ಕನ್ನಡ ರಾಜ್ಯೋತ್ಸವದಂದು ಅಪ್ಪುಗೆ ಕರ್ನಾಟಕ ರತ್ನ ಪ್ರದಾನ

Social Share

ಬೆಂಗಳೂರು,ಅ.20- ಅತ್ಯಲ್ಪ ಕಾಲದಲ್ಲಿ ಕನ್ನಡಿಗರ ಹೃದಯ ಗೆದ್ದು ಎಲ್ಲೆಡೆ ಮನೆ ಮಾತಾಗಿ ಅಷ್ಟೇ ಬೇಗನೆ ಕಣ್ಮರೆಯಾದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಕನ್ನಡ ರಾಜ್ಯೋತ್ಸವ ದಿನದಂದು ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ನಾಡು-ನುಡಿ-ಭಾಷೆ-ಇತಿಹಾಸ-ಸಾಹಿತ್ಯ-ಚಿತ್ರರಂಗ- ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಮಹನೀಯರಿಗೆ ಮಾತ್ರ ಈ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಈವರೆಗೂ ರಾಷ್ಟ್ರಕವಿ ಕುವೆಂಪು, ವರನಟ ಡಾ.ರಾಜ್‍ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಸುಮಾರು ಎರಡು ದಶಕಗಳ ನಂತರ ಪುನೀತ್ ರಾಜ್‍ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಯುಕೆ ಪ್ರಧಾನಿ ಲಿಜ್‍ಟ್ರಸ್ ಸರ್ಕಾರದ ಮತೊಬ್ಬ ಸಚಿವೆ ರಾಜೀನಾಮೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳು ಹಾಗೂ ಪೂರ್ವ ಸಿದ್ಧತೆ ಕುರಿತಂತೆ ಸಭೆ ನಡೆಸಿದ್ದಾರೆ. ನವೆಂಬರ್ 1ರಂದು ವಿಧಾನಸೌಧ ಮುಂಭಾಗ ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪುನೀತ್‍ರಾಜ್‍ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದು, ಡಾ.ರಾಜ್‍ಕುಮಾರ್ ಕುಟುಂಬದ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ ವೇಳೆ ಡಾ.ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಸಭೆ ಬಹಳ ಮಹತ್ವ ಪಡೆದುಕೊಳ್ಳಲಿದೆ.

ತೆರಿಗೆ ಯೋಜನೆ ವಿರೋಧಿಸಿ ನ್ಯೂಜಿಲೆಂಡ್‍ನಾದ್ಯಂತ ರೈತರ ಪ್ರತಿಭಟನೆ

2021ರ ಅ.29 ರಂದು ಬೆಳಗ್ಗೆ ಕನ್ನಡ ಚಿತ್ರರಂಗದ ಖ್ಯಾತ ನಟ, ಅಭಿಮಾನಿಗಳ ನೆಚ್ಚಿನ ಅಪ್ಪು ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು. ಆದರೆ, ಇನ್ನೂ ಕೂಡ ಈ ಘಟನೆಯನ್ನು ಅರಗಿಸಿಕೊಳ್ಳಲು ಕನ್ನಡಿರಿಗೆ ಆಗುತ್ತಿಲ್ಲ. ಬಹುಶಃ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಮಿಡಿದಷ್ಟು ಮನಗಳು ಇಡೀ ದೇಶದಲ್ಲಿ ಯಾರ ಸಾವಿಗೂ ಮಿಡಿಯಲಿಲ್ಲ.

Articles You Might Like

Share This Article