ಪಟ್ಟಣ್‌, ವಿಜಯಾನಂದ ಕಾಶಪ್ಪನವರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

RELATED ARTICLES

Latest News