BIG NEWS: ರಾಜ್ಯೋತ್ಸವದಂದು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ, ಸಿಎಂ ಬೊಮ್ಮಾಯಿ ಘೋಷಣೆ

Social Share

ಬೆಂಗಳೂರು,ಆ.5-ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಕೃತ ಘೋಷಣೆ ಮಾಡಿದರು.

ಲಾಲ್‍ಬಾಗ್‍ನಲ್ಲಿಂದು ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಮಾನಿಗಳ ಒತ್ತಾಸೆಯಂತೆ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಮ್ಮ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತೇವೆ ಎಂದು ಹೇಳಿದರು.

ಪ್ರಶಸ್ತಿಗಾಗಿ ಡಾ.ರಾಜ್‍ಕುಮಾರ್ ಕುಟುಂಬದ ಸದಸ್ಯರು ಹಾಗೂ ಸರ್ಕಾರದ ವತಿಯಿಂದ ಸಮಿತಿಯನ್ನು ರಚಿಸಲಾಗುವುದು. ಕಾರ್ಯಕ್ರಮ ಯಾವ ರೀತಿ ಇರಬೇಕು ಎಂಬುದು ಸೇರಿದಂತೆ ಅವರ ಸಹೋದರರ ಸಲಹೆ ಪಡೆದು ತೀರ್ಮಾನಿಸುವುದಾಗಿ ತಿಳಿಸಿದರು.

ಇಂದಿನಿಂದ ಆರಂಭವಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಆ.15ರವರೆಗೆ ನಡೆಯಲಿದ್ದು, ಲಕ್ಷಾಂತರ ಮಂದಿ ಆಗಮಿಸುವ ಸಾಧ್ಯತೆ ಇದೆ ಎಂದರು. ತೋಟಗಾರಿಕೆ ಇಲಾಖೆ ಸಚಿವರಾದ ಮುನಿರತ್ನ ಹಾಗೂ ಇತರ ಅಧಿಕಾರಿಗಳು ಬಹಳ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸಿದರು. ಇದಕ್ಕಾಗಿ ನಾನು ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ಲಾಲ್‍ಬಾಗ್‍ನಲ್ಲಿ ಈ ಬಾರಿ ವಿಶೇಷವಾಗಿ ನಿರ್ಮಿಸಿರುವ ವರನಟ ಡಾ.ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಅವರ ಪುಷ್ಪಾಲಂಕೃತ ಪ್ರತಿಮೆಗಳಿಗೆ ಸಿಎಂ ಬೊಮ್ಮಾಯಿ, ಸಚಿವ ಮುನಿರತ್ನ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಅಶ್ವಿನಿ ಪುನೀತ್‍ರಾಜ್‍ಕುಮಾರ್ ಸೇರಿದಂತೆ ಮತ್ತಿತರರು ಪುಷ್ಪಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ಕೊಟ್ಟರು.

Articles You Might Like

Share This Article