ಬೆಂಗಳೂರು, ಸೆ.3- ನಟ ವಿಷ್ಣುವರ್ಧನ್ ಸಾರಕದ ಭೂ ವಿವಾದ ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಕುರಿತಂತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಅಳಿಯ ಹಾಗೂ ನಟ ಅನಿರುದ್ಧ ಅವರೊಂದಿಗೆ ಇಂದು ಬೆಳಗ್ಗೆ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಭಾರತಿವಿಷ್ಣುವರ್ಧನ್ ಹಲವು ಮನವಿಗಳನ್ನು ಮಾಡಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ನಡೆದಿತ್ತು. ಆದರೆ ರಿಯಲ್ ಎಸ್ಟೇಟ್ ವ್ಯವಹಾರದ ಕಾರಣಕ್ಕಾಗಿ ವಿಷ್ಣುವರ್ಧನ್ ಅವರ ಪುಣ್ಯಭೂಮಿಯಲ್ಲಿ ನಿರ್ಮಿಸಲಾಗಿದ್ದ ಸಾರಕವನ್ನು ರಾತ್ರೋರಾತ್ರಿ ಕೆಲವರು ನೆಲಸಮಗೊಳಿಸಿದ್ದರು. ಇದು ವಿಷ್ಣುವರ್ಧನ್ ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟಿಸಿತ್ತು.
ಅನಂತರದ ಬೆಳವಣಿಗೆಯಲ್ಲಿ ಈ ಹಿಂದೆ ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ ಸರ್ಕಾರ ಹಿರಿಯ ನಟ ಬಾಲಕೃಷ್ಣ ಅವರಿಗೆ 20 ಎಕರೆ ಭೂಮಿಯನ್ನು ನೀಡಿತ್ತು. ಆದರೆ ಸ್ಟುಡಿಯೋ ನಿರ್ಮಾಣದ ಉದ್ದೇಶ ಸಾಕಾರಗೊಂಡಿಲ್ಲ ಬದಲಾಗಿ, ಬಾಲಣ್ಣ ಅವರ ನಂತರ ಕುಟುಂಬದ ಸದಸ್ಯರು ಸದರಿ ಭೂಮಿಯನ್ನು ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಪರಭಾರೆ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ.
ಭೂಮಿ ಅರಣ್ಯ ಇಲಾಖೆಗೆ ಸೇರಿದ್ದಾಗಿದ್ದು, ಕೂಡಲೇ ಸರ್ಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಭೂಮಿಯಲ್ಲಿ 10 ಗುಂಟೆಯನ್ನು ವಿಷ್ಣುವರ್ಧನ್ ಸಾರಕಕ್ಕೆ ಮೀಸಲಿಡುವಂತೆ ಭಾರತಿವಿಷ್ಣುವರ್ಧನ್ ಮತ್ತು ಅನಿರುದ್ಧ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ. ವಿಷ್ಣುವರ್ಧನ್ ಅವರ ಸಾರಕಕ್ಕಾಗಿ ಈಗಾಗಲೇ ಮೈಸೂರಿನಲ್ಲಿ ಜಮೀನು ಮೀಸಲಿಡಲಾಗಿದೆ. ಬೆಂಗಳೂರಿನಲ್ಲೂ ಸಾರಕ ನಿರ್ಮಿಸುವುದರಿಂದ ಗೊಂದಲಗಳಾಗಬಹುದು ಎಂಬ ಚರ್ಚೆಗಳಿವೆ.
ಜೊತೆಗೆ ಇದೇ ತಿಂಗಳ 18ರಂದು ವಿಷ್ಣುವರ್ಧನ್ ಅವರ ಜನ ದಿನಾಚರಣೆಯಿದ್ದು, ಆ ವೇಳೆಗೆ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರಾದ ಜಯಮಾಲ, ಮಾಳವಿಕ ಅವಿನಾಶ್, ಶೃತಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧರಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡುವ ನಿಟ್ಟಿನಲ್ಲಿ ಭಾರತಿವಿಷ್ಣುವರ್ಧನ್ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಂಗೆ ಮಾತನಾಡಿದ ಭಾರತಿವಿಷ್ಣುವರ್ಧನ್, ಅಭಿಮಾನಿಗಳಿಗಾಗಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ರವರ ಸಾರಕಕ್ಕೆ ಜಾಗ ಕೇಳಿದ್ದೇವೆ. ಅದಕ್ಕೆ ಮುಖ್ಯಮಂತ್ರಿಯವರು ಸಕಾರಾತಕವಾಗಿ ಸ್ಪಂದಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಕೊಡಿ ಎಂದು ನಾನು ಕೇಳಲ್ಲ. ಆದರೆ ಅಭಿಮಾನಿಗಳು ಕೇಳುತ್ತಿದ್ದಾರೆ. ಅವರಿಗಾಗಿ ಕರ್ನಾಟಕ ರತ್ನ ಕೊಡಬೇಕಿದೆ.ಇದೇ 18ರಂದು ವಿಷ್ಣುರವರ ಹುಟ್ಟು ಹಬ್ಬವಿದ್ದು, ಆ ವೇಳೆಗೆ ಸಾರಕದ ಜಾಗಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ.ಇದೇ ವೇಳಿ ಮಾತನಾಡಿದ ನಟ ಅನಿರುದ್ಧ, ಅಭಿಮಾನ್ ಸ್ಟುಡಿಯೋ ದಲ್ಲಿರುವ ಹತ್ತು ಗುಂಟೆ ಜಾಗಕ್ಕಾಗಿ ಮನವಿ ಮಾಡಿದ್ದೇವೆ. ಆ ಜಾಗದಲ್ಲಿ ಮಂಟಪ ನಿರ್ಮಿಸಲು ಅನುಮತಿ ಕೊಡಿ ಎಂದು ಕೇಳಿರುವುದಾಗಿ ಹೇಳಿದರು.
ಹಿಂದೆ ಅಲ್ಲಿ ನಾವೇ ಮಂಟಪವನ್ನು ನಾವೇ ಮಂಟಪವನ್ನು ನಿರ್ಮಾಣ ಮಾಡಿದ್ದೆವು. ಈಗಲೂ ಜಾಗ ಕೊಟ್ಟರೆ ನಾವೇ ಮಂಟಪ ಕಟ್ಟಿಕೊಳ್ಳುತ್ತೇವೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ ಅಂಜುಮ್ ಪರ್ವೇಜ್ ಜೊತೆಗೂ ಮುಖ್ಯಮಂತ್ರಿ ಮಾತನ್ನಾಡಿದ್ದಾರೆ. ಅವರು ಕೂಡ ಸಕಾರಾತಕ ವಾಗಿ ಸ್ಪಂದಿಸಿದ್ದಾರೆ. ಸೆಪ್ಟೆಂಬರ್ 18ರೊಳಗೆ ಜಾಗಕ್ಕೆ ಅನುಮತಿ ಸಿಗಬಹುದು. ನಾಳೆಯ ಸಚಿವ ಸಂಪುಟಸಭೆಯಲ್ಲಿ ಕರ್ನಾಟಕ ರತ್ನದ ಬಗ್ಗೆ ಸಿಎಂ ಚರ್ಚೆ ಮಾಡುವುದಾಗಿ ಹೇಳಿದ್ದು, ಬಹುತೇಕ ಕರ್ನಾಟಕ ರತ್ನ ಘೋಷಣೆ ಯಾಗುವ ಸಾಧ್ಯತೆ ಇದೆ ಎಂದರು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕ ಕೆ.ವೈ.ನಂಜೇಗೌಡ ಮುಂತಾದವರು ಇದ್ದರು.
- ಸಾಹಸಸಿಂಹ ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಸಾಧ್ಯತೆ..?
- ಬೆಂಗಳೂರಲ್ಲಿ ಸಂಭವಿಸಿದ ನಾಲ್ಕು ಪ್ರತ್ಯೇಕ ಅಪಘಾತ ಮತ್ತು ರೋಡ್ ರೇಜ್ ಪ್ರಕರಣಗಳಲ್ಲಿ ನಾಲ್ವರ ಸಾವು
- ನಾಲ್ವರು ಅಂತಾರಾಜ್ಯ ಆರೋಪಿಗಳ ಸೆರೆ : 10.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಸೌಜನ್ಯ ಕೇಸ್ : ಕ್ಲೀನ್ಚಿಟ್ ಪಡೆದಿದ್ದ ಆರೋಪಿಗಳನ್ನು ಪುನಃ ತನಿಖೆಗೆ ಒಳಪಡಿಸಿದ ಎಸ್ಐಟಿ
- ಅತ್ಯಾಧುನಿಕ ಶಸ್ತ್ರಾಸ್ತ್ರ ಪ್ರದರ್ಶಿಸಿದ ಚೀನಾ, ಸಾಕ್ಷಿಯಾದ ಪುಟಿನ್ ಮತ್ತು ಕಿಮ್