ರಾಹುಲ್ ಗಾಂಧಿಯವರಿಗೆ ಕರ್ನಾಟಕ ಬಿಡುವ ಮುನ್ನ ಇಂಧನ ತುಂಬಿಸಿಕೊಳ್ಳಿ : ಬಿಜೆಪಿ ಟ್ವೀಟ್

Social Share

ಬೆಂಗಳೂರು,ಅ.15- ಕರ್ನಾಟಕಕ್ಕೆ ವಿದಾಯ ಹೇಳುವ ಮುನ್ನ ರಾಹುಲ್ ಗಾಂಧಿಯವರಿಗೆ ಮತ್ತೊಮ್ಮೆ ಎಚ್ಚರಿಸುತ್ತಿದ್ದೇವೆ. ಮುಂದಿನ ಯಾತ್ರೆಗೆ ಇಲ್ಲಿಯೇ ಇಂಧನ ತುಂಬಿಸಿಕೊಳ್ಳಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಡೀಸೆಲ್ ದರ ಆಂಧ್ರಪ್ರದೇಶದಲ್ಲಿ 99.15 ರೂ, ತೆಲಂಗಾಣ 97.82 ರೂ. ರಾಜಸ್ಥಾನ 93.72 ಮತ್ತು ಕರ್ನಾಟಕ 87.94, ಬಿಜೆಪಿಯೇತರ ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ತಾಗಬಹುದು ಎಂದು ಕುಹುಕವಾಡಿದೆ.

ಇಂದಿರಾಗಾಂಧಿ ಮಂಗಳೂರಿನಲ್ಲಿ ಸ್ರ್ಪಧಿಸಿದಾಗ ಅವರ ಗೆಲುವಿನಲ್ಲಿ ಮೋಟಮ್ಮ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅದೇ ಮೋಟಮ್ಮ ಅವರನ್ನು ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ನಿಕೃಷ್ಟವಾಗಿ ನಡೆಸಿಕೊಂಡರು. ನೀವು ಮರೆತಿರಬಹುದು. ರಾಜ್ಯದ ಜನತೆ ಮರೆತಿಲ್ಲ ಎಂದು ಎಚ್ಚರಿಸಿದೆ.

ರಾಜ್ಯದ ಪ್ರಬಲ ವೀರಶೈವ ಲಿಂಗಾಯತ ನಾಯಕ, ಮುಖ್ಯಮಂತ್ರಿಯಾಗಿದ್ದ ವೀರೇಂದ್ರ ಪಾಟೀಲರನ್ನು ಅತ್ಯಂತ ಅಮಾನವೀಯವಾಗಿ ರಾಜೀವ್ ಗಾಂಧಿ ಪದಚ್ಯುತಗೊಳಿಸಿದ್ದರು. ರಾಹುಲ್ ಗಾಂಧಿ ಅವರೇ, ತಮ್ಮದೇ ಪಕ್ಷದ ವೀರಶೈವ ಲಿಂಗಾಯತ ನಾಯಕನೊಬ್ಬನನ್ನು ರಾಜಕೀಯವಾಗಿ ತುಳಿದ ಘಟನೆಯನ್ನು ಕರ್ನಾಟಕ ಬಿಡುವ ಮುನ್ನ ಒಮ್ಮೆ ನೆನಪಿಸಿಕೊಳ್ಳಿ ಎಂದಿದೆ.

ಮತಾಂತರ ನಿಯಂತ್ರಣ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಎಫ್‍ಐಆರ್ ದಾಖಲಾಗಿದೆ. ಮತಾಂತರಿಗಳು ತಮ್ಮ ಓಟ್ ಬ್ಯಾಂಕ್ ಎಂದು ಕಾಂಗ್ರೆಸ್ ಅಂದು ಈ ಕಾಯ್ದೆಯನ್ನು ವಿರೋಧಿಸಿದ್ದೇ? ಎಂದು ತರಾಟೆಗೆ ತೆಗೆದುಕೊಂಡಿದೆ.

Articles You Might Like

Share This Article